ಬೆಂಗಳೂರು : ಕೊರೊನಾ ಸೋಂಕಿಗೆ ತುತ್ತಾಗಿ ಅಪೋಲೊ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರನ್ನ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭೇಟಿ ಮಾಡಿ ಯೋಗಕ್ಷೇಮ ವಿಚಾರಿಸಿದರು.
ಇಂದು ಸಚಿವ ಸುಧಾಕರ್ ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೋಲೊ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು.
ನಂತರ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರ ವಾರ್ಡ್‌ಗೆ ತೆರಳಿ ಅವರ ಆರೋಗ್ಯ ವಿಚಾರಿಸಿ ಕೆಲ ಕಾಲ ಮಾತುಕತೆ ನಡೆಸಿದರು. ಇದೇ ಸಂದರ್ಭದಲ್ಲಿ ಸಚಿವರು ಹೆಚ್‌ಡಿಕೆ ಶೀಘ್ರ ಗುಣಮುಖರಾಗುವಂತೆ ಹಾರೈಸಿದರು.