ETV Bharat / state

ಪಡಿತರ ಚೀಟಿ ಹೊಂದಿದ ಎಲ್ಲ ಮನೆಗೂ ವಿದ್ಯುತ್ ಸಂಪರ್ಕ.. ಬಜೆಟ್ ಘೋಷಣೆ ಅನುಷ್ಠಾನಕ್ಕೆ ಆದ್ಯತೆ : ಇಂಧನ ಸಚಿವ

ಕೃಷಿ ಮತ್ತು ಕೈಗಾರಿಕೆಗಳಿಗೆ ಮತ್ತು ಎಲ್ಲಾ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ನಮ್ಮ ಆದ್ಯತೆಯಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು..

minister-sunil-kumar-instructs-officials-to-power-supply
ವಿದ್ಯುತ್ ಸರಬರಾಜು ಕಂಪನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಪರಾಮರ್ಶೆ ಸಭೆ
author img

By

Published : Aug 18, 2021, 5:18 PM IST

ಬೆಂಗಳೂರು : ಪಡಿತರ ಚೀಟಿ ಇರುವ ಎಲ್ಲ ಮನೆಗಳಿಗೂ ವಿದ್ಯುತ್ ಸಂಪರ್ಕ ನೀಡುವುದನ್ನೂ ಒಳಗೊಂಡಂತೆ ಆಯ-ವ್ಯಯದಲ್ಲಿ ಘೋಷಿಸಿರುವ ಎಲ್ಲಾ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಆದ್ಯತೆ ನೀಡಬೇಕು ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಸೂಚನೆ ನೀಡಿದ್ದಾರೆ.

ಕಾವೇರಿ ಭವನದಲ್ಲಿರುವ ಕೆಪಿಟಿಸಿಎಲ್ ಕಚೇರಿಯ ಸಮ್ಮೇಳನ ಸಭಾಂಗಣದಲ್ಲಿ ಇಂದು ಬೆಳಗ್ಗೆಯಿಂದ ಇಂಧನ ಇಲಾಖೆ, ವಿದ್ಯುತ್ ಸರಬರಾಜು ಕಂಪನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಪರಾಮರ್ಶೆ ಸಭೆ ನಡೆಸಿ ಮಾತನಾಡಿದರು.

ಬಜೆಟ್​ನಲ್ಲಿ ಘೋಷಿಸಿರುವ ಕಾರ್ಯಕ್ರಮಗಳು ಮತ್ತು ಕೇಂದ್ರ ಸರ್ಕಾರದ ಸಹಯೋಗದ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಬೇಕು. ಇದರಲ್ಲಿ ನಾನು ಯಾವುದೇ ಕಾರಣಕ್ಕೂ ರಾಜಿಯಾಗುವುದಿಲ್ಲ ಎಂದು ಅವರು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

minister-sunil-kumar-instructs-officials-to-power-supply
ವಿದ್ಯುತ್ ಸರಬರಾಜು ಕಂಪನಿಗಳು ಮತ್ತು ಅದರ ಅಂಗ ಸಂಸ್ಥೆಗಳ ಕಾರ್ಯ ನಿರ್ವಹಣೆಯ ಪರಾಮರ್ಶೆ ಸಭೆ

ಟ್ರಾನ್ಸ್​ಫಾರ್ಮ್​ಗಳ ದುರಸ್ಥಿ, ಬದಲಾವಣೆ ಕುರಿತಂತೆ ಬಹಳಷ್ಟು ದೂರುಗಳು ಬರುತ್ತವೆ. ಅವುಗಳ ಬಗ್ಗೆ ತಕ್ಷಣವೇ ಕ್ರಮಕೈಗೊಳ್ಳಬೇಕು. ಅವುಗಳನ್ನು ಬದಲಾವಣೆ ಮಾಡಲು ವಿಳಂಬ ಮಾಡಬಾರದು. ಕೇಂದ್ರ ಸರ್ಕಾರಕ್ಕೆ ರಾಜ್ಯದಿಂದ ಸಲ್ಲಿಕೆಯಾಗಬೇಕಾಗಿರುವ ಪ್ರಸ್ತಾವನೆಗಳನ್ನೂ ಸಹ ಯಾವುದೇ ವಿಳಂಬ ಮಾಡದೇ ನಿಗದಿತ ಕಾಲಾವಧಿಯೊಳಗೆ ಸಲ್ಲಿಸಲು ಕ್ರಮಕೈಗೊಳ್ಳಬೇಕೆಂದು ಅವರು ಸೂಚಿಸಿದರು.

ನಷ್ಟ ತಡೆಯಲು ಕಾರ್ಯಯೋಜನೆ : ಗಂಗಾ ಕಲ್ಯಾಣ ಯೋಜನೆಯಡಿ ವಿದ್ಯುತ್ ಸಂಪರ್ಕ ನೀಡುವ ಕೆಲಸವೂ ಸಹ ಕಾಲಮಿತಿಯೊಳಗೆ ಮತ್ತು ಪರಿಣಾಮಕಾರಿಯಾಗಿ ಆಗಬೇಕು. ಅನಧಿಕೃತ ಸಂಪರ್ಕ, ವಿದ್ಯುತ್ ಸೋರಿಕೆ, ವಿದ್ಯುತ್ ಸಂಪರ್ಕ ನೀಡುವಲ್ಲಿ ವಿಳಂಬ, ಮೀಟರ್​ಗಳ ಅಳವಡಿಕೆಯಲ್ಲಿ ಆಗುವ ವಿಳಂಬ ಇತ್ಯಾದಿ ಕಾರಣಗಳಿಂದ ಇಂಧನ ಸರಬರಾಜು ಕಂಪನಿಗಳಿಗಾಗುವ ನಷ್ಟ ತಡೆಯಲು ಕಾರ್ಯಯೋಜನೆ ರೂಪಿಸಬೇಕು. ಅದನ್ನು ಅನುಷ್ಠಾನಗೊಳಿಸಲು ಎಲ್ಲಾ ವಿಧವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಅವರು ಹೇಳಿದರು.

ಕೃಷಿ ಮತ್ತು ಕೈಗಾರಿಕೆಗಳಿಗೆ ಮತ್ತು ಎಲ್ಲಾ ವರ್ಗದ ಗ್ರಾಹಕರಿಗೆ ಗುಣಮಟ್ಟದ ವಿದ್ಯುತ್ ಪೂರೈಕೆ ಹಾಗೂ ಸಮರ್ಪಕ ವಿದ್ಯುತ್ ಸರಬರಾಜು ನಮ್ಮ ಆದ್ಯತೆಯಾಗಬೇಕು ಎಂದು ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು.

ವಿದ್ಯುತ್ ರೀಚಾರ್ಜ್ ಕೇಂದ್ರಗಳ ಆರಂಭಕ್ಕೆ ಆದ್ಯತೆ : ಚಾಲಿತ ವಾಹನಗಳು ಹೆಚ್ಚಾಗಿ ಬರುತ್ತಿರುವುದರಿಂದ ವಿದ್ಯುತ್ ವಾಹನ ಚಾರ್ಜಿಂಗ್ ಕೇಂದ್ರಗಳನ್ನು ಆರಂಭಿಸಲು ಆದ್ಯತೆ ನೀಡಬೇಕು. ಈಗಾಗಲೇ ಗುರುತಿಸಿರುವ ಸ್ಥಳಗಳಲ್ಲಿ ವಿದ್ಯುತ್ ರೀಚಾರ್ಜಿಂಗ್ ಮಾಡುವ ಕಾರ್ಯಕ್ಕೆ ವೇಗ ನೀಡಬೇಕೆಂದು ಅವರು ಸೂಚಿಸಿದರು.

ಗ್ರಾಹಕ ಸಂಬಂಧಿ ಸಮಸ್ಯೆಗಳ ಪರಿಹಾರ, ಹೊಸ ವಿದ್ಯುತ್ ಸಂಪರ್ಕ ನೀಡಿಕೆ ಸೇರಿದಂತೆ ವಿವಿಧ ಸೇವೆಗಳನ್ನು ಒಂದೇ ಕಡೆ 24 ಗಂಟೆಯೊಳಗೆ ಒದಗಿಸುವ ಫಾಸ್ಟ್ಟ್ರಾಕ್ ಸೆಲ್ ಅನ್ನು ಕೂಡಲೇ ಆರಂಭಿಸಲು ಆದೇಶಿಸಿದರು.

10 ಸಾವಿರ ನಗದು ಬಹುಮಾನ : ಸಭೆಯಲ್ಲಿ ಮುಂದಿನ 100 ದಿನಗಳ ಕಾಲಮಿತಿಯಲ್ಲಿ ಏನೆಲ್ಲಾ ಯೋಜನೆಗಳು ಅನುಷ್ಠಾನಗೊಳಿಸಬಹುದು ಎಂಬ ಬಗ್ಗೆ ಪರಾಮರ್ಶೆ ಕೈಗೊಳ್ಳಲಾಯಿತು. ಸಭೆಯಲ್ಲಿ ಕೆಜಿಎಫ್ ಉಪವಿಭಾಗಕ್ಕೆ ಜುಲೈ ತಿಂಗಳ ಅತ್ಯುತ್ತಮ ಕಾರ್ಯ ನಿರ್ವಹಣೆಗಾಗಿ ಅಲ್ಲಿನ ಸಹಾಯಕ ಇಂಜಿನಿಯರ್ ಹೇಮಲತಾ ಅವರಿಗೆ ಪ್ರಶಸ್ತಿ ಫಲಕ ಮತ್ತು 10 ಸಾವಿರ ರೂ. ನಗದು ಬಹುಮಾನವನ್ನು ಸಚಿವರು ನೀಡಿದರು.

ಓದಿ : ಅತ್ಯಂತ ಹಳೆಯ ಪಕ್ಷಕ್ಕೆ ಸಂಸತ್ತಿನಲ್ಲಿ ಹೇಗೆ ನಡೆದುಕೊಳ್ಳಬೇಕೆಂಬುದೇ ಗೊತ್ತಿಲ್ಲ: ಕಾಂಗ್ರೆಸ್ ವಿರುದ್ಧ ಕಾರಜೋಳ ಕಿಡಿ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.