ETV Bharat / state

ಹಳ್ಳಿಗಳ ವಿದ್ಯಾರ್ಥಿಗಳ ಕಲಿಕೆಗೆ ನೆಟ್​ವರ್ಕ್ ಸಮಸ್ಯೆ : ಶೀಘ್ರ ಪರಿಹರಿಸುವಂತೆ ಶಿಕ್ಷಣ ಸಚಿವರ ಸೂಚನೆ - ಡಿಸಿಎಂ ಅಶ್ವತ್ಥ್ ನಾರಾಯಣ್

ರಾಜ್ಯದಲ್ಲಿರುವ 5766 ಗ್ರಾಮ ಪಂಚಾಯತ್‌ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್​ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಸಲಾಗುತ್ತಿದೆ..

bengaluru
ಶಿಕ್ಷಣ ಸಚಿವರ ಸಭೆ
author img

By

Published : Jul 12, 2021, 1:57 PM IST

ಬೆಂಗಳೂರು : ರಾಜ್ಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ ಭೌತಿಕ ತರಗತಿಗಳು ಆರಂಭವಾಗಿಲ್ಲ. ಹೀಗಾಗಿ, ಸದ್ಯ ಆನ್​ಲೈನ್ ಪಾಠವೇ ಮುಂದುವರೆದಿದೆ. ಆದರೆ, ಬದಲಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಗ್ರಾಮೀಣ ಪ್ರದೇಶದ ಮಕ್ಕಳ ಕಲಿಕೆಗೆ ಅನುಕೂಲವಾಗುವಂತೆ ಮೊಬೈಲ್ ನೆಟ್​ವರ್ಕ್ ಹಾಗೂ ಇಂಟರ್ನೆಟ್ ಸಮಸ್ಯೆ ಪರಿಹರಿಸುವ ಸಂಬಂಧ ಇಂದು ಶಿಕ್ಷಣ ಸಚಿವ ಸುರೇಶ್‌ಕುಮಾರ್ ರಾಜ್ಯದ ಮುಖ್ಯಕಾರ್ಯದರ್ಶಿ ಜೊತೆ ಸಭೆ ನಡೆಸಿದರು.

ಈಗಾಗಲೇ ರಾಜ್ಯದ ಮಾಹಿತಿ ತಂತ್ರಜ್ಞಾನ ಸಚಿವರಾಗಿರುವ ಅಶ್ವತ್ಥ್ ನಾರಾಯಣ್ ಮತ್ತು ಮುಖ್ಯ ಕಾರ್ಯದರ್ಶಿಯರ ಸೂಚನೆಯಂತೆ ರಾಜ್ಯದಲ್ಲಿ ಮೊಬೈಲ್ ನೆಟ್​ವರ್ಕ್ ಪೂರೈಕೆದಾರ ಕಂಪನಿಗಳೊಂದಿಗೆ ಮಾಹಿತಿ ತಂತ್ರಜ್ಞಾನ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿಯವರು ಚರ್ಚಿಸಿದ್ದು, ಅವರೆಲ್ಲಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

ಮಳೆಗಾಲ ಕಾರಣಕ್ಕೆ ರಾಜ್ಯದ ಮಲೆನಾಡು ಪ್ರದೇಶ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಮೊಬೈಲ್ ನೆಟ್​ವರ್ಕ್ ಸಮಸ್ಯೆಯಿಂದಾಗಿ ಮಕ್ಕಳ ಪರ್ಯಾಯ ಬೋಧನಾ ಕ್ರಮಗಳಾದ ಆನ್​ಲೈನ್ ಬೋಧನಾ ಕ್ರಮ ಇಲ್ಲವೇ ದೂರದರ್ಶನ ಚಂದನ ಪಾಠಗಳಿಗೆ ತೊಂದರೆಯಾಗಿರುವುದರಿಂದ ಈ ಕುರಿತು ತ್ವರಿತವಾಗಿ ಗಮನ ಹರಿಸುವುದರ ಅಗತ್ಯವಿದೆ. ಹೀಗಾಗಿ, ಮಕ್ಕಳ ಬೋಧನಾ ವಿಧಾನದ ಗುಣಮಟ್ಟವನ್ನು ಕಾಪಾಡಬೇಕಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಗ್ರಾಮ ಪಂಚಾಯತ್‌ ಗ್ರಂಥಾಲಯಗಳಲ್ಲಿ ಪಾಠ ವ್ಯವಸ್ಥೆಗೆ ಚಿಂತನೆ : ಡಿಜಿಟಲ್ ಶಿಕ್ಷಣ ಇಲ್ಲವೇ ಆನ್​ಲೈನ್​ನಂತಹ ಪರ್ಯಾಯ ವ್ಯವಸ್ಥೆಯ ಮೂಲಕವೇ ಪ್ರಸ್ತುತ ಪರಿಸ್ಥಿತಿಯಲ್ಲಿ ಮಕ್ಕಳನ್ನು ತಲುಪಬೇಕಾದೆ. ಈ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ ಗ್ರಾಮ ಪಂಚಾಯತ್‌ ಗ್ರಂಥಾಲಯಗಳಲ್ಲಿಯೂ ಈ ಸೌಲಭ್ಯ ವಂಚಿತ ಮಕ್ಕಳಿಗೆ ಶಿಕ್ಷಣ ಒದಗಿಸಲು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿರುವ 5766 ಗ್ರಾಮ ಪಂಚಾಯತ್‌ ಗ್ರಂಥಾಲಯಗಳನ್ನು ಬಳಸಿಕೊಂಡು ಅಲ್ಲಿ ಡಿವೈಸರ್ ಅಳವಡಿಸುವ ಮೂಲಕ ದೂರದರ್ಶನ ಇಲ್ಲವೇ ಮೊಬೈಲ್ ವಂಚಿತ ಮಕ್ಕಳಿಗೆ ಆನ್​ಲೈನ್ ಶಿಕ್ಷಣ ಒದಗಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಚರ್ಚೆ ನಡೆಸಲಾಗುತ್ತಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.