ETV Bharat / state

ಕರ್ನಾಟಕದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆ: ಸಚಿವ ಸುರೇಶ್ ಕುಮಾರ್ - ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಿದ ಸುರೇಶ್ ಕುಮಾರ್

ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗೆ ಅನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ..

minister-suresh-kumar-inaugurates-digital-library
ತಲಘಟ್ಟಪುರ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಿದ ಶಿಕ್ಷಣ ಸಚಿವ
author img

By

Published : Jul 13, 2021, 5:37 PM IST

ಬೆಂಗಳೂರು: ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನು ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಇಂದು ತಲಘಟ್ಟಪುರ ಗ್ರಂಥಾಲಯದ ನೂತನ ಕಟ್ಟಡಕ್ಕೆ ಶಿಲಾನ್ಯಾಸ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶಿಕ್ಷಣ ಸಚಿವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಜೊತೆಗೆ ಮಹಾನಗರ ಪಾಲಿಕೆ ಮಾಜಿ ಸದಸ್ಯ ಆರ್ಯ ಶ್ರೀನಿವಾಸ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರಾಜೀವ್‌, ಗ್ರಂಥಾಲಯ ಇಲಾಖೆ ನಿರ್ದೇಶಕ ಡಾ. ಸತೀಶ ಕುಮಾರ ಎಸ್. ಹೊಸಮನಿ, ಉಪನಿರ್ದೇಶಕಿ ಸರಸ್ವತಿ ಸೇರಿದಂತೆ ಗ್ರಂಥಾಲಯ ಇಲಾಖೆ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

ಉದ್ಘಾಟನೆ ನಂತರ ಮಾತನಾಡಿದ ಅವರು, ನಾನು ಸಚಿವನಾಗಿ ಅಧಿಕಾರ ವಹಿಸಿಕೊಂಡ ನಂತರ ಇಂದಿನ ಅವಶ್ಯಕತೆಗಳಿಗನುಗುಣವಾಗಿ ಡಿಜಿಟಲ್ ಗ್ರಂಥಾಲಯಗಳನ್ನು ರಾಜ್ಯಾದ್ಯಂತ ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಇಡೀ ದೇಶದಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ವ್ಯವಸ್ಥೆಯನ್ನ ಹೊಂದಿದ ಮೊದಲ ರಾಜ್ಯ ಕರ್ನಾಟಕ ಎಂದರು.

83 ಲಕ್ಷ ಜನ ಸದಸ್ಯತ್ವ: ಒಂದು ವರ್ಷದ ಅವಧಿಯಲ್ಲಿ ರಾಜ್ಯದೆಲ್ಲೆಡೆ 372 ಡಿಜಿಟಲ್ ಗ್ರಂಥಾಲಯಗಳು ಕಾರ್ಯಾರಂಭ ಮಾಡಿದ್ದು, ಇಡೀ ದೇಶದಲ್ಲಿ ಇದು ಅಭೂತ ಪ್ರಯತ್ನವಾಗಿದೆ. ಕೋವಿಡ್ ಸೃಷ್ಟಿಸಿದ ಸಾಮಾಜಿಕ ಪರಿಸ್ಥಿತಿಯ ಹಿನ್ನೆಲೆಯಲ್ಲಿ ರಾಷ್ಟ್ರದಲ್ಲಿಯೇ ಮೊದಲ ಉಪಕ್ರಮವಾಗಿ ಕರ್ನಾಟಕ ರಾಜ್ಯದ ಸಾರ್ವಜನಿಕ ಗ್ರಂಥಾಲಯ ಇಲಾಖೆ ಡಿಜಿಟಲ್ ಗ್ರಂಥಾಲಯ ಮೊಬೈಲ್ ಆ್ಯಪ್‌ನ್ನು ಲೋಕಾರ್ಪಣೆಗೊಳಿಸಿದ್ದು, ಹದಿನಾರು ಲಕ್ಷಕ್ಕೂ ಮೀರಿದ ಪುಸ್ತಕಗಳು ಮತ್ತು ಇ-ವಿಡಿಯೋ ಕಂಟೆಂಟ್‌ಗಳು ಈ ಆ್ಯಪ್‌ನಲ್ಲಿ ಲಭ್ಯವಿವೆ. ಈ ತನಕ 83 ಲಕ್ಷ ಜನರು ಇದರ ಸದಸ್ಯತ್ವ ಪಡೆದಿದ್ದಾರೆ ಎಂದು ತಿಳಿಸಿದರು.

ಪುಸ್ತಕ ಸಂಸ್ಕೃತಿ ಬೆಳೆಸಲು ರಾಜ್ಯಾದ್ಯಂತ 6856 ಗ್ರಂಥಾಲಯಗಳು ಕಾರ್ಯನಿರ್ವಹಿಸುತ್ತಿದ್ದು, ಇದು ದೇಶದಲ್ಲಿಯೇ ಮಾದರಿ ಗ್ರಂಥಾಲಯ ವ್ಯವಸ್ಥೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಮುಂದಿನ ದಿನಗಳಲ್ಲಿ ಸಾರ್ವಜನಿಕರ ಜ್ಞಾನಾರ್ಜನೆಗೆ ಉಪಯೋಗವಾಗುವಂತೆ ಗ್ರಂಥಾಲಯಗಳಲ್ಲಿ ಅವಶ್ಯಕ ಸೇವೆಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿಜಿಟಲ್ ಲೈಬ್ರರಿ ಸೌಲಭ್ಯವೂ ಲಭ್ಯ: ಈ ನಿವೇಶನದಲ್ಲಿ 99 ಲಕ್ಷ ರೂ. ವೆಚ್ಚದಲ್ಲಿ ಸ್ಥಳೀಯರಿಗೆ ಅನುಕೂಲವಾಗುವಂತೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲಾಗುವುದು. ಈ ಕಟ್ಟಡವು 3 ಅಂತಸ್ತಿನಿಂದ ಕೂಡಿದ್ದು, ಅದರಲ್ಲಿ ಮಹಿಳೆಯರಿಗೆ, ಮಕ್ಕಳಿಗೆ ಹಿರಿಯ ನಾಗರೀಕರಿಗೆ ಅನುಕೂಲವಾಗುವಂತೆ ವಿವಿಧ ವಿಭಾಗಗಳನ್ನು ಸೃಜಿಸಲಾಗುವುದು. ಗ್ರಂಥಾಲಯದಲ್ಲಿ ವಿಶೇಷ ವಿಭಾಗ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಳ್ಳುವ ಅಭ್ಯರ್ಥಿಗಳಿಗೆ ಪ್ರತ್ಯೇಕ ವಿಭಾಗವಿರಲಿದೆ. ಹಾಗೆಯೇ ಡಿಜಿಟಲ್ ಲೈಬ್ರರಿ ಸೌಲಭ್ಯವೂ ಈ ಗ್ರಂಥಾಲಯದಲ್ಲಿ ದೊರೆಯಲಿದೆ ಎಂದು ಹೇಳಿದರು.

ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ರಂಥಾಲಯ ಇಲಾಖೆಯ ಡಿಜಿಟಲೀಕರಣ ವ್ಯವಸ್ಥೆಯಿಂದಾಗಿ ಮನೆಯಲ್ಲೇ ಕುಳಿತು ಗ್ರಂಥಗಳ ಅಧ್ಯಯನ ಮಾಡುವಂತಹ ವ್ಯವಸ್ಥೆ ರೂಪಿಸಿರುವುದು ಅತ್ಯಂತ ಉಪಯುಕ್ತವಾಗಿದೆ ಎಂದರು.

ಓದಿ: ರಾಜಧಾನಿಯಲ್ಲಿ ಬೆಳ್ಳಂಬೆಳಗ್ಗೆ ವರುಣ ಅಬ್ಬರ : ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.