ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆಗೆ ತಡೆ ಕೋರಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದು ಸಲ್ಲಿಕೆ ಆಗಿದೆ. ಪರೀಕ್ಷೆ ಕುರಿತು ಹೈಕೋರ್ಟ್ನಲ್ಲಿ ನಾಳೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆಗೆ ಬರಲಿದ್ದು ಅದು ಇತ್ಯರ್ಥವಾದ ನಂತರವೇ ಪರೀಕ್ಷೆ ಕುರಿತು ಮುಂದಿನ ವಿವರ ನೀಡಲಾಗುತ್ತದೆ ಅಂತ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಈಗಾಗಲೇ ದಿನಾಂಕಗಳನ್ನು ಘೋಷಣೆ ಮಾಡಿದ್ದೇವೆ. ವಲಸೆ ಕಾರ್ಮಿಕರ ಮಕ್ಕಳಿರುವ ಜಾಗದಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿದೆ. ಪರೀಕ್ಷೆ ನಡೆಸುವ ಕುರಿತಾಗಿ ಹೊಸ ಪ್ರೋಟೋಕಾಲ್ ಮಾಡಿದ್ದೇವೆ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಬಗ್ಗೆ ತೆಗೆದುಕೊಳ್ಳಬಹುದಾಗ ಮತ್ತಷ್ಟು ಮುಂಜಾಗೃತಾ ಕ್ರಮ ಬಗ್ಗೆ ತಿಳಿಸುತ್ತೇವೆ ಎಂದಿದ್ದಾರೆ.
ದ್ವಿತೀಯ ಪಿಯು ಮೌಲ್ಯಮಾಪನ ಆರಂಭ:
ಕೊರೊನಾ ಹಿನ್ನೆಲೆ ದ್ವಿತೀಯ ಪಿಯುಸಿಯ ಕೊನೆಯ ಇಂಗ್ಲಿಷ್ ಪರೀಕ್ಷೆ ನಡೆಯಬೇಕಿದೆ. ಇದನ್ನು ಹೊರತುಪಡಿಸಿ ಈಗಾಗಲೇ ಉಳಿದ ವಿಷಯಗಳ ಮೌಲ್ಯಮಾಪನ ಶುರುವಾಗಿದ್ದು, ಪಿಯುಸಿ ಅರ್ಥಶಾಸ್ತ್ರ ಪತ್ರಿಕೆಯ ಮೌಲ್ಯಮಾಪನ ಶುರುವಾಗಿದೆ. ಮುಂದಿನ ದಿನಗಳಲ್ಲಿ ಉಳಿದ ಪತ್ರಿಕೆಗಳ ಮೌಲ್ಯಮಾಪನ ಮಾಡಲಾಗುತ್ತದೆ ಅಂತ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ..