ಬೆಂಗಳೂರು:ಟಿಪ್ಪು ಜಯಂತಿ ಸಂದರ್ಭದಲ್ಲಿ ಕೊಡಗಿನಲ್ಲಿ ಕುಟ್ಟಪ್ಪ ಹತ್ಯೆಯಾದಾಗಿನಿಂದ ಎಸ್ಡಿಪಿಐ ಮತ್ತು ಪಿಎಫ್ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಒತ್ತಾಯಿಸುತ್ತಲೇ ಇದ್ದೇವೆ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದ್ದಾರೆ.
ವಿಕಾಸಸೌಧದಲ್ಲಿ ಮಾತನಾಡಿದ ಅವರು, ದೇಶದಲ್ಲಿ ಅಶಾಂತಿ ಮೂಡಿಸಲು, ದೇಶದ್ರೋಹ ಕೃತ್ಯಗಳನ್ನು ಎಸಗುವಲ್ಲಿ ಈ ಸಂಘಟನೆಗಳು ಯಾವಾಗಲು ಪ್ರಮುಖ ಪಾತ್ರ ವಹಿಸುತ್ತವೆ. ಇತ್ತೀಚೆಗೆ ಚುನಾವಣೆಗೆ ಸ್ಪರ್ಧಿಸುವ ಸೋಗನ್ನು ಬೇರೆ ಈ ಸಂಘಟನೆಗಳು ಹಾಕುತ್ತಿವೆ ಎಂದರು.
ಈಗ ಹಿಂದೂ ಸಂಘಟನೆಗಳ ಪ್ರಮುಖರ ಹತ್ಯೆಗೆ ಸ್ಕೆಚ್ ಹಾಕಿದ್ದ ಆರು ಮಂದಿಯನ್ನು ಬಂಧನವಾಗಿದೆ. ಇದರ ಆಧಾರದ ಮೇಲೆ ಈ ಸಂಘಟನೆಗಳನ್ನು ನಿಷೇಧಿಸುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.