ETV Bharat / state

ಜನವರಿ.15ಕ್ಕೆ ಜನಸೇವಕ ಯೋಜನೆ ಪುನರಾರಂಭ: ಸಚಿವ ಸುರೇಶ್ ಕುಮಾರ್ - ಜನಸೇವಕ ಯೋಜನೆ

ಬೆಂಗಳೂರು ನಗರ ಸಂಬಂಧಿತ ಕ್ಷೇತ್ರಗಳ ಶಾಸಕರ ಸಭೆ‌ ನಡೆಸಿ ಸಹಕಾರ ಕೋರಿದ ಸಚಿವರು, ಸರ್ಕಾರದ ಈ‌ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

minister suresh kumar
ಸಚಿವ ಸುರೇಶ್ ಕುಮಾರ್
author img

By

Published : Jan 7, 2021, 10:45 PM IST

ಬೆಂಗಳೂರು: ನಾಗರಿಕರ ಮನೆ ಬಾಗಿಲಿಗೆ ಸರ್ಕಾರದ ಸೇವೆಗಳನ್ನು ತಲುಪಿಸುವ ಜನಸೇವಕ ಯೋಜನೆಯನ್ನು ಜನವರಿ 15ಕ್ಕೆ ಬೆಂಗಳೂರಿನ 05 ವಿಧಾನಸಭಾ ಕ್ಷೇತ್ರಗಳಲ್ಲಿ ಮರು ಪ್ರಾರಂಭಿಸಲಾಗುವುದು ಎಂದು ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

minister suresh kumar
ಸಚಿವ ಸುರೇಶ್ ಕುಮಾರ್

ಇಂದು ಬೆಂಗಳೂರು ನಗರ ಸಂಬಂಧಿತ ಕ್ಷೇತ್ರಗಳ ಶಾಸಕರ ಸಭೆ‌ ನಡೆಸಿ ಸಹಕಾರ ಕೋರಿದ ಸಚಿವರು, ಸರ್ಕಾರದ ಈ‌ ಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸುವಲ್ಲಿ ಬದ್ಧತೆಯಿಂದ ಕಾರ್ಯ ನಿರ್ವಹಿಸಬೇಕೆಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಓದಿ: ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿಯಿಂದ ನೋಟಿಸ್

ಈ ಬಾರಿ ಯಶವಂತಪುರ ವಿಧಾನಸಭಾ ಕ್ಷೇತ್ರಕ್ಕೂ ಜನಸೇವಕ ಯೋಜನೆಯನ್ನು ವಿಸ್ತರಿಸಲಾಗುತ್ತಿದ್ದು, ಬಿಬಿಎಂಪಿಯ ಖಾತಾ ವರ್ಗಾವಣೆ, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕದ ಸೇವೆಗಳು, ಆಧಾರ್ ಕಾರ್ಡ್​ನಲ್ಲಿನ ದೋಷಗಳ ತಿದ್ದುಪಡಿ, ಕಂದಾಯ ಇಲಾಖೆ, ಪೊಲಿಸ್ ಇಲಾಖೆ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಸೇರಿದಂತೆ ಹಲವು ಇಲಾಖೆಗಳ ಒಟ್ಟು 55 ಸೇವೆಗಳನ್ನು ಈ ಯೋಜನೆಯಡಿ ಒದಗಿಸಲಾಗುತ್ತದೆ ಎಂದರು.

ಇ-ಸ್ಟ್ಯಾಂಪ್ ಸೇವೆ:

ಅತಿ ಶೀಘ್ರದಲ್ಲಿ ಮುದ್ರಾಂಕ ಇಲಾಖೆಯ ಇ-ಸ್ಟಾಂಪ್ ಮತ್ತು ಸಾರಿಗೆ ಇಲಾಖೆಯ ಸೇವೆಗಳನ್ನು ಸಹ ಜನಸೇವಕ ಯೋಜನೆಯಡಿಯಲ್ಲಿ ತರಲಾಗುತ್ತಿದ್ದು, ಮುಂದಿನ ದಿನಗಳಲ್ಲಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಣೆ‌ ಮಾಡಲು ಆಲೋಚಿಸಲಾಗುತ್ತಿದೆ ಎಂದು ಅವರು ಹೇಳಿದರು.

minister suresh kumar
ಸಚಿವ ಸುರೇಶ್ ಕುಮಾರ್

ಜನಸೇವಕ ಯೋಜನೆಯ ಬಗ್ಗೆ ಸ್ಥಳೀಯ ವಾಟ್ಸಪ್, ಫೇಸ್​ಬುಕ್, ಟ್ವಿಟರ್​ನಂತಹ ಸಾಮಾಜಿಕ‌ ಜಾಲತಾಣಗಳಲ್ಲಿ ಜಾಗೃತಿ ಮೂಡಿಸುವುದು. ಕ್ಷೇತ್ರ ವ್ಯಾಪ್ತಿಯಲ್ಲಿ ಸ್ತ್ರೀಶಕ್ತಿ ಗುಂಪುಗಳು, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಮುದಾಯ ಆಧಾರಿತ ಸಂಸ್ಥೆಗಳೊಂದಿಗೆ ಸಭೆ ನಡೆಸಿ ಪ್ರಚಾರಕ್ಕೆ ಅನುವು ಮಾಡುವುದು. ಈ ಮಹತ್ವದ ನಾಗರಿಕ ಸೇವಾ ಯೋಜನೆಯ ಸಮರ್ಪಕ ಹಾಗೂ ಯಶಸ್ವಿ ಅನುಷ್ಠಾನಕ್ಕೆ ಸಹಕರಿಸಬೇಕೆಂದು ಸಚಿವರು ಬೆಂಗಳೂರು ನಗರದ ಶಾಸಕರನ್ನು ಸಚಿವ ಸುರೇಶ್‌ಕುಮಾರ್ ಮನವಿ ಮಾಡಿದರು.

ಇಂದಿನ ಸಭೆಯಲ್ಲಿ ಸಹಕಾರ ಸಚಿವರಾದ ಶ್ರೀ.ಎಸ್.ಟಿ.ಸೋಮಶೇಖರ್, ಶಾಸಕ ಸತೀಶ್‌ ರೆಡ್ಡಿ, ಇ-ಆಡಳಿತ ಇಲಾಖೆಯ ಅಪರ‌ ಮುಖ್ಯ ಕಾರ್ಯದರ್ಶಿ ರಾಜೀವ ಚಾವ್ಲಾ, ಬೆಂಗಳೂರು ನಗರದ ಅಪರ ಜಿಲ್ಲಾಧಿಕಾರಿ, ಬಿಬಿಎಂಪಿ ವಿಶೇಷ ಆಯುಕ್ತರು ಸೇರಿದಂತೆ ಹಲವರು ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.