ಬೆಂಗಳೂರು: 7ನೇ ತರಗತಿವರೆಗೆ ಆನ್‌ಲೈನ್ ತರಗತಿಗಳನ್ನು ರದ್ದು ಮಾಡುವ ಸಂಬಂಧ ಸಚಿವ ಸಂಪುಟದಲ್ಲಿ ಕೆಲವು ಸಚಿವರು ಸಲಹೆಗಳನ್ನು ನೀಡಿದ್ದಾರೆ. ಈ ಬಗ್ಗೆ ಚರ್ಚೆ ನಡೆಸಲಾಗಿದೆಯೇ ಹೊರತು ಈ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಅಂತ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮೊದಲು ಸಚಿವ ಸಂಪುಟದ ಸಭೆ ಬಳಿಕ ಮಾಹಿತಿ ನೀಡಿದ್ದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ, ಎಲ್‌ಕೆಜಿ, ಯುಕೆಜಿ ಮತ್ತು 1 ರಿಂದ 5ನೇ ತರಗತಿಯ ಆನ್‌ಲೈನ್ ತರಗತಿಯ ರದ್ದು ಮಾಡಿರುವುದನ್ನು 7ನೇ ತರಗತಿವರೆಗೆ ವಿಸ್ತರಿಸಲಾಗಿದೆ ಎಂದು ಹೇಳಿದ್ದರು.
ಆದ್ರೆ ಇದಕ್ಕೆ ತದ್ವಿರುದ್ಧವಾಗಿ ಸಚಿವ ಸುರೇಶ್ ಕುಮಾರ್ ಟ್ವೀಟ್ ಮಾಡಿ ಇದೀಗ ಯೂಟರ್ನ್ ಹೊಡೆದಿದ್ದಾರೆ. ಹೀಗಾಗಿ ಸಚಿವರಲ್ಲಿಯೇ ಹೊಂದಾಣಿಕೆ ಇಲ್ಲವೇ ಎಂಬ ಪ್ರಶ್ನೆ ಉದ್ಭವಿಸಿದೆ.