ETV Bharat / state

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಅಂಕಿ-ಅಂಶ ಕುರಿತು ಸಚಿವರಲ್ಲೇ ಗೊಂದಲ : ಒಬ್ಬರು ಅಂತಾರೆ 300, ಇನ್ನೊಬ್ಬರು ಅಂತಾರೆ 700..‌ - karnataka black fungus statistic news 2021

ರಾಜ್ಯದಲ್ಲಿ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡು ಬಂದಿದ್ದು, ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ತಿಳಿಸಿದ್ದಾರೆ..

Dr K Sudhakar and Ashwathth Narayan
ಡಾ.ಕೆ ಸುಧಾಕರ್ ಹಾಗೂ ಅಶ್ವತ್ಥ್ ನಾರಾಯಣ್
author img

By

Published : May 24, 2021, 4:16 PM IST

ಬೆಂಗಳೂರು : ರಾಜ್ಯದಲ್ಲಿ ದಿನೇದಿನೆ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಾಗ್ತಿದೆ. ಈ ಮಧ್ಯೆ ರಾಜ್ಯದಲ್ಲಿ ಎಷ್ಟು ಮಂದಿಗೆ ಸೋಂಕು ಕಾಣಿಸಿದೆ ಎಂಬುದರ ನಿಖರ ಮಾಹಿತಿ ಸರ್ಕಾರ ಮಟ್ಟದಲ್ಲಿ ಇಲ್ಲ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರು 300 ಬ್ಲಾಕ್ ಫಂಗಸ್ ಪತ್ತೆ ಅಂದರೆ ಇತ್ತ ಡಿಸಿಎಂ ಹಾಗೂ ಉನ್ನತ ಶಿಕ್ಷಣ ಸಚಿವ ಅಶ್ವತ್ಥ್​ ನಾರಾಯಣ್​ ಕಳೆದ 7 ದಿನಗಳಲ್ಲಿ 700 ಬ್ಲ್ಯಾಕ್ ಫಂಗಸ್ ಪೀಡಿತರು ರಾಜ್ಯದಲ್ಲಿ ಪತ್ತೆಯಾಗಿದ್ದಾರೆ ಅಂತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.‌

ಈ ಮೂಲಕ ಸರ್ಕಾರ ಮಟ್ಟದಲ್ಲಿ ಬ್ಲ್ಯಾಕ್ ಫಂಗಸ್ ಪೀಡಿತರ ಅಂಕಿ-ಅಂಶ ಸಿಗದೇ ಇರುವುದನ್ನ ಗಮನಿಸಬಹುದು. ಸಚಿವರಲ್ಲೇ ಈ ಗೊಂದಲ ಸೃಷ್ಟಿಯಾಗಿದ್ದು, ಸದ್ಯ ಸೋಂಕು ಎಷ್ಟರ ಮಟ್ಟಿಗೆ ಉಲ್ಬಣಗೊಳ್ಳಲಿದೆ ಎಂಬುದಕ್ಕೆ ಇದೇ ಸಾಕ್ಷಿಯಾಗಿದೆ‌‌.

ರಾಜ್ಯದಲ್ಲಿ ಅಧಿಕ ಬ್ಲ್ಯಾಕ್ ಫಂಗಸ್ ಸೋಂಕಿತರು ಕಂಡು ಬಂದಿದ್ದಾರೆ. ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಚಿಕಿತ್ಸೆ ವ್ಯವಸ್ಥೆ ಇದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ ಸುಧಾಕರ್ ತಿಳಿಸಿದ್ದಾರೆ.

ಎಲ್ಲ ಜಿಲ್ಲಾಸ್ಪತ್ರೆಗಳಲ್ಲಿ ಕಪ್ಪು ಶಿಲೀಂಧ್ರ ಸೋಂಕಿಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಇದೆ. ಇದರ ಜತೆಗೆ 17 ಮೆಡಿಕಲ್ ಕಾಲೇಜುಗಳಲ್ಲೂ ಕೂಡ ವ್ಯವಸ್ಥೆ ಇದೆ. ಆದರೆ, ಔಷಧಿ ಸ್ವಲ್ಪ ಕೊರತೆ ಇದೆ. ಕೇಂದ್ರ ಸಚಿವ ಡಿ. ವಿ ಸದಾನಂದಗೌಡರ ಜೊತೆ ಈ ಬಗ್ಗೆ ಚರ್ಚಿಸಲಾಗಿದೆ ಎಂದರು.

ಇಡೀ ದೇಶದಲ್ಲಿ ವರ್ಷಕ್ಕೆ 100-200 ರಷ್ಟು ಜನರು ಬ್ಲ್ಯಾಕ್ ಫಂಗಸ್ ಸೋಂಕಿಗೆ ಒಳಗಾಗುತ್ತಿದ್ದರು. ಈಗ ರಾಜ್ಯದಲ್ಲೇ 300 ಕ್ಕೂ ಅಧಿಕ ಸೋಂಕಿತರಿರುವಾಗ ಔಷಧಿ ಕೊರತೆ ಕಂಡು ಬರುತ್ತದೆ. ಇದಕ್ಕಾಗಿ ಔಷಧ ಉತ್ಪಾದನೆ ಹೆಚ್ಚಳ ಮಾಡಲಾಗಿದೆ.

1 ಸಾವಿರಕ್ಕೂ ಅಧಿಕ ವೈಲ್‌ಗಳನ್ನು ಕಳುಹಿಸಿ ಕೊಡುವ ನಿರೀಕ್ಷೆಯೂ ಇದೆ. ಬ್ಲ್ಯಾಕ್ ಫಂಗಸ್‌ಗೆ 1,150 ವೈಲ್ ಔಷಧಿ ರಾಜ್ಯಕ್ಕೆ ದೊರೆತಿದೆ. 20 ಸಾವಿರ ವೈಲ್‌ಗೆ ಬೇಡಿಕೆ ಇಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.‌

ಸಮಿತಿ ವರದಿ ಬಹಿರಂಗ

ಇನ್ನು, ಈ ಸೋಂಕು ಎಲ್ಲಿಂದ ಬರುತ್ತಿದೆ ಎಂದು ಪತ್ತೆ ಮಾಡಲು ಸಮಿತಿ ರಚಿಸಿದ್ದು, ಈ ಸಮಿತಿ ವರದಿ ನೀಡಿದೆ.

-ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್​ನಲ್ಲಿ ನೀರು ಬಳಕೆ
-ಐಸಿಯು ವೆಂಟಿಲೇರ್​ನ ಇನ್ನೊಬ್ಬರಿಗೆ ಬಳಸಿರುವುದು.
-ಒಂದೇ ಮಾಸ್ಕ್ ದೀರ್ಘಕಾಲ ಬಳಕೆ
-ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ಬರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

ಇದನ್ನು ತಡೆಗಟ್ಟುವ ಬಗೆಯನ್ನೂ ಸಮಿತಿ ವರದಿಯಲ್ಲಿ ತಿಳಿಸಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ಕಟ್ಟಡ ನವೀಕರಣ ಕಾಮಗಾರಿ ನಡೆಸಬಾರದು, ಹೊರಗಿನವರು ವಾರ್ಡ್‍ಗೆ ಬರಬಾರದು.

ಪ್ರತಿ ಪಾಳಿ ಮುಗಿದ ಮೇಲೆ ಸ್ವಚ್ಛತೆ ಮಾಡಬೇಕು, ಪ್ರತಿ ಉಪಕರಣಗಳನ್ನು ಸ್ವಚ್ಛವಾಗಿಡಬೇಕು ಎಂದು ಸೂಚಿಸಲಾಗಿದೆ ಎಂದರು. ಕೋವಿಡ್​ನಿಂದ ಗುಣಮುಖರಾದಾಗ ಇಎನ್‌ಟಿ ವೈದ್ಯರು ಮತ್ತೆ ತಪಾಸಣೆ ಮಾಡಬೇಕು. 3, 7, 21 ನೇ ದಿನ ತಪಾಸಣೆ ಮಾಡಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಆಶಾ ಕಾರ್ಯಕರ್ತರ ಪ್ರತಿಭಟನೆ

ಆಶಾ ಕಾರ್ಯಕರ್ತರು ಸೇರಿದಂತೆ ಆರೋಗ್ಯ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಲ್ಲಾ ಸಿಬ್ಬಂದಿಗೆ ವೇತನ ಪಾವತಿಸಲಾಗಿದೆ. ವೇತನ ಹೆಚ್ಚಳಕ್ಕೆ ಸಂಬಂಧಿಸಿದ ವಿಚಾರ ಕೇಂದ್ರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕಿದೆ.

ಈ ಬಗ್ಗೆ ಕೇಂದ್ರ ಆರೋಗ್ಯ ಸಚಿವಾಲಯದೊಂದಿಗೆ ಚರ್ಚಿಸಲಾಗುವುದು. 10 ಲಕ್ಷಕ್ಕೂ ಅಧಿಕ ಪಿಪಿಇ ಕಿಟ್ ನಮ್ಮ ಬಳಿ ಇದೆ. ಈ ವಸ್ತುಗಳ ಗುಣಮಟ್ಟದ ಬಗೆಗಿನ ಆರೋಪ ಸುಳ್ಳು ಎಂದು ಸ್ಪಷ್ಟಪಡಿಸಿದರು.

ಓದಿ: ಪೌರಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ವಿತರಿಸಿ ಹುಟ್ಟುಹಬ್ಬ ಆಚರಿಸಿಕೊಂಡ ಬಾಲಕಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.