ETV Bharat / state

ವಿವಿಧ ಬೇಡಿಕೆ ಈಡೇರಿಕೆಗೆ ಸಿಎಂಗೆ ಮನವಿ ಸಲ್ಲಿಸಿದ  ಸಚಿವಾಲಯದ ನೌಕರರ ಸಂಘ

author img

By

Published : May 26, 2019, 2:14 AM IST

ಸಚಿವಾಲಯದ ವೃಂದ ಮತ್ತು ನೇಮಕಾತಿ ಕರಡು ನಿಯಮಗಳಲ್ಲಿ ಶೇ. 20 ರಷ್ಟು ಶಾಖಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದು ಸೇರಿದಂತೆ ಸೇವೆಯಲ್ಲಿರುವ ನೌಕರರಿಗೆ ಅನ್ಯಾಯವಾಗಲಿರುವ ತಿದ್ದುಪಡಿಗಳನ್ನು ಕೈಬಿಡುವಂತೆ ಮನವಿ ಮಾಡಲಾಯಿತು.

ಸಚಿವಾಲಯದ ನೌಕರರ ಸಂಘ, ವೃಂದ ಸಂಘಗಳಿಂದ ಸಿಎಂಗೆ ಮನವಿ ಸಲ್ಲಿಕೆ

ಬೆಂಗಳೂರು: ಸಚಿವಾಲಯದ ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗಳ ಕುರಿತು ಸಚಿವಾಲಯದ ನೌಕರರ ಸಂಘ ಹಾಗೂ ವಿವಿಧ ವೃಂದ ಸಂಘಗಳಿಂದ ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು.

ಸಚಿವಾಲಯದ ವೃಂದ ಮತ್ತು ನೇಮಕಾತಿ ಕರಡು ನಿಯಮಗಳಲ್ಲಿ ಶೇ. 20 ರಷ್ಟು ಶಾಖಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದು ಸೇರಿದಂತೆ ಸೇವೆಯಲ್ಲಿರುವ ನೌಕರರಿಗೆ ಅನ್ಯಾಯವಾಗಲಿರುವ ತಿದ್ದುಪಡಿಗಳನ್ನು ಕೈಬಿಡುವಂತೆ ಮನವಿ ಮಾಡಲಾಯಿತು. ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಇದಕ್ಕೂ ಮುನ್ನ ವಿಕಾಸಸೌಧದಲ್ಲಿ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ನೇತೃತ್ವದಲ್ಲಿ ಸಚಿವಾಲಯ ನಿಯಮಗಳನ್ನು ಸಮಗ್ರ ತಿದ್ದುಪಡಿ ಮಾಡಲು ಮುಂದಾಗಿರುವ ಸರ್ಕಾರದ ಕ್ರಮದ ಬಗ್ಗೆ ಚರ್ಚಿಸಲಾಯಿತು. ಪ್ರತಿ ವರ್ಷ 50 ಶಾಖಾಧಿಕಾರಿ ಹುದ್ದೆಗಳಿಗೆ, ಸಚಿವಾಲಯ ಸಿಬ್ಬಂದಿಗೆ ಬಡ್ತಿ ನೀಡಲಾಗುತ್ತಿತ್ತು. ಅದನ್ನು ಕೈಬಿಟ್ಟು ಪ್ರತಿ ನೇಮಕಾತಿಯಲ್ಲಿ 5 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ 5 ಬಡ್ತಿ ಭರ್ತಿ ಮಾಡಲು ನಿರ್ಧರಿಸಲಾಗಿತ್ತು. ಆದರೆ, ಅದನ್ನು ಕೈಬಿಟ್ಟು ಶೇ. 20 ರಷ್ಟು ನೇರ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ. ಹೀಗಾಗಿ ಸರ್ಕಾರದ ಈ ನಿರ್ಧಾರದ ವಿರುದ್ಧ ಹೋರಾಟದ ರೂಪುರೇಷೆ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ.

ಅಷ್ಟೇಅಲ್ಲದೆ, ಸಚಿವಾಲಯಕ್ಕೆ ಗುತ್ತಿಗೆಯಿಂದ ನೇಮಕವಾಗಿರುವ ಅಧಿಕಾರಿಗಳನ್ನು ಹೊರ ಹಾಕಬೇಕು, ನಿಯೋಜನೆ ಮೇಲೆ ಸಚಿವಾಲಯಕ್ಕೆ ಬಂದವರನ್ನು ಮಾತೃ ಇಲಾಖೆಗೆ ಕಳುಹಿಸಬೇಕು, ಸಚಿವಾಲಯ ನೌಕರರಿಗೆ ಬಡ್ತಿ ನೀಡಬೇಕು ಎಂಬ ಬಗ್ಗೆಯೂ ಚರ್ಚಿಸಿ ಸಂಘದ ಸದಸ್ಯರು ಸಿಎಂಗೆ ಮನವಿ ಸಲ್ಲಿಸಿದ್ದಾರೆ.

Intro:ಬೆಂಗಳೂರು : ಸಚಿವಾಲಯದ ವೃಂದ ಮತ್ತು ನೇಮಕಾತಿ ಕರಡು ನಿಯಮಾವಳಿಗಳ ಕುರಿತು ಸಚಿವಾಲಯದ ನೌಕರರ ಸಂಘ ಹಾಗೂ ವಿವಿಧ ವೃಂದ ಸಂಘಗಳಿಂದ ಇಂದು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಯಿತು. Body:ಸಚಿವಾಲಯದ ವೃಂದ ಮತ್ತು ನೇಮಕಾತಿ ಕರಡು ನಿಯಮಗಳಲ್ಲಿ ಶೇ. 20 ರಷ್ಟು ಶಾಖಾಧಿಕಾರಿ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡುವುದು ಸೇರಿದಂತೆ ಸೇವೆಯಲ್ಲಿರುವ ನೌಕರರಿಗೆ ಅನ್ಯಾಯವಾಗಲಿರುವ ತಿದ್ದುಪಡಿಗಳನ್ನು ಕೈಬಿಡುವಂತೆ ಮನವಿ ಮಾಡಲಾಯಿತು.
ಈ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು, ಮನವಿಯನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಇದಕ್ಕೂ ಮುನ್ನ ವಿಕಾಸಸೌಧದಲ್ಲಿ ಸಚಿವಾಲಯ ನೌಕರರ ಸಂಘದ ಅಧ್ಯಕ್ಷ ಪಿ. ಗುರುಸ್ವಾಮಿ ನೇತೃತ್ವದಲ್ಲಿ ಸಚಿವಾಲಯ ನಿಯಮಗಳನ್ನು ಸಮಗ್ರ ತಿದ್ದುಪಡಿ ಮಾಡಲು ಮುಂದಾಗಿರುವ ಸರ್ಕಾರದ ಕ್ರಮದ ಬಗ್ಗೆ ಚರ್ಚಿಸಲಾಯಿತು.
ಪ್ರತಿ ವರ್ಷ 50 ಶಾಖಾಧಿಕಾರಿ ಹುದ್ದೆಗಳಿಗೆ ಸಚಿವಾಲಯ ಸಿಬ್ಬಂದಿಗೆ ಬಡ್ತಿ ನೀಡಲಾಗುತ್ತಿತ್ತು. ಅದನ್ನು ಕೈಬಿಟ್ಟು ಪ್ರತಿ ನೇಮಕಾತಿಯಲ್ಲಿ 5 ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ 5 ಬಡ್ತಿ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿತ್ತು. ಆದರೆ ಅದನ್ನು ಕೈಬಿಟ್ಟು ಶೇ. 20 ರಷ್ಟು ನೇರ ನೇಮಕ ಮಾಡಲು ನಿರ್ಧಾರ ಮಾಡಲಾಗಿದೆ. ಸರ್ಕಾರದ ಈ ನಿರ್ಧಾರದ ವಿರುದ್ಧ ಹೋರಾಟದ ರೂಪುರೇಷೆ ಕುರಿತು ಸಭೆಯಲ್ಲಿ ನಿರ್ಧರಿಸಲಾಗಿದೆ. ಅಲ್ಲದೆ, ಸಚಿವಾಲಯಕ್ಕೆ ಗುತ್ತಿಗೆಯಿಂದ ನೇಮಕವಾಗಿರುವ ಅಧಿಕಾರಿಗಳನ್ನು ಹೊರ ಹಾಕಬೇಕು, ನಿಯೋಜನೆ ಮೇಲೆ ಸಚಿವಾಲಯಕ್ಕೆ ಬಂದವರನ್ನು ಮಾತೃ ಇಲಾಖೆಗೆ ಕಳುಹಿಸಬೇಕು, ಸಚಿವಾಲಯ ನೌಕರರಿಗೆ ಬಡ್ತಿ ನೀಡಬೇಕು ಎಂಬ ಬಗ್ಗೆಯೂ ಚರ್ಚಿಸಿ ಸಂಘದ ಸದಸ್ಯರು ಸಿಎಂಗೆ ಮನವಿ ಸಲ್ಲಿಸಿದ್ದಾರೆ.Conclusion:

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.