ETV Bharat / state

ಅಪ್ರಾಪ್ತೆ ಮೇಲೆ ಅತ್ಯಾಚಾರ: ವಿಚಾರಣಾಧೀನ ನ್ಯಾಯಾಲಯದ ಖುಲಾಸೆ ಆದೇಶ ರದ್ದು

ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿ ವಂಚಿಸಿದ್ದ ಪ್ರಕರಣದಲ್ಲಿ ವ್ಯಕ್ತಿಯೋರ್ವನನ್ನು ವಿಚಾರಣಾ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶಿಸಿತ್ತು.

High Court
ಹೈಕೋರ್ಟ್‌
author img

By

Published : May 24, 2023, 6:52 AM IST

ಬೆಂಗಳೂರು: ಅಪ್ರಾಪ್ತ ಸೋದರ ಸಂಬಂಧಿ ಮೇಲೆ ಅತ್ಯಾಚಾರವೆಸಗಿ ವಂಚಿಸಿದ ಪ್ರಕರಣದಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿದ ವಿಚಾರಣಾಧೀನ ನ್ಯಾಯಾಲಯ ಆದೇಶವನ್ನು ಹೈಕೋರ್ಟ್ ರದ್ದುಪಡಿಸಿದೆ. ಮಡಿಕೇರಿಯ ಮಡೆ ಗ್ರಾಮದ ವಿಜಯ ಅಲಿಯಾಸ್ ವಿಜಯಕುಮಾರ್ ಎಂಬುವರನ್ನು ಕೊಡಗಿನ 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಖುಲಾಸೆಗೊಳಿಸಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು. ಈ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಎಸ್.ಮುದಗಲ್ ಮತ್ತು ರಾಜೇಂದ್ರ ಬದಾಮಿಕರ್ ಅವರ ನೇತೃತ್ವದ ವಿಭಾಗೀಯ ಪೀಠ ಮಹತ್ವದ ಆದೇಶ ನೀಡಿದೆ. ಅಲ್ಲದೇ ಆತನಿಗೆ ಶಿಕ್ಷೆ ವಿಧಿಸಲು ಆದೇಶ ಮಾಡಿತು.

ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವನಿಗೆ 12 ವರ್ಷ ಜೈಲು ಶಿಕ್ಷೆ; 30 ಸಾವಿರ ರೂ. ದಂಡ

ಸುಪ್ರೀಂ ಕೋರ್ಟ್ ತೀರ್ಪಿನ ಅನ್ವಯ ರೂಪಿಸಲಾಗಿರುವ ನಿಯಮಗಳಿಗೆ ಪೂರಕವಾಗಿ ದಾಖಲೆಯಲ್ಲಿರುವ ಸಾಕ್ಷ್ಯಗಳನ್ನು ವಿಚಾರಣಾಧೀನ ನ್ಯಾಯಾಲಯ ಪರಿಗಣಿಸದೇ ಆರೋಪಿಯನ್ನು ಖುಲಾಸೆಗೊಳಿಸುವ ಮೂಲಕ ಕಾನೂನು ಬಾಹಿರವಾಗಿ ನಡೆದುಕೊಂಡಿದೆ. ನಿಷಿದ್ಧವಾಗಿರುವ 15 ವರ್ಷದ ತನ್ನ ಸೋದರ ಸಂಬಂಧಿಯ ಜತೆ ಸಂಭೋಗ ನಡೆಸುವುದಲ್ಲದೇ ಆಕೆಗೆ ವಂಚಿಸಿರುವುದನ್ನು ಪರಿಗಣಿಸಲು ವಿಚಾರಣಾಧೀನ ನ್ಯಾಯಾಲಯ ವಿಫಲವಾಗಿದೆ. ಹೀಗಾಗಿ ಆರೋಪಿಯನ್ನು ಖುಲಾಸೆ ಮಾಡಿರುವ ಆದೇಶ ನ್ಯಾಯದಾನಕ್ಕೆ ಮಾರಕವಾಗಿದ್ದು, ಅದನ್ನು ರದ್ದುಪಡಿಸುತ್ತಿರುವುದಾಗಿ ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಅಕ್ರಮವಾಗಿ ಕರೆದೊಯ್ದ ಮಗಳನ್ನು ತಾಯಿಗೆ ಒಪ್ಪಿಸುವಂತೆ ತಂದೆಗೆ ಹೈಕೋರ್ಟ್‌ ಆದೇಶ

ಪ್ರಕರಣದ ಹಿನ್ನೆಲೆ ಹೀಗಿದೆ..: ಸಂತ್ರಸ್ತೆ 1992 ರ ಫೆಬ್ರವರಿ 29 ರಂದು ಜನಿಸಿದ್ದು, ಆರೋಪಿ ಆಕೆಯ ಚಿಕ್ಕಪ್ಪನ ಮಗನಾಗಿದ್ದಾನೆ. ಆರೋಪಿಯ ಜಮೀನಿಗೆ ಕೂಲಿ ಕೆಲಸಕ್ಕೆ ತೆರಳಿದ್ದ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ಕ್ರಿಯೆ ನಡೆಸಿದ್ದ. ಇದರಿಂದ ಆಕೆ ಗರ್ಭಿಣಿಯಾಗಿದ್ದು, ವಿಚಾರ ಪೋಷಕರ ಗಮನಕ್ಕೆ ಬಂದಿತ್ತು. ಮಗುವನ್ನು ತೆಗೆಸಿದರೆ ಮದುವೆಯಾಗುವುದಾಗಿ ಆತ ಷರತ್ತು ವಿಧಿಸಿದ್ದ. ಊರಿನವರ ಪಂಚಾಯಿತಿಯಲ್ಲಿ ಸಂತ್ರಸ್ತೆಯನ್ನು ಮದುವೆಯಾಗುವುದಾಗಿ ತಿಳಿಸಿದ್ದ ಆರೋಪಿ ಬಳಿಕ ನಾಪತ್ತೆಯಾಗಿದ್ದ. ಹೀಗಾಗಿ ಆತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.

ಇದನ್ನೂ ಓದಿ: 2 ವಿಚ್ಛೇದನ ಅರ್ಜಿ ಸಲ್ಲಿಸಿದ್ದ ಪತಿ: ಕೌಟುಂಬಿಕ ನ್ಯಾಯಾಲಯದ ವಿಚ್ಛೇದನ ರದ್ದುಪಡಿಸಿದ ಹೈಕೋರ್ಟ್‌

ಈ ನಡುವೆ ಸಂತ್ರಸ್ತೆಗೆ ವಿವಾದಿತ ಸಂಬಂಧದಲ್ಲಿ ಹೆಣ್ಣು ಮಗು ಜನಿಸಿತ್ತು. ಆಕೆ ಆನಂತರ ಮತ್ತೊಂದು ಮದುವೆಯಾಗಿದ್ದರು. ಈ ಸಂಬಂಧದಿಂದ ಮತ್ತೊಂದು ಮಗು ಪಡೆದಿದ್ದರು. ಪ್ರಕರಣ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಲಯ ಸಂತ್ರಸ್ತೆಯ ವಯಸ್ಸು ಸಾಬೀತಾಗಿಲ್ಲ. ಆರೋಪಿ ಮತ್ತು ಸಂತ್ರಸ್ತೆಯ ನಡುವಿನ ಸಂಬಂಧ ಒಪ್ಪಿತವಾಗಿತ್ತು. ಆರೋಪಿ ಸಂತ್ರಸ್ತೆಯ ಜತೆಗೆ ಹೊಂದಿದ್ದ ಸಂಭೋಗದಿಂದ ಆಕೆ ಗರ್ಭಿಣಿಯಾಗಿದ್ದಳು ಎಂಬುದನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಂಶವಾಹಿ ಪರೀಕ್ಷೆ ವರದಿ ಸಲ್ಲಿಸಿಲ್ಲ ಎಂದು ಕಾರಣಗಳನ್ನು ನೀಡಿ, ಆರೋಪಿಯನ್ನು ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿತ್ತು.

ಇದನ್ನೂ ಓದಿ: ಮಕ್ಕಳ ದತ್ತು ಸ್ವೀಕಾರಕ್ಕೆ ಕರಡು ನಿಯಮ ಸಿದ್ದ: ಹೈಕೋರ್ಟ್‌ಗೆ ಸರ್ಕಾರ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.