ETV Bharat / state

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ, ಕಚೇರಿ ಮೇಲೆ ಕಲ್ಲು ತೂರಾಟ; ಸ್ಥಳದಲ್ಲಿ ಬಿಗುವಿನ ವಾತಾವರಣ - Tense atmosphere in place

ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಕಿಡಿಗೇಡಿಗಳ ಗುಂಪು ಕಲ್ಲು ತೂರಾಟ ನಡೆಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಶಾಸಕರ ಮನೆ, ಕಚೇರಿ ಮೇಲೆ ಕಲ್ಲು ತೂರಾಟ
ಶಾಸಕರ ಮನೆ, ಕಚೇರಿ ಮೇಲೆ ಕಲ್ಲು ತೂರಾಟ
author img

By

Published : Aug 11, 2020, 10:59 PM IST

Updated : Aug 11, 2020, 11:57 PM IST

ಬೆಂಗಳೂರು: ಶಾಸಕ ಅಖಂಡ ಶ್ರೀನಿವಾಸಮೂರ್ತಿ ಅವರ ಮನೆ ಮತ್ತು ಕಚೇರಿ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಜೊತೆಗೆ ವಾಹನಗಳಿಗೂ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ಕಾವಲ್ ಭೈರಸಂದ್ರದಲ್ಲಿ ನಡೆದಿದೆ.

ಶಾಸಕರ ಸಂಬಂಧಿಕರೊಬ್ಬರು ಒಂದು ಸಮುದಾಯದ ಕುರಿತು ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರಂತೆ. ಈ ಪೋಸ್ಟ್​​ ಹಾಕಿದ ನಂತರ ಅವರು, ನನ್ನ ಅಕೌಂಟ್ ಹ್ಯಾಕ್​ ಆಗಿದೆ. ನಾನು ಈ ಪೋಸ್ಟ್ ಮಾಡಿಲ್ಲ ಎಂದು ರೀ ಪೋಸ್ಟ್‌ ಮಾಡಿದ್ದಾರೆ.

ಶಾಸಕರ ಮನೆ, ಕಚೇರಿ ಮೇಲೆ ಕಲ್ಲು ತೂರಾಟ: ಸ್ಥಳದಲ್ಲಿ ಬಿಗುವಿನ ವಾತಾವರಣ

ಆದರೆ ಫೇಸ್‌ಬುಕ್ ಪೋಸ್ಟ್​​ನಿಂದ ರೊಚ್ಚಿಗೆದ್ದ ಅಂದಾಜು 10-15 ಜನರ ತಂಡ, ಕಾವಲ್ ಭೈರಸಂದ್ರದಲ್ಲಿರುವ ಶಾಸಕರ ಮನೆ ಮತ್ತು ಕಚೇರಿ ಮೇಲೆ ಕಲ್ಲು ತೂರಾಟ ನಡೆಸಿದೆ. ಇದನ್ನೆಲ್ಲಾ ವಿಡಿಯೋ ಮಾಡುತ್ತಿದ್ದ ವ್ಯಕ್ತಿಗೆ ಥಳಿಸಿ, ಮೊಬೈಲ್ ಒಡೆದು ಹಾಕಿದ್ದಾರೆ.

ಸ್ಥಳಕ್ಕೆ ಬಾಣಸವಾಡಿ ಹಾಗೂ ಪುಲಕೇಶಿನಗರ ಪೊಲೀಸರು ಭೇಟಿ ನೀಡಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

Last Updated : Aug 11, 2020, 11:57 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.