ETV Bharat / state

ಕೇಂದ್ರದ ಅನುದಾನ ದುರ್ಬಳಕೆ: ಸಿಬಿಐ ತನಿಖೆ ಕೋರಿ ಪಿಐಎಲ್

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮತ್ತು ಯುವಕರ ಶಿಕ್ಷಣ - ಕೌಶಲ್ಯ ತರಬೇತಿಗೆ ಕೇಂದ್ರ ಸರ್ಕಾರ ನೀಡಿರುವ ಕೋಟ್ಯಂತರ ರೂಪಾಯಿ ಅನುದಾನವನ್ನು ಅಲಮೀನ್ ಶಿಕ್ಷಣ ಸಂಸ್ಥೆ ಮತ್ತು ಗೌಸಿಯಾ ಕೈಗಾರಿಕಾ ಮತ್ತು ಎಂಜಿನಿಯರಿಂಗ್ ಸಂಸ್ಥೆಗಳು ದುರ್ಬಳಕೆ ಮಾಡಿಕೊಂಡಿವೆ. ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್​ಗೆ ಉಬೇದ್ ಉಲ್ಲಾ ಶರೀಫ್ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದಾರೆ.

ಹೈಕೋರ್ಟ್
ಹೈಕೋರ್ಟ್
author img

By

Published : Sep 29, 2020, 11:30 PM IST

ಬೆಂಗಳೂರು: ಅಲ್ಪಸಂಖ್ಯಾತ ಸಮುದಾಯ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಕೌಶಲ್ಯ ತರಬೇತಿಗೆ ಕೇಂದ್ರ ಸರ್ಕಾರ ಹಲವು ಯೋಜನೆಗಳ ಅಡಿ ನೀಡಿರುವ ಕೋಟ್ಯಂತರ ರೂಪಾಯಿ ಅನುದಾನವನ್ನು ಅಲ್ ಅಮೀನ್ ಶಿಕ್ಷಣ ಸಂಸ್ಥೆ ಹಾಗೂ ಗೌಸಿಯಾ ಕೈಗಾರಿಕೆ ಮತ್ತು ಇಂಜಿನಿಯರಿಂಗ್ ಸಂಸ್ಥೆಗಳು ದುರ್ಬಳಕೆ ಮಾಡಿಕೊಂಡಿರುವ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತು ನಗರದ ನಿವಾಸಿ ಉಬೇದ್ ಉಲ್ಲಾ ಶರೀಫ್ ಎಂಬುವವರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಕೆಲಕಾಲ ಅರ್ಜಿದಾರರ ಪರ ವಕೀಲ ಸೈಯದ್ ಇಮ್ರಾನ್ ಅವರ ವಾದ ಆಲಿಸಿದ ಪೀಠ, ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯ, ದೆಹಲಿಯ ಮೌಲಾನಾ ಆಜಾದ್ ಶಿಕ್ಷಣ ಪ್ರತಿಷ್ಠಾನ, ರಾಜ್ಯ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಅಲ್ ಅಮೀನ್ ಶಿಕ್ಷಣ ಸಂಸ್ಥೆ, ಗೌಸಿಯಾ ಕೈಗಾರಿಕಾ ಮತ್ತು ಇಂಜಿನಿಯರಿಂಗ್ ಸಂಸ್ಥೆ ಸೇರಿದಂತೆ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ನವೆಂಬರ್ 5ಕ್ಕೆ ಮುಂದೂಡಿತು

ಅರ್ಜಿದಾರರ ಕೋರಿಕೆ: ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮತ್ತು ಯುವಕರ ಶಿಕ್ಷಣ- ಕೌಶಲ್ಯ ತರಬೇತಿಗೆ ಕೇಂದ್ರ ಸರ್ಕಾರ ನೀಡಿರುವ ಕೋಟ್ಯಂತರ ರೂಪಾಯಿ ಅನುದಾನವನ್ನು ಅಲಮೀನ್ ಶಿಕ್ಷಣ ಸಂಸ್ಥೆ ಮತ್ತು ಗೌಸಿಯಾ ಕೈಗಾರಿಕಾ ಮತ್ತು ಇಂಜಿನಿಯರಿಂಗ್ ಸಂಸ್ಥೆಗಳು ದುರ್ಬಳಕೆ ಮಾಡಿಕೊಂಡಿವೆ. ಹೀಗಾಗಿ ಈ ಸಂಸ್ಥೆಗಳು ಕೇಂದ್ರಕ್ಕೆ ಸಲ್ಲಿಸಿರುವ ದಾಖಲೆಗಳನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸುವಂತೆ ಕೇಂದ್ರ ಅಲ್ಪಸಂಖ್ಯಾತ ಕಲ್ಯಾಣ ಸಚಿವಾಲಯಕ್ಕೆ ನಿರ್ದೇಶನ ನೀಡಬೇಕು. ಪ್ರಕರಣವನ್ನು ಸಿಬಿಐ ಅಥವಾ ನ್ಯಾಯಾಂಗ ತನಿಖೆಗೆ ವಹಿಸಬೇಕು. ಅನುದಾನ ದುರ್ಬಳಕೆ ಮಾಡಿಕೊಂಡ ಅವರಿಂದ ಹಣ ವಸೂಲಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಅರ್ಜಿದಾರರು ಮನವಿ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.