ETV Bharat / state

ನನಗೆ ದೇವರ ಮೇಲೆ ನಂಬಿಕೆ ಇದೆ, ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ: ಶಾಸಕ ಅಖಂಡ ಹೇಳಿಕೆ - ಡಿ.ಜೆ ಹಳ್ಳಿ ಹಾಗೂ ಕೆ.ಜಿ ಹಳ್ಳಿ ಗಲಭೆ ಪ್ರಕರಣ

ಗಲಭೆಯ ತನಿಖೆಯ ಮಾಹಿತಿ ಕೇಳಲು ಪುಲಕೇಶಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ನಗರ ಪೊಲೀಸ್​ ಆಯುಕ್ತರ ಕಚೇರಿಗೆ ಭೇಟಿ ನೀಡಿದ್ದಾರೆ. ಈ ವೇಳೆ ಮಾತನಾಡಿರುವ ಅವರು, ತಮಗೆ ದೇವರ ಮೇಲೆ ನಂಬಿಕೆಯಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಎಂದಿದ್ದಾರೆ.

Mla Akhanda Srinivas Murthy
ಶಾಸಕ ಅಖಂಡ
author img

By

Published : Aug 26, 2020, 12:48 PM IST

ಬೆಂಗಳೂರು: ಡಿ.ಜೆ. ಹಳ್ಳಿ ಹಾಗೂ ಕೆ.ಜಿ. ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಲಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ನಗರ ಪೊಲೀಸ್​ ಆಯುಕ್ತರ ಕಚೇರಿಗೆ ಭೇಟಿ ನೀಡಿ ಕಮಲ್ ಪಂತ್​ ಅವರನ್ನ ಭೇಟಿಯಾಗಿದ್ದಾರೆ.

ಸಿಸಿಬಿ ಪೊಲೀಸರು ಹಾಗೂ ಡಿ.ಜೆ. ಹಳ್ಳಿ ಪೊಲೀಸರು ತನಿಖೆ ನಡೆಸುತ್ತಿದ್ದು, ತನಿಖೆ ಯಾವ ಹಂತದಲ್ಲಿ ಸಾಗ್ತಿದೆ ಅನ್ನೋದರ ಬಗ್ಗೆ ಮಾಹಿತಿ ತಿಳಿಯಲು ಬಂದಿದ್ದರು.

ಈ ವೇಳೆ ಮಾಧ್ಯಮದವರೊಂದಿಗೆ ಮಾತಾಡಿದ ಶಾಸಕರು, ಗಲಭೆಯ ತನಿಖೆಯ ಮಾಹಿತಿ ಕೇಳಲು ಬಂದಿದ್ದೆ. ಸದ್ಯ ತನಿಖೆ ಎಲ್ಲಾ ಆಯಾಮದಲ್ಲಿ ನಡೆಯುತ್ತಿದೆ ಎಂದು ಕಮಿಷನರ್ ಹೇಳಿದ್ದಾರೆ. ಯಾರೇ ತಪ್ಪು ಮಾಡಿದ್ದರೂ ಸಹ ಅವರಿಗೆ ಶಿಕ್ಷೆ ಆಗಲಿ. ಸದ್ಯ ತನಿಖೆ ಆಗಲಿ, ರಿಪೋರ್ಟ್ ಬರಲಿ. ಅದರಲ್ಲಿ ಯಾರು ತಪ್ಪಿಸ್ಥರು ಅನ್ನೋದು ಗೊತ್ತಾಗುತ್ತೆ. ನನಗೆ ದೇವರ ಮೇಲೆ ನಂಬಿಕೆ ಇದೆ, ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.