ಬೆಂಗಳೂರು: ಬೆಂಗಳೂರಿನಿಂದ ಹೊರಟ ಅತೃಪ್ತ ಶಾಸಕ ಆನಂದ್ ಸಿಂಗ್ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ಥಾಣದಿಂದ ಮುಂಬೈಗೆ ಪ್ರಯಾಣ ಬೆಳೆಸಿದರು.
ಸುಮಾರು 05:40ರ ಸಮಯದಲ್ಲಿ ವಿಮಾನದಲ್ಲಿ ಮುಂಬೈಗೆ ತೆರಳಿದ್ದಾರೆ. ನಿನ್ನೆ ಮುಂಬೈನಿಂದ ಬೆಂಗಳೂರಿಗೆ ಬಂದಿದ್ದ ವಿಜಯನಗರ ಕಾಂಗ್ರೆಸ್ ಶಾಸಕ ಆನಂದ್ ಸಿಂಗ್ ಇಂದು ಅಧಿವೇಶನದಲ್ಲಿ ಭಾಗವಹಿಸುತ್ತಾರೆ ಅಂತ ಹೇಳಲಾಗುತ್ತಿತ್ತು. ಆದರೆ ಅಧಿವೇಶನದಲ್ಲಿ ಪಾಲ್ಗೊಳ್ಳದೆ ಸಂಜೆಯವರೆಗೂ ಬೆಂಗಳೂರಿನಲ್ಲಿ ಇದ್ದು, ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.