ETV Bharat / state

ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಅರವಿಂದ ಲಿಂಬಾವಳಿ ಚಾಲನೆ - Arvind Limbaveli drive

ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು ಒತ್ತಾಯಿಸಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ಅಭಿಯಾನಕ್ಕೆ ಶಾಸಕ ಅರವಿಂದ ಲಿಂಬಾವಳಿಯವರು ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

MLA Arvind Limbavali launches campaign for drug-free Karnataka signature campaign
ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಅರವಿಂದ ಲಿಂಬಾವಳಿ ಚಾಲನೆ
author img

By

Published : Sep 12, 2020, 10:53 PM IST

ಬೆಂಗಳೂರು: ಇಂದು ಮಹದೇವಪುರ ಕ್ಷೇತ್ರದಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಅರವಿಂದ ಲಿಂಬಾವಳಿ ಅವರು ಸಹಿ ಮಾಡುವ ಮೂಲಕ ಚಾಲನೆ ನೀಡಿದರು.

ಡ್ರಗ್ಸ್ ಮುಕ್ತ ಕರ್ನಾಟಕ ಸಹಿ ಸಂಗ್ರಹ ಅಭಿಯಾನಕ್ಕೆ ಶಾಸಕ ಅರವಿಂದ ಲಿಂಬಾವಳಿ ಚಾಲನೆ

ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ದಂಧೆಯಲ್ಲಿ ತೊಡಗಿದ ವ್ಯಕ್ತಿಗಳ ಮೇಲೆ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಕೂಡಲೇ ಅವರನ್ನು ಬಂಧಿಸಬೇಕೆಂದು. ನಮ್ಮ ಕ್ಷೇತ್ರ ಮಹದೇವಪುರವನ್ನು ಡ್ರಗ್ಸ್ ಮುಕ್ತ ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕು ಎಂಬ ಆಶಯ ವ್ಯಕ್ತಪಡಿಸಿದರು.

ನಂತರ ಜಾಥಾ ನಡೆಸಿ ಸ್ಲೋಗನ್​​ಗಳನ್ನ ಕೂಗಿದ ಯುವಕರು, ವರ್ತೂರು ಕೋಡಿಯಲ್ಲಿ ಮಾನವ ಸರಪಳಿ ಮಾಡಿ ಡ್ರಗ್ಸ್ ವ್ಯಸನಿಗಳ ವಿರುದ್ಧ ದಿಕ್ಕಾರಗಳನ್ನು ಕೂಗಿದರು.

ನಂತರ ಬೆಂಗಳೂರು ನಗರ ಜಿಲ್ಲಾ ಕಾರ್ಯದರ್ಶಿ ಮಹೇಂದ್ರ ಮೋದಿ ಮಾತನಾಡಿ, ನಳೀನ್ ಕುಮಾರ್ ಅವರ ಕರೆಯ ಮೇರೆಗೆ ಡ್ರಗ್ಸ್ ಮುಕ್ತ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ನಮ್ಮ ಕ್ಷೇತ್ರ, ರಾಜ್ಯ, ದೇಶವನ್ನು ಡ್ರಗ್ಸ್ ಮುಕ್ತವನ್ನಾಗಿಸಲು ಪ್ರತಿಜ್ಞೆ ಹಾಗೂ ಸಹಿ‌ ಸಂಗ್ರಹ ಮಾಡಿ ಜಾಗೃತಿ ಮೂಡಿಸುವ ಕಾರ್ಯ ಮಾಡಿದ್ದೇವೆ ಎಂದರು.

ಮಹದೇವಪುರ ಕ್ಷೇತ್ರದ ಯುವ ಮೋರ್ಚಾ ಅಧ್ಯಕ್ಷ ಪವನ್ ಮಾತನಾಡಿ ಮೊದಲು ನಮ್ಮ ಕ್ಷೇತ್ರ ಮಹದೇವಪುರವನ್ನು ಡ್ರಗ್ಸ್ ವ್ಯಸನ ಮುಕ್ತಗೊಳಿಸಿ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕಿದೆ. ಈ ಮೂಲಕ ವಿಶ್ವಕ್ಕೆ ಉತ್ತಮ ಸಂದೇಶ ಸಾರಬೇಕಿದೆ. ಈ ನಿಟ್ಟಿನಲ್ಲಿ ಯುವಸಮೂಹ ಜಾಗೃತರಾಗಬೇಕಿದೆ ಎಂದು ಸಲಹೆ ನೀಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.