ETV Bharat / state

ಡಿಕೆಶಿ ವಿರುದ್ಧ ಪ್ರಕರಣ ಹಿಂಪಡೆದ ಸರ್ಕಾರದ ನಿರ್ಧಾರ ಪ್ರಶ್ನಿಸಿ ಮತ್ತೆ ಹೈಕೋರ್ಟ್ ಕದ ತಟ್ಟಿದ ಯತ್ನಾಳ್

ಡಿಸಿಎಂ ಡಿ.ಕೆ.ಶಿವಕುಮಾರ್​ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಿಬಿಐಗೆ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದಿರುವ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​ ಹೈಕೋರ್ಟ್​ ಮೆಟ್ಟಿಲೇರಿದ್ದಾರೆ.

Etv Bharat
Etv Bharat
author img

By ETV Bharat Karnataka Team

Published : Dec 6, 2023, 9:31 PM IST

ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರವು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ನೀಡಿದ್ದ ಅನುಮತಿ ಹಿಂಪಡೆದಿರುವ ಸರ್ಕಾರದ ಆದೇಶ ಪ್ರಶ್ನಿಸಿ ಬಿಜೆಪಿಯ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಹೈಕೋರ್ಟ್ ಕದ ತಟ್ಟಿದ್ದಾರೆ. ಅರ್ಜಿ ಸಂಬಂಧ ಯತ್ನಾಳ್ ಪರವಾಗಿ ವಕೀಲ ವೆಂಕಟೇಶ್ ದಳವಾಯಿ ಅವರು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠದ ಮುಂದೆ ಪ್ರಕರಣವನ್ನು ಪ್ರಸ್ತಾಪಿಸಿದರು.

ಅರ್ಜಿ ವಿಚಾರಣೆ ಕೈಗೆತ್ತಿಗೊಂಡ ಪೀಠಕ್ಕೆ, ಅಡ್ವೊಕೇಟ್ ಜನರಲ್ ಕೆ.ಶಶಿಕಿರಣ್ ಶೆಟ್ಟಿ, ಅರ್ಜಿಯು ವಿಚಾರಣೆಗೆ ಅರ್ಹವಾಗಿಲ್ಲ ಎಂದು ತಿಳಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಅರ್ಜಿದಾರರ ಪರ ವಕೀಲರು, ಅರ್ಜಿಯು ನಿರ್ವಹಣೆಗೆ ಅರ್ಹವಾಗಿದೆ ಎಂದು ಸಾಬೀತುಪಡಿಸಲಾಗುವುದು ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ವಿಚಾರಣೆಯನ್ನು ಡಿಸೆಂಬರ್ 15ಕ್ಕೆ ಮೂಂದೂಡಲಾಗಿದೆ.

ಅರ್ಜಿಯ ವಿವರ: ಡಿ.ಕೆ.ಶಿವಕುಮಾರ್ ಅವರ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಿದ್ದ ಅನುಮೋದನೆಯನ್ನು ನವೆಂಬರ್ 28ರಂದು ರಾಜ್ಯ ಸರ್ಕಾರ ಹಿಂಪಡೆದಿರುವ ಆದೇಶವು ಕಾನೂನುಬಾಹಿರ ಎಂದು ಘೋಷಿಸಬೇಕು. ತನಿಖೆ ಪೂರ್ಣಗೊಳಿಸಿ ವಿಚಾರಣಾಧೀನ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಲು ಸಿಬಿಐಗೆ ನಿರ್ದೇಶಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿ ಇತ್ಯರ್ಥವಾಗುವವರೆಗೆ ರಾಜ್ಯ ಸರ್ಕಾರದ ಆದೇಶಕ್ಕೆ ತಡೆ ನೀಡಬೇಕು ಎಂದು ಮಧ್ಯಂತರ ಕೋರಿಕೆ ಸಲ್ಲಿಸಲಾಗಿದೆ.

ಅಲ್ಲದೆ, ಸಂಪುಟ ಸಚಿವರಾಗಿರುವ ಡಿ.ಕೆ.ಶಿವಕುಮಾರ್ ಅವರನ್ನು ರಕ್ಷಿಸಲು ರಾಜ್ಯ ಸರ್ಕಾರವು ಸಿಬಿಐಗೆ ನೀಡಿದ್ದ ಅನುಮೋದನೆಯನ್ನು ಹಿಂಪಡೆದಿದೆ. ಈ ಮೂಲಕ ತನಿಖೆಯಲ್ಲಿ ಮಧ್ಯಪ್ರವೇಶಿಸಲಾಗಿದೆ. ಆಕ್ಷೇಪಾರ್ಹ ಆದೇಶ ಹೊರಡಿಸಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಪ್ರಕರಣದ ಹಿನ್ನೆಲೆ: 2019ರ ಸೆಪ್ಟೆಂಬರ್ 25ರಂದು ಡೆಲ್ಲಿ ಎಸ್ಟಾಬ್ಲಿಷ್ಮೆಂಟ್ ಕಾಯಿದೆ(ಡಿಎಸ್ಪಿಇ) ಸೆಕ್ಷನ್ 6ರ ಅಡಿ ತನಿಖೆ ನಡೆಸಲು ಸಿಬಿಐಗೆ ರಾಜ್ಯ ಸರ್ಕಾರ ಅನುಮತಿಸಿತ್ತು. ಅದನ್ನು ಕಾಂಗ್ರೆಸ್ ನೇತೃತ್ವದ ಸರ್ಕಾರವು 2023ರ ನವೆಂಬರ್ 28ರಂದು ಹಿಂಪಡೆದಿತ್ತು. ಇದಕ್ಕೂ ಮುನ್ನ ಸಿಬಿಐ ತನಿಖೆ ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಏಕಸದಸ್ಯ ಪೀಠ ವಜಾ ಮಾಡಿತ್ತು. ಇದನ್ನು ಪ್ರಶ್ನಿಸಿ ಡಿ.ಕೆ.ಶಿವಕುಮಾರ್ ಮೇಲ್ಮನವಿ ಸಲ್ಲಿಸಿದ್ದರು.

ಮೇಲ್ಮನವಿ ವಿಚಾರಣಾ ಹಂತದಲ್ಲಿರುವಾಗಲೇ ಕಾಂಗ್ರೆಸ್ ಸರ್ಕಾರ ಸಿಬಿಐಗೆ ತನಿಖೆ ನಡೆಸಲು ನೀಡಿದ್ದ ಅನುಮತಿ ಹಿಂಪಡೆದಿತ್ತು. ಹೀಗಾಗಿ, ಡಿ.ಕೆ.ಶಿವಕುಮಾರ್ ಅವರು ಮೇಲ್ಮನವಿ ಹಿಂಪಡೆದಿದ್ದರು. ಈ ನೆಲೆಯಲ್ಲಿ ಹೈಕೋರ್ಟ್​ ವಿಭಾಗೀಯ ಪೀಠವು ಅರ್ಜಿ ಇತ್ಯರ್ಥಪಡಿಸಿತ್ತು. ಇಲ್ಲಿಯೂ ಯತ್ನಾಳ್ ಪರವಾಗಿ ಮಧ್ಯಪ್ರವೇಶಿಕೆ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಇದಕ್ಕೆ ನ್ಯಾಯಾಲಯವು ನಿರಾಕರಿಸಿತ್ತು.

ಇದನ್ನೂ ಓದಿ: ಕರ್ನಾಟಕಕ್ಕೆ ₹18 ಸಾವಿರ ಕೋಟಿ ಬರ ಪರಿಹಾರ ನೀಡುವಂತೆ ಕೇಂದ್ರಕ್ಕೆ ಖರ್ಗೆ ಒತ್ತಾಯ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.