ETV Bharat / state

ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ: ನಾಳೆ ಸಿಎಂ ಭೇಟಿಯಾಗಲಿರುವ ಈಶ್ವರ್ ಖಂಡ್ರೆ - ನಾಳೆ ಸಿಎಂ ಬೊಮ್ಮಾಯಿ ಭೇಟಿಯಾಗಲಿರುವ ಈಶ್ವರ್ ಖಂಡ್ರೆ

ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ವಿಚಾರದಲ್ಲಿ ಸರ್ಕಾರ ಧೋರಣೆ ತಾಳುತ್ತಿದೆ ಎಂದು ಕಾಂಗ್ರೆಸ್​ ಶಾಸಕ ಈಶ್ವರ್​​​ ಖಂಡ್ರೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ ವಿಚಾರವಾಗಿ ನಾಳೆ ಸಿಎಂ ಬೊಮ್ಮಾಯಿ ಅವರನ್ನು ಭೇಟಿ ಮಾಡಲಿದ್ದಾರೆ.

MLA Eshwar Khandre will meet CM Bommai tomorrow
ನಾಳೆ ಸಿಎಂ ಬೊಮ್ಮಾಯಿ ಭೇಟಿಯಾಗಲಿರುವ ಈಶ್ವರ್ ಖಂಡ್ರೆ
author img

By

Published : Feb 1, 2022, 7:56 PM IST

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಆಗುತ್ತಿದ್ದು, ಈ ಸಂಬಂಧ ನಾಳೆ ಸಿಎಂ ಬೊಮ್ಮಾಯಿಯವರನ್ನು ಭೇಟಿ ಮಾಡಲಿದ್ದೇವೆ ಎಂದು ಕಾಂಗ್ರೆಸ್ ಶಾಸಕ ಈಶ್ವರ್ ಖಂಡ್ರೆ ಹೇಳಿದರು.

ಕಲ್ಯಾಣ ಕರ್ನಾಟಕ ಭಾಗಕ್ಕೆ ಮಲತಾಯಿ ಧೋರಣೆ ಖಂಡಿಸಿದ ಈಶ್ವರ್ ಖಂಡ್ರೆ

ವಿಧಾನಸೌಧದಲ್ಲಿ ಕಾಂಗ್ರೆಸ್​​​​​​​​ ಕಲ್ಯಾಣ ಕರ್ನಾಟಕ ಭಾಗದ ಶಾಸಕರ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕಕ್ಕೆ ಕ್ರಿಯಾ ಯೋಜನೆ ಸಿದ್ಧಪಡಿಸಬೇಕಿತ್ತು. ಕಲ್ಯಾಣ ಕರ್ನಾಟಕ ಮಂಡಳಿ ಮಾಡುತ್ತೀವೆ ಎಂದು ಸಿಎಂ ಭರವಸೆ ಕೊಟ್ಟಿದ್ದರೂ ಆದರೆ ಈಡೇರಿಲ್ಲ. ಅನುದಾನ ನೀಡಿದರೂ ಕೂಡ ಅದು ಬಳಕೆಯಾಗುತ್ತಿಲ್ಲ. ಸುಮಾರು 1,130 ಕೋಟಿಗೆ ಅನುದಾನ ಇಳಿಕೆ ಮಾಡಿದ್ದಾರೆ. ಕೋವಿಡ್ ಕಾರಣದಿಂದ ಶೇ.20 ಮಾತ್ರ ಅನುದಾನ ಬಳಕೆ ಮಾಡ್ತಿದ್ದಾರೆ. ಕಳೆದ ಬಜೆಟ್​​​​ನಲ್ಲಿ ಘೋಷಣೆ ಮಾಡಿದ ಅನುದಾನಕ್ಕೆ ಫೆಬ್ರವರಿ ಬಂದರೂ ಕ್ರಿಯಾ ಯೋಜನೆ ಮಾಡಿಲ್ಲ ಎಂದು ಕಿಡಿಕಾರಿದರು.

ಇಲ್ಲಿಯವರೆಗೆ ಬರಿ 250 ಕೋಟಿ ಹಣ ಖರ್ಚು ಮಾಡಲಾಗಿದೆ. ಕಲ್ಯಾಣ ಕರ್ನಾಟಕ ಭಾಗದವರನ್ನು ಎರಡನೇ ದರ್ಜೆಯ ನಾಗರಿಕರಂತೆ ನೋಡಲಾಗುತ್ತಿದೆ. ಈ ಭಾಗಕ್ಕೆ ಯುಪಿಎ ಸರ್ಕಾರ ಇದ್ದಾಗ 371ಜೆ ವಿಶೇಷ ಸ್ಥಾನಮಾನ ನೀಡಲಾಗಿತ್ತು. ಕಾಂಗ್ರೆಸ್ ಸರ್ಕಾರ‌ ಇದ್ದಾಗ 2013-18ರವರಗೆ 600 ರಿಂದ 1200 ಕೋಟಿ ಅನುದಾನ ನೀಡಲಾಗಿತ್ತು. 30 ಸಾವಿರಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಲಾಗಿತ್ತು. ಆದರೆ ಈಗ ನೇಮಕಾತಿಯಲ್ಲೂ ತಾರತಮ್ಯ ಮಾಡಲಾಗುತ್ತಿದೆ.‌ ಈ ಬಗ್ಗೆ ಸಿಎಂ ಭೇಟಿಯಾಗಿ ಮನವಿ ಮಾಡಲಿದ್ದೇವೆ ಎಂದು ಖಂಡ್ರೆ ಹೇಳಿದ್ರು.

ಇದನ್ನೂ ಓದಿ: ಇದು 'ಸಬ್ ಕಾ ವಿನಾಶ್ ಬಜೆಟ್' - ಸಿದ್ದರಾಮಯ್ಯ

ಅದೇ ರೀತಿ ಕಲ್ಯಾಣ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕಲ್ಯಾಣ ಕ್ರಾಂತಿ ಯಾತ್ರೆ ನಡೆಸಲು ನಿರ್ಧರಿಸಿದ್ದೇವೆ. ಆ ಮೂಲಕ ಈ ಭಾಗದ ಸಮಸ್ಯೆಗಳ ಬಗ್ಗೆ ಜನಜಾಗೃತಿ ಮೂಡಿಸಲಿದ್ದೇವೆ ಎಂದರು.

ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.