ಬೆಂಗಳೂರು: ನ್ಯೂ ತರಗುಪೇಟೆ ಬಳಿಯ ಮಹಾಕಾಳಿ ಅಮ್ಮನ್ ಲಾರಿ ಸರ್ವಿಸ್ ಗೋದಾಮಿನಲ್ಲಿ ಸಂಭವಿಸಿದ ಸ್ಫೋಟದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಶಾಸಕ ಜಮೀರ್ ಅಹ್ಮದ್ ತಲಾ 2 ಲಕ್ಷ ರೂಪಾಯಿ ಪರಿಹಾರಧನ ಘೋಷಿಸಿದ್ದಾರೆ.
ಇಂದು ಬೆಳಗ್ಗೆ 11.15 ರಿಂದ 11.30 ಗಂಟೆಯೊಳಗೆ ಗೋದಾಮಿನಲ್ಲಿ ಸ್ಫೋಟ ಸಂಭವಿಸಿದ್ದು, ಸ್ಫೋಟದ ತೀವ್ರತೆಗೆ ಮನೋಹರ್ ಮತ್ತು ಗುಡ್ಡದಹಳ್ಳಿ ಪಂಕ್ಚರ್ ಮಾಲೀಕ ಅಸ್ಲಾಂ ಪಾಷ ಎಂಬುವರ ದೇಹಗಳು ಛಿದ್ರ ಛಿದ್ರವಾಗಿವೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಶಾಸಕ ಜಮೀರ್ ಅಹಮದ್ ಆಗಮಿಸಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಕ್ಕೆ 2 ತಲಾ ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.
ಘಟನೆಯಲ್ಲಿ ಐವರು ತೀವ್ರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ತಾವೇ ಭರಿಸುವುದಾಗಿ ಶಾಸಕ ಜಮೀರ್ ತಿಳಿಸಿದ್ದಾರೆ. ಸ್ಫೋಟದಲ್ಲಿ ಮೃತರಾದ ಇಬ್ಬರು ಹಾಗೂ ಮೃತರು ಹಾಗೂ ಗಾಯಾಳುಗಳು ಎಲ್ಲರೂ ಸ್ಥಳೀಯರೇ ಎಂದು ತಿಳಿದು ಬಂದಿದೆ. ಈ ದುರ್ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಗ್ನಿಶಾಮಕ ಸಿಬ್ಬಂದಿ ಹಾಗೂ ಪೊಲೀಸರ ತನಿಖೆ ಬಳಿಕ ಘಟನೆಗೆ ನಿಖರ ಕಾರಣ ಗೊತ್ತಾಗಲಿದೆ.
ಮಾಜಿ ಕಾರ್ಪೊರೇಟರ್ ಸ್ಥಳಕ್ಕೆ ಭೇಟಿ:
ಸ್ಥಳಕ್ಕೆ ಮಾಜಿ ಕಾರ್ಪೊರೇಟರ್ ಇಮ್ರಾನ್ ಪಾಷಾ ಆಗಮಿಸಿದ್ದು, ಗೋದಾಮಿನಲ್ಲಿ ಅಕ್ರಮವಾಗಿ ಪಟಾಕಿ ಸಂಗ್ರಹಿಸಿರುವುದು ಇಬ್ಬರ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಬೆಂಗಳೂರಿನಲ್ಲಿ ಮತ್ತೊಂದು ದುರಂತ: ಅನುಮಾನಾಸ್ಪದ ಸ್ಫೋಟದಲ್ಲಿ ಇಬ್ಬರು ದುರ್ಮರಣ