ETV Bharat / state

ಮುಂಬೈನಲ್ಲಿ ಕಾಲಿನ ಶಸ್ತ್ರಚಿಕಿತ್ಸೆಗೊಳಗಾದ ಶಾಸಕ ಎಂ ಪಿ ರೇಣುಕಾಚಾರ್ಯ - ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ

ಶಾಸಕ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ಸರ್ಜರಿ ನೆಡೆಸಿದೆ. 15 ದಿನಗಳ ವಿಶ್ರಾಂತಿಗಾಗಿ ಆಯುರ್ವೇದ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ..

ಮುಂಬೈನಲ್ಲಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾದ ಎಂ.ಪಿ. ರೇಣುಕಾಚಾರ್ಯ

author img

By

Published : Oct 27, 2021, 10:38 PM IST

ಬೆಂಗಳೂರು : ಕಾಲು ನೋವಿಗೆ ಒಳಗಾಗಿದ್ದ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ ಪಿ ರೇಣುಕಾಚಾರ್ಯ ಮುಂಬೈನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಆರೈಕೆಗಾಗಿ ವೈದ್ಯರ ಸಲಹೆ ಮೇರೆಗೆ ಬೆಂಗಳೂರಿನ ಆಯುರ್ವೇದ ಆಸ್ಪತ್ರೆಗೆ ದಾಖಲಾಗಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ರೇಣುಕಾಚಾರ್ಯ, ವಿಧಾನಸಭಾ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಸಂಭವಿಸಿದ್ದ ಅಪಘಾತದಿಂದಾಗಿ ಕಳೆದ ಕೆಲ ತಿಂಗಳಿಂದ ಕಾಲು ನೋವು ಕಾಣಿಸಿತ್ತು. ವೈದ್ಯರ ಸಲಹೆ ಮೇರೆಗೆ ಮುಂಬೈ ಆಸ್ಪತೆಯಲ್ಲಿ ಆಪರೇಷನ್​​ಗೊಳಗಾಗಿದ್ದೇನೆ.

ನಿಮ್ಮೆಲ್ಲರ ಹಾರೈಕೆ ಹಾಗೂ ಆಶೀರ್ವಾದದಿಂದ ಗುಣಮುಖನಾಗುತ್ತಿದ್ದೇನೆ. ವೈದ್ಯರ ಸಲಹೆ ಮೇರೆಗೆ ಮುಂದಿನ 15 ದಿನಗಳು ಬೆಂಗಳೂರಿನ ಆಯುರ್ವೇದಿಕ್ ಆಸ್ಪತೆಗೆ ದಾಖಲಾಗುತ್ತಿದ್ದೇನೆ ಎಂದು ಮಾಹಿತಿ ನೀಡಿದ್ದಾರೆ.

ಶಾಸಕ ಡಾ. ಶಿವರಾಜ್ ಪಾಟೀಲ್ ಅವರ ಮಾರ್ಗದರ್ಶನ ಹಾಗೂ ಡಾ. ವಿಜಯ್ ಶೆಟ್ಟಿ ನೇತೃತ್ವದ ತಂಡ ಯಶಸ್ವಿಯಾಗಿ ಸರ್ಜರಿ ನೆಡೆಸಿದೆ. 15 ದಿನಗಳ ವಿಶ್ರಾಂತಿಗಾಗಿ ಆಯುರ್ವೇದ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ ಎಂದು ತಿಳಿಸಿದ್ದಾರೆ.

For All Latest Updates

ETV Bharat Logo

Copyright © 2025 Ushodaya Enterprises Pvt. Ltd., All Rights Reserved.