ETV Bharat / state

ಶಾಸಕ ನಾರಾಯಣರಾವ್ ಅಗಲಿಕೆಗೆ ಕಾಂಗ್ರೆಸ್ ನಾಯಕರಿಂದ ಸಂತಾಪ - ಶಾಸಕ ನಾರಾಯಣರಾವ್​ ಸುದ್ದಿ,

ಬಸವಕಲ್ಯಾಣ ಶಾಸಕ ನಾರಾಯಣರಾವ್ ಅಗಲಿಕೆಗೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

MLA Narayan rao passes away, state congress leaders condolences, MLA Narayan rao passes away news, MLA Narayan rao passes away latest news, ಶಾಸಕ ನಾರಾಯಣರಾವ್​ ನಿಧನ, ಕಾಂಗ್ರೆಸ್​ ನಾಯಕರಿಂದ ಸಂತಾಪ, ಶಾಸಕ ನಾರಾಯಣರಾವ್​ ಸುದ್ದಿ, ಶಾಸಕ ನಾರಾಯಣರಾವ್​ ನಿಧನ ಸುದ್ದಿ,
ಶಾಸಕ ನಾರಾಯಣರಾವ್ ಅಗಲಿಕೆಗೆ ಕಾಂಗ್ರೆಸ್ ನಾಯಕರಿಂದ ಸಂತಾಪ
author img

By

Published : Sep 24, 2020, 6:11 PM IST

ಬೆಂಗಳೂರು: ಕೋವಿಡ್ -19 ಗೆ ಇಂದು ಬಲಿಯಾದ ಬಸವಕಲ್ಯಾಣ ಶಾಸಕ ನಾರಾಯಣ ರಾವ್​ಗೆ ಕಾಂಗ್ರೆಸ್ ನಾಯಕರು ಸಂತಾಪ ಸೂಚಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಕಾರ್ಯಾಧ್ಯಕ್ಷರಾದ ಈಶ್ವರ್ ಖಂಡ್ರೆ, ಸಲೀಂ ಅಹಮದ್ ಮತ್ತಿತರ ನಾಯಕರು ಶಾಸಕ ನಾರಾಯಣರಾವ್​ ಅಗಲಿಕೆಗೆ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ಶಾಸಕರ ಅಗಲಿಕೆಯ ನೋವು ಭರಿಸುವ ಶಕ್ತಿ ಸಿಗಲಿ ಎಂದು ತಿಳಿಸಿದ್ದಾರೆ.

ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ತಮ್ಮ ಸಂತಾಪ ಸಂದೇಶದಲ್ಲಿ, ಮೊದಲ‌ ಸಲ ಶಾಸಕರಾಗಿ ಭರವಸೆಯ ನಾಯಕನಾಗಿ ಬೆಳೆಯುತ್ತಿದ್ದ ಬಿ.ನಾರಾಯಣ ರಾವ್ ನಡುಹಾದಿಯಲ್ಲಿ
ಬಾಳಪಯಣ ಕೊನೆಗೊಳಿಸಿ ನಮ್ಮನ್ನು ಶೋಕದಲ್ಲಿ ಮುಳುಗಿಸಿದ್ದಾರೆ. ವೈಯಕ್ತಿಕವಾಗಿ ನನಗೆ ಆತ್ಮೀಯರಾಗಿದ್ದ ನಾರಾಯಣ ರಾವ್, ಹಲವಾರು ಕನಸುಗಳನ್ನು ಕಟ್ಟಿಕೊಂಡಿದ್ದ ಸಾಮಾಜಿಕ ಬದ್ದತೆಯ ನಾಯಕ. ಹೀಗಾಗಬಾರದಿತ್ತು. ನನ್ನ ಸಂತಾಪಗಳು ಎಂದಿದ್ದಾರೆ.

ಬಸವಕಲ್ಯಾಣ ಶಾಸಕರಾದ ನಾರಾಯಣರಾವ್ ಅಗಲಿಕೆ ತೀವ್ರ ನೋವು ತಂದಿದೆ. ಕೋವಿಡ್ 19 ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ. ಅವರು ಬದ್ಧ ಕಾಂಗ್ರೆಸ್ ನಾಯಕರಾಗಿದ್ದರು. ಸರಳತೆ ಹಾಗೂ ಬಡವರಿಗೆ ಸಹಾಯ ಮಾಡುವ ಮೂಲಕ ಹೆಸರುವಾಸಿಯಾಗಿದ್ದರು. ಈ ದುಃಖದ ಸಂದರ್ಭದಲ್ಲಿ ಅವರ ಕುಟುಂಬ ಸದಸ್ಯರಿಗೆ ನನ್ನ ಸಂತಾಪಗಳು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ತಮ್ಮ ಟ್ವೀಟ್​ನಲ್ಲಿ, ಸಮಾಜದ ಬಗ್ಗೆ ಅಪಾರ ಕಾಳಜಿಯನ್ನು ವಹಿಸುತ್ತಿದ್ದ ಹೋರಾಟಗಾರರೂ ಹಾಗೂ ಆತ್ಮೀಯ ಸ್ನೇಹಿತರೂ ಆಗಿದ್ದ ಬಸವಕಲ್ಯಾಣ ಕ್ಷೇತ್ರದ ಶಾಸಕರಾದ ನಾರಾಯಣ ರಾವ್ ಅವರ ನಿಧನದ ಸುದ್ದಿ ತೀವ್ರ ದುಃಖ ತಂದಿದೆ. ಅಗಲಿದ ಜೀವಕ್ಕೆ ನನ್ನ ಸಂತಾಪಗಳು. ದೇವರು ಅವರ ಕುಟುಂಬ ವರ್ಗ ಹಾಗೂ ಅಭಿಮಾನಿ ಬಳಗಕ್ಕೆ ನೋವು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ.

ಬೀದರ್ ಜಿಲ್ಲೆ ಬಸವಕಲ್ಯಾಣದ ಜನಪ್ರಿಯ ಶಾಸಕರಾಗಿದ್ದ ನಾರಾಯಣ ರಾವ್ ಮಾರಕ ಕೋವಿಡ್ -19 ಮತ್ತು ಬಹು ಅಂಗಾಗ ವೈಫಲ್ಯದಿಂದ ಮೃತಪಟ್ಟಿರುವುದು ನಿಜಕ್ಕೂತೀವ್ರ ದುಃಖದ ಸಂಗತಿಯಾಗಿದೆ. ನನ್ನ ಪಕ್ಕದ ಕ್ಷೇತ್ರದವರೂ ಹಾಗೂ ನಮ್ಮ ಪಕ್ಷದವರೇ ಆಗಿದ್ದ ನಾರಾಯಣ ರಾವ್ ಅತ್ಯಂತ ಸಜ್ಜನ ಮತ್ತು ಸ್ನೇಹಜೀವಿಯಾಗಿದ್ದರು. ಅವರ ನಿಧನದಿಂದ ರಾಜ್ಯಕ್ಕೆ, ಬೀದರ್ ಜಿಲ್ಲೆಗೆ, ಬಸವ ಕಲ್ಯಾಣದ ಜನತೆಗೆ ತುಂಬಲಾರದ ನಷ್ಟವಾಗಿದೆ ಎಂದು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ಸಂತಾಪ ಸೂಚಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.