ಬೆಂಗಳೂರು: ಕುಡುಚಿ ವಿಧಾನಸಭಾ ಕ್ಷೇತ್ರದ ಶಾಸಕ ಪಿ.ರಾಜೀವ್‌ರನ್ನು ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ಅನ್ವಯವಾಗುವಂತೆ ಸಂಪುಟದರ್ಜೆ ಸ್ಥಾನಮಾನ ನೀಡಿ ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮನದ ಅಧ್ಯಕ್ಷ ಸ್ಥಾನ ನೀಡಿ ಆದೇಶ ಹೊರಡಿಸಲಾಗಿದೆ.

ಸಚಿವ ಸ್ಥಾನದ ಆಕಾಂಕ್ಷಿಗಳನ್ನು ಓಲೈಸಲು ಮುಂದಾಗಿರುವ ಮುಖ್ಯಮಂತ್ರಿ ಯಡಿಯೂರಪ್ಪ ಕೆಲವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಮತ್ತೆ ಕೆಲವರಿಗೆ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಿ ಸಮಾಧಾನ ಪಡಿಸುತ್ತಿದ್ದು, ಇಂದು ಶಾಸಕ ಪಿ.ರಾಜೀವ್‌ರಿಗೆ ತಾಂಡಾ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನಕ್ಕೆ ನೇಮಿಸಲಾಗಿದೆ.