ಬೆಂಗಳೂರು : ಬಿ ಎಸ್ ಯಡಿಯೂರಪ್ಪ ಅವರೇ ಮುಂದಿನ ಮೂರು ವರ್ಷ ಸಿಎಂ.. ಇದು ಬಿಎಸ್ವೈ ಅವರ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಅವರ ಸ್ಪಷ್ಟನುಡಿ. ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಸರ್ಕಾರದ ಪೂರ್ಣಾವಧಿ ಮುಗಿಸುತ್ತಾರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಎದೆ ಬಗೆದು ತೋರಿಸಬೇಕಾ? ಖಂಡಿತವಾಗಿ ಅವರು ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ ಎಂದರು.
ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಾಧ್ಯಮಗಳು ವರ್ಣರಂಜಿತವಾಗಿ ತೋರಿಸುತ್ತೀರಿ ಎಂದು ಇದೇ ವೇಳೆ ಅಸಮಾಧಾನ ವ್ಯಕ್ತಪಡಿಸಿದರು. ಮುಂದುವರೆದು ಮಾತನಾಡಿದ ಅವರು, ಇಬ್ಬರೂ ನಾಯಕರನ್ನು ಪಕ್ಷ ಆಯ್ಕೆ ಮಾಡಿದೆ. ಅವರು ತಳಮಟ್ಟದಿಂದ ಕೆಲಸ ಮಾಡಿದ್ದಾರೆ. ಹೈಕಮಾಂಡ್ ಹೇಳಿದ ಮೇಲೆ ಒಪ್ಪಿಕೊಳ್ಳಲೇಬೇಕು ಎಂದರು.
ಇದೇ ಸಂದರ್ಭದಲ್ಲಿ ಸಚಿವ ಸಿಟಿ ರವಿ ಹೇಳಿಕೆ ವಿಚಾರವಾಗಿ ಪ್ರಶ್ನಿಸಿದಕ್ಕೆ, ಇದನ್ನು ಅವರ ಬಳಿ ಕೇಳಿ, ಯಡಿಯೂರಪ್ಪ ಅವರ ಕೆಲಸವನ್ನು ಪ್ರಧಾನಿ ಮೋದಿ, ಅಮಿತ್ ಶಾ ಒಪ್ಪಿಕೊಂಡಿದ್ದಾರೆ. ನಾವೂ ಅವರನ್ನು ಒಪ್ಪಿಕೊಂಡಿದ್ದೇವೆ ಎಂದು ಸಮಜಾಯಿಷಿ ಕೊಟ್ಟರು.
ಕೋರ್ ಕಮಿಟಿ ಮೀಟಿಂಗ್‌ನಲ್ಲಿ ಯಾರ ಹೆಸರು ಹೋಗಿತ್ತು ಅನ್ನೋದು ನನಗೆ ಗೊತ್ತಿಲ್ಲ ಎಂದ ರೇಣುಕಾಚಾರ್ಯ, ಊಟಕ್ಕೆ ಹೋಗಿದ್ದಾಗಿ ಉಮೇಶ್ ಕತ್ತಿ ಸಿಎಂ ಬಳಿ ಸ್ಪಷ್ಟವಾಗಿ ಹೇಳಿದ್ದಾರೆ ಎಂದರು.