ETV Bharat / state

ತುಳು ಪ್ರತ್ಯೇಕ ರಾಜ್ಯ ಬೇಕಿಲ್ಲ, ರಾಜ್ಯ ಭಾಷೆಯ ಮಾನ್ಯತೆಯಷ್ಟೇ ಕೇಳಿದ್ದೇವೆ: ಸಚಿವ ಎಸ್. ಅಂಗಾರ - ತುಳು ಪ್ರತ್ಯೇಕ ರಾಜ್ಯ

ತುಳುವರು ಎಂದೂ ಪ್ರತ್ಯೇಕ ರಾಜ್ಯ ಕೇಳುವವರಲ್ಲ. ಆದರೆ ತುಳುವಿಗೆ ರಾಜ್ಯ ಭಾಷೆ ಮಾನ್ಯತೆ ಕೇಳುತ್ತಿದ್ದೇವೆ. ಇದರಿಂದ 1-5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಛಿಕ ಭಾಷೆಯಾಗಿ ಕಲಿಸಲಾಗುತ್ತದೆ ಎಂದಿದ್ದಾರೆ.

ಸಚಿವ ಎಸ್. ಅಂಗಾರ
ಸಚಿವ ಎಸ್. ಅಂಗಾರ
author img

By

Published : Feb 24, 2021, 7:49 PM IST

ಬೆಂಗಳೂರು: ತುಳು‌ಲಿಪಿಯನ್ನು ಉಳಿಸಬೇಕೆಂಬ ಕಾರಣಕ್ಕೆ ತುಳುವಿಗೆ ರಾಜ್ಯ ಭಾಷೆಯ ಮಾನ್ಯತೆ ಕೇಳುತ್ತಿದ್ದೇವೆ‌ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ತುಳುವರು ಎಂದೂ ಪ್ರತ್ಯೇಕ ರಾಜ್ಯ ಕೇಳುವವರಲ್ಲ. ಆದರೆ, ತುಳುವಿಗೆ ರಾಜ್ಯ ಭಾಷೆ ಮಾನ್ಯತೆ ಕೇಳುತ್ತಿದ್ದೇವೆ. ಇದರಿಂದ 1-5ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ತುಳು ಭಾಷೆಯನ್ನು ಐಚ್ಛಿಕ ಭಾಷೆಯಾಗಿ ಕಲಿಸಲಾಗುತ್ತದೆ ಎಂದರು.

ತುಳು ಪ್ರತ್ಯೇಕ ರಾಜ್ಯ ಬೇಕಿಲ್ಲ, ರಾಜ್ಯ ಭಾಷೆಯ ಮಾನ್ಯತೆಯಷ್ಟೇ ಕೇಳಿದ್ದೇವೆ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್ ಮಾತನಾಡಿ, ತುಳು ಸಂಸ್ಕೃತಕ್ಕೆ ಲಿಪಿಕೊಟ್ಟ ಭಾಷೆ. ತುಳುವನ್ನು ಸಂವಿಧಾನದ 8ನೇ ಪರಿಚ್ಛೇದಕ್ಕೆ ಸೇರಿಸಿ ರಾಜ್ಯಭಾಷೆಯ ಮಾನ್ಯತೆ ನೀಡಬೇಕೆಂಬ ಒತ್ತಾಯವಿದೆ. ಇದುವರೆಗೆ ಕೇಂದ್ರಕ್ಕೆ 5ಕ್ಕೂ ಹೆಚ್ಚು ಬಾರಿ ಮನವಿ ಸಲ್ಲಿಸಿದ್ದೇವೆ. ಆದರೆ ಬೇಡಿಕೆ ಈಡೇರಿಲ್ಲ‌ ಎಂದರು.

ಪ್ರಶಸ್ತಿ ಪ್ರದಾನ

ಇದೇ ವೇಳೆ ಮಾತನಾಡಿದ ಸಚಿವ ಅಂಗಾರ, ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 7ರಂದು ತುಳು ಅಕಾಡೆಮಿ ಗೌರವ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದ್ದು, ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ ಸದಾನಂದಗೌಡ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ ಎಂದು ತಿಳಿಸಿದರು.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಜಿ. ಕತ್ತಲ್ ಸಾರ್​ ಮಾತನಾಡಿ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ 2018, 2019 ಮತ್ತು 2020ನೇ ಸಾಲಿನ ಗೌರವ ಪ್ರಶಸ್ತಿ ಮತ್ತು ಪುಸ್ತಕ ಬಹುಮಾನ ಪ್ರದಾನ ಸಮಾರಂಭವು ವಿವಿಧ ಸಾಂಸ್ಕೃತಿಕ ಮತ್ತು ವಿಚಾರಗೋಷ್ಠಿಯ ಮೂಲಕ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 7ರಂದು 9-30ರಿಂದ ರಾತ್ರಿ 8ರವರೆಗೆ ನಡೆಯಲಿದೆ. ಬೆಳಿಗ್ಗೆ 9.30ಕ್ಕೆ ಆರಂಭವಾಗುವ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮವನ್ನು ಬೆಂಗಳೂರಿನ ವಿವಿಧ ಕಲಾ ತಂಡದ ಕಲಾವಿದರು ನಡೆಸಿಕೊಡಲಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಅರವಿಂದ ಲಿಂಬಾವಳಿ, ಮಾಜಿ ಸಚಿವ ಸಿ.ಟಿ ರವಿ ಮತ್ತಿತರ ಗಣ್ಯರು ಭಾಗವಹಿಸಲಿದ್ದಾರೆ.
ಸಂಜೆ 4.00ಕ್ಕೆ ರಾಜ್ಯ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರು ರಾಜ್ಯ ಮುಜುರಾಯಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಅವರು ತುಳು ಅಕಾಡೆಮಿಯ ಮದಿಪು ಪತ್ರಿಕೆಯನ್ನು ಬಿಡುಗಡೆಗೊಳಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ: ಸಂಸ್ಕೃತಿ, ಪರಂಪರೆಗೆ ಧಕ್ಕೆಯಾಗದ ರೀತಿಯಲ್ಲಿ ಮಂಗಳೂರು ಬೆಳೆಯಬೇಕು: ನಳಿನ್ ಕುಮಾರ್ ಕಟೀಲ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.