ಬೆಂಗಳೂರು: ಕೊರೊನಾ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ನಗರದ ತಾಲೂಕು ಕಚೇರಿಯಲ್ಲಿ ಶಾಸಕ ಶರತ್ ಬಚ್ಚೇಗೌಡ ತಾಲೂಕಿನ ಹಲವು ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಹಲವು ಇಲಾಖೆಗಳ ಅಧಿಕಾರಿಗಳೊಂದಿಗೆ ಶಾಸಕ ಶರತ್ ಬಚ್ಚೇಗೌಡ ಸಭೆ ಸಭೆಯಲ್ಲಿ ಮಾತನಾಡಿದ ಅವರು, ಹೊಸಕೋಟೆಯಲ್ಲಿ ಇದುವರೆಗೂ ಯಾವುದೇ ಕೊರೊನಾ ಪ್ರಕರಣ ಪತ್ತೆಯಾಗಿಲ್ಲ. ಇನ್ನು ತಾಲೂಕಿನಾದ್ಯಂತ ಹಲವೆಡೆ ಫೀವರ್ ಕ್ಲಿನಿಕ್ಗಳನ್ನು ತೆರೆಯಲಾಗಿದೆ. ಯಾರಿಗಾದರೂ ಜ್ವರ ಕಂಡು ಬಂದಲ್ಲಿ ಕೂಡಲೇ ಫೀವರ್ ಕ್ಲಿನಿಕ್ಗಳಿಗೆ ಭೇಟಿ ನೀಡಿ, ಅಂತರ ಕಾಯ್ದುಕೊಂಡು ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚನೆ ನೀಡಿದರು. ನಂತರ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಹಾಗೂ ನಂದಗುಡಿ ಪಂಚಾಯ್ತಿಗೆ ಭೇಟಿ ನೀಡಿ, ಕೊರೊನಾ ವೈರಸ್ ಹರಡದಂತೆ ಪಂಚಾಯ್ತಿಯಿಂದ ಕೈಗೊಂಡಿರುವ ಅಗತ್ಯ ಕ್ರಮಗಳ ಬಗ್ಗೆ ಅಧಿಕಾರಿಗಳಿಂದ ವರದಿ ಪಡೆದುಕೊಂಡರು. ಬಳಿಕ ಸೋಂಕು ಹರಡದಂತೆ ಸೂಕ್ತ ಕ್ರಮ ಕೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಮನೆಯಲ್ಲೇ ಇದ್ದು, ನಿಮ್ಮ ಪ್ರಾಣವನ್ನು ರಕ್ಷಿಸಿಕೊಳ್ಳಿ. ಕೊರೊನಾ ಹರಡುವ ಭೀತಿಯಿಂದ ದೇಶಾದ್ಯಂತ ಲಾಕ್ಡೌನ್ ಜಾರಿಯಾಗಿದೆ. ಆದ್ದರಿಂದ ಸಾರ್ವಜನಿಕರು ಕಡ್ಡಾಯವಾಗಿ ಮನೆಯಲ್ಲೇ ಇದ್ದು, ಸಹಕರಿಸಬೇಕೆಂದು ಮನವಿ ಮಾಡಿದರು.