ETV Bharat / state

ಜಯನಗರ ಶಾಸಕಿ ಸೌಮ್ಯರೆಡ್ಡಿಗೆ ಸೇರಿದ್ದ ಕಾರು ಜಪ್ತಿ - ಈಟಿವಿ ಭಾರತ ಕನ್ನಡ

ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿ ಅವರಿಗೆ ಸೇರಿದ್ದ ಕಾರನ್ನು ಚುನಾವಣಾ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

mla-soumya-reddy-car-seized-by-officers
ಶಾಸಕಿ ಸೌಮ್ಯರೆಡ್ಡಿಗೆ ಸೇರಿದ್ದ ಕಾರು ಜಪ್ತಿ ಮಾಡಿದ ಚುನಾವಣಾ ಅಧಿಕಾರಿಗಳು
author img

By

Published : Apr 6, 2023, 6:59 PM IST

Updated : Apr 6, 2023, 7:47 PM IST

ಬೆಂಗಳೂರು : ಜಯನಗರ ವಿಧಾನಸಭಾ ಕ್ಷೇತ್ರದ ಶಾಸಕಿ ಸೌಮ್ಯರೆಡ್ಡಿಗೆ ಸೇರಿದ್ದ ಕಾರನ್ನು ಚುನಾವಣಾ ಪ್ಲೇಯಿಂಗ್ ಸ್ವ್ಕಾಡ್ ಅಧಿಕಾರಿಗಳನ್ನು ವಶಕ್ಕೆ ಪಡೆದಿದ್ದಾರೆ. ತಿಲಕ್ ‌ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಚೆಕ್ ಪೋಸ್ಟ್‌ನಲ್ಲಿ ಬರುತ್ತಿದ್ದ ಸೌಮ್ಯರೆಡ್ಡಿ ಅವರಿಗೆ ಸೇರಿದ್ದ ಕಾರು ತಡೆದು ತಪಾಸಣೆ ನಡೆಸಿದ ಪೊಲೀಸರಿಗೆ ಕೆಲವು ವಸ್ತುಗಳು ಪತ್ತೆಯಾಗಿವೆ.

ಕಾರಿನಲ್ಲಿ 23 ಸೀರೆಗಳು, 30ಕ್ಕಿಂತ ಹೆಚ್ಚು ಬ್ಲೌಸ್ ಪೀಸ್‌ಗಳು, ಸ್ಯಾಮ್ಸಂಗ್​, ನೋಕಿಯಾ ಸೇರಿದಂತೆ ವಿವಿಧ ಕಂಪನಿಗಳ ಮೊಬೈಲ್‌ಗಳು, 16 ಶಾಲುಗಳು ಹಾಗೂ ಪ್ರೋಗ್ರೆಸ್‌ ರಿಪೋರ್ಟ್ ಇರುವ ಬುಕ್ ಲೆಟ್ ಗಳು ಪತ್ತೆಯಾಗಿವೆ ಎಂದು ಹೇಳಲಾಗಿದೆ. ವಸ್ತುಗಳನ್ನು ಮತ್ತು ಕಾರು ವಶಕ್ಕೆ ಪಡೆದಿರುವ ಚುನಾವಣಾ ಅಧಿಕಾರಿಗಳು ತಿಲಕ್‌ ನಗರ ಪೊಲೀಸರಿಗೆ ಒಪ್ಪಿಸಿದ್ದಾರೆ. ತಪಾಸಣೆ ವೇಳೆ ಸೌಮ್ಯರೆಡ್ಡಿ ಕಾರಿನಲ್ಲಿ ಇರಲಿಲ್ಲ. ಚಾಲಕನನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸೊಂಟದಲ್ಲಿಟ್ಟು ಹಣ ಸಾಗಾಟ: ದಾವಣಗೆರೆಯಲ್ಲಿ ಸೊಂಟದಲ್ಲಿಟ್ಟುಕೊಂಡು ಅಕ್ರಮವಾಗಿ ಹಣ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆರೋಪಿಗಳಿಂದ ಸುಮಾರು 7.5 ಲಕ್ಷ ರೂಪಾಯಿಯನ್ನು ಅಧಿಕಾರಿಗಳು ಜಪ್ತಿ ಮಾಡಿಕೊಂಡಿದ್ದಾರೆ. ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲೂಕಿನ ಜೀನಹಳ್ಳಿ ಚೆಕ್​ಪೋಸ್ಟ್​​ನಲ್ಲಿ ಘಟನೆ ನಡೆದಿದ್ದು ಇದೀಗ ಬೆಳಕಿಗೆ ಬಂದಿದೆ. ಆರೋಪಿಗಳನ್ನು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ಮೂಲದ ಸೈಫುಲ್ಲಾ ಮತ್ತು ಕುಮಾರ್​ ಎಂದು ಗುರುತಿಸಲಾಗಿದೆ.

ಕಳೆದ ಬುಧವಾರ ತಡರಾತ್ರಿ ಸುಮಾರು 12 ಗಂಟೆ ಹೊತ್ತಿಗೆ ಜೀನಹಳ್ಳಿ ಚೆಕ್​ಪೋಸ್ಟ್​ನಲ್ಲಿ ಪೊಲೀಸರು ಮತ್ತು ಚುನಾವಣಾ ಅಧಿಕಾರಿಗಳು ವಾಹನಗಳನ್ನು ತಪಾಸಣೆ ನಡೆಸುತ್ತಿದ್ದಾಗ ಇವರು ಸಿಕ್ಕಿಬಿದ್ದಿದ್ದಾರೆ. ಬೈಕ್​ ಸವಾರರ ವರ್ತನೆಯಿಂದ ಅನುಮಾನಗೊಂಡ ಪೊಲೀಸರು ಹೆಚ್ಚಿನ ತಪಾಸಣೆ ನಡೆಸಿದಾಗ ಆರೋಪಿಗಳು ತಮ್ಮ ಸೊಂಟದ ಸುತ್ತ ಹಣವನ್ನು ಕಟ್ಟಿಕೊಂಡು ಸಾಗಣೆ ಮಾಡುತ್ತಿರುವುದು ಪತ್ತೆಯಾಗಿತ್ತು. ಈ ಸಂಬಂಧ ಅಧಿಕಾರಿಗಳು ಆರೋಪಿಗಳಲ್ಲಿ ಹಣದ ಬಗ್ಗೆ ಸೂಕ್ತ ದಾಖಲೆಗಳನ್ನು ಒದಗಿಸುವಂತೆ ಕೋರಿದ್ದರು. ಆದರೆ ಆರೋಪಿಗಳು ಯಾವುದೇ ದಾಖಲೆಗಳನ್ನು ನೀಡಿಲ್ಲವಾದ್ದರಿಂದ ಪೊಲೀಸರು ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.

ಪ್ರತ್ಯೇಕ ಪ್ರಕರಣದಲ್ಲಿ 6 ಲಕ್ಷ ರೂ ನಗದು ವಶ : ಇನ್ನು ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಭುವನಹಳ್ಳಿಯಲ್ಲಿ ಸ್ಥಾಪಿಸಲಾಗಿದ್ದ ಚೆಕ್ ಪೋಸ್ಟ್ ನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದ 4 ಲಕ್ಷ ನಗದನ್ನು ಪೊಲೀಸರು ಇತ್ತೀಚೆಗೆ ವಶಪಡಿಸಿಕೊಂಡಿದ್ದರು. ಈ ಹಣವನ್ನು ಬಳ್ಳಾರಿಯಿಂದ ಹುಬ್ಬಳ್ಳಿ ಕಡೆಗೆ ಸಾಗಿಸಲಾಗುತ್ತಿತ್ತು. ಈ ಸಂಬಂಧ ಹೊಸಪೇಟೆ ಗ್ರಾಮೀಣ ಪೊಲೀಸ್ ಠಾಣೆ ಪ್ರಕರಣ ಕೂಡಾ ದಾಖಲಾಗಿತ್ತು.

ಜೊತೆಗೆ 2 ಲಕ್ಷ ನಗದನ್ನು ಹೂವಿನ ಹಡಗಲಿ- ಮೈಲಾರ ಚೆಕ್ ಪೋಸ್ಟ್​ ಬಳಿ ಚುನಾವಣೆ ಸಿಬ್ಬಂದಿ ವಶಕ್ಕೆ ಪಡೆದಿದ್ದರು. ಹಿರೇಕೆರೂರಿನಿಂದ ಮಾಗಳಕ್ಕೆ ತೆರಳುತ್ತಿದ್ದ ಕಾರಿನಲ್ಲಿ ಹಣ ಪತ್ತೆಯಾಗಿತ್ತು. ಈ ಸಂಬಂಧ ಹಿರೇಹಡಗಲಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ : ಚುನಾವಣಾ ಅಕ್ರಮ : ರಾಜ್ಯದಲ್ಲಿ 22 ಕೋಟಿ ರೂ. ನಗದು, 23 ಕೆಜಿ ಚಿನ್ನ ವಶಕ್ಕೆ

Last Updated : Apr 6, 2023, 7:47 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.