ಬೆಂಗಳೂರು:ಶಾಸಕ ತನ್ವೀರ್ ಸೇಠ್ ಅವರು ಮದುವೆ ಸಮಾರಂಭದಲ್ಲಿ ಭಾಗಿಯಾದ ಸಂದರ್ಭದಲ್ಲಿ ಆಗಂತುಕನೊಬ್ಬ ಅವರ ಮೇಲೆ ಹಲ್ಲೆ ನಡೆಸಿರುವುದನ್ನು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಖಂಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, ಹಲ್ಲೆ ನಡೆಸಿದವರ ವಿರುದ್ಧ ರಾಜ್ಯ ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.ತನ್ವೀರ್ ಅವರ ಪತ್ನಿಯ ಜೊತೆ ಪತಿಯ ಆರೋಗ್ಯ ಸ್ಥಿತಿಯ ಕುರಿತು ವಿಚಾರಿಸಿರುವ ದೇವೇಗೌಡರು, ತನ್ವೀರ್ ಸೇಠ್ ಅವರು ಶೀಘ್ರವಾಗಿ ಗುಣಮುಖರಾಗಿ ಜನಸೇವೆಯಲ್ಲಿ ತೊಡಗಲಿ ಎಂದು ಹಾರೈಸಿದ್ದಾರೆ.