ETV Bharat / state

ನೂತನ ಸಂಪುಟದಲ್ಲಿ ಹೊಸಬರಿಗೆ ಅವಕಾಶ ಕೊಡಬೇಕು: ಶಾಸಕ ತಿಪ್ಪಾರೆಡ್ಡಿ

author img

By

Published : Jul 28, 2021, 11:59 AM IST

ನೂತನ ಸಿಎಂ ಬಸವರಾಜ ಬೊಮ್ಮಾಯಿ ಸಚಿವ ಸಂಪುಟದಲ್ಲಿ ಹೊಸಬರಿಗೆ ಅವಕಾಶ ನೀಡುವಂತೆ ಹಿರಿಯ ಶಾಸಕ ತಿಪ್ಪಾರೆಡ್ಡಿ ಆಗ್ರಹಿಸಿದ್ದಾರೆ. ತಿಪ್ಪಾರೆಡ್ಡಿ ಸಹ ಸಚಿವ ಸ್ಥಾನದ ಆಕಾಂಕ್ಷಿ ಆಗಿದ್ದಾರೆ.

MLA Tippareddy
ಶಾಸಕ ತಿಪ್ಪಾರೆಡ್ಡಿ

ಬೆಂಗಳೂರು : ಮುಖ್ಯಮಂತ್ರಿ ಆಯ್ಕೆ ಆಗುತ್ತಿದ್ದಂತೆ, ಸಚಿವ ಸ್ಥಾನದ ಆಕಾಂಕ್ಷಿಗಳಲ್ಲಿ ಹೊಸ ಭರವಸೆ ಚಿಗುರೊಡೆದಿದೆ. ಹಿರಿಯರನ್ನು ಬದಲಾವಣೆ ಮಾಡಿ ಹೊಸಬರಿಗೆ ಸಚಿವ ಸಂಪುಟದಲ್ಲಿ ಅವಕಾಶ ಕೊಡಬೇಕು ಎಂದು ಸಚಿವ ಸ್ಥಾನದ ಆಕಾಂಕ್ಷಿಯೂ ಆಗಿರುವ ಹಿರಿಯ ಶಾಸಕ ಜಿ ಹೆಚ್​ ತಿಪ್ಪಾರೆಡ್ಡಿ ಆಗ್ರಹಿಸಿದ್ದಾರೆ.

ಕೆ.ಕೆ.ಗೆಸ್ಟ್ ಹೌಸ್‌ನಲ್ಲಿ ಮಾತನಾಡಿದ ಅವರು, ಪದೇ ಪದೆ ಆದವರೇ ಸಚಿವರಾಗುತ್ತಿದ್ದಾರೆ, ಇದು ಸರಿಯಾದ ಕ್ರಮವಲ್ಲ. ಕೆಲವರನ್ನು ಬದಲಾವಣೆ ಮಾಡಿ ಹೊಸಬರಿಗೆ ಅವಕಾಶ ಕೊಡಬೇಕು. ಹಿರಿಯರನ್ನು ಪಕ್ಷ ಸಂಘಟನೆಗೆ ಬಳಸಿಕೊಳ್ಳಬೇಕು ಎಂದು ಹೇಳಿದರು.

ಶಾಸಕ ತಿಪ್ಪಾರೆಡ್ಡಿ ಒತ್ತಾಯ

ನಮ್ಮ ನಾಯಕರನ್ನು ಭೇಟಿ ಮಾಡಲು ಬಂದಿದ್ದೆ. ಈ ಬಾರಿ ಸಚಿವ ಸ್ಥಾನ ಸಿಗುವ ವಿಶ್ವಾಸ ಇದೆ. ಕಳೆದ ಬಾರಿ ನನಗೆ ಅವಕಾಶ ಕೊಟ್ಟಿಲ್ಲ. ನನಗೆ ಈ ಬಾರಿ ಅವಕಾಶ ಮಾಡಿಕೊಡುತ್ತಾರೆ ಅಂದುಕೊಂಡಿದ್ದೇನೆ‌. ಚಿತ್ರದುರ್ಗಕ್ಕೆ ನ್ಯಾಯ ಒದಗಿಸುತ್ತಾರೆ ಎಂಬ ಭರವಸೆ ಇದೆ ಎಂದರು.

ಓದಿ : ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕಾರ ಮಾಡಿದ ಬಸವರಾಜ ಬೊಮ್ಮಾಯಿ

ಸಚಿವ ಸ್ಥಾನ ಕೊಟ್ಟರೂ, ಕೊಡದಿದ್ದರೂ ಕೆಲಸ ಮಾಡುತ್ತೇನೆ. ವರಿಷ್ಠರ ಜೊತೆಗೆ ಮಾತನಾಡಿದ್ದೇನೆ, ಸಚಿವ ಸ್ಥಾನದ ಬಗ್ಗೆ ಮಾತಾಡಿಲ್ಲ. ನಾನು ತುಂಬಾ ಸೀನಿಯರ್ ಇದ್ದೇನೆ. ನನ್ನನ್ನು ಸಹ ಪರಿಗಣಿಸಬೇಕು ಎಂದು ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.