ETV Bharat / state

ಅನಿರ್ಧಿಷ್ಟಾವಧಿಗೆ ಸದನ ಮುಂದೂಡಿದ ಸ್ಪೀಕರ್ - ಕ್ಷೇತ್ರದಲ್ಲಿನ ಸಮಸ್ಯೆ ಬಗ್ಗೆ ಸರ್ಕಾರದ ಗಮನ

ವಿಧಾನಮಂಡಲದ ಉಭಯ ಸದನಗಳ ಕಾರ್ಯ ಕಲಾಪಗಳನ್ನು ಸ್ಪೀಕರ್ ಯು ಟಿ ಖಾದರ್ ಅವರು ಅನಿರ್ದಿಷ್ಟಾವಧಿಗೆ ಮುಂದೂಡಿದ್ದಾರೆ.

ಸಭಾಧ್ಯಕ್ಷ ಯುಟಿ ಖಾದರ್
ಸಭಾಧ್ಯಕ್ಷ ಯುಟಿ ಖಾದರ್
author img

By

Published : Jul 21, 2023, 5:47 PM IST

ಸಭಾಧ್ಯಕ್ಷ ಯು ಟಿ ಖಾದರ್

ಬೆಂಗಳೂರು : ಕಳೆದ 15 ದಿನಗಳಿಂದ ನಡೆದ ವಿಧಾನ ಮಂಡಲದ ಉಭಯ ಸದನಗಳ ಕಾರ್ಯಕಲಾಪಗಳನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಗಿದೆ. ಹದಿನಾರನೇ ವಿಧಾನಸಭೆಯ ಮೊದಲನೇ ಅಧಿವೇಶನ ಜುಲೈ 3 ರಿಂದ ಇಂದಿವರೆಗೆ ಒಟ್ಟು 15 ದಿನಗಳ ಕಾಲ ಸುಮಾರು 78 ಗಂಟೆ 25 ನಿಮಿಷಗಳ ಕಾಲ ಕಾರ್ಯಕಲಾಪ ನಡೆಸಲಾಗಿದೆ ಎಂದು ವಿಧಾನಸಭೆಯ ಸಭಾಧ್ಯಕ್ಷ ಯು ಟಿ ಖಾದರ್ ತಿಳಿಸಿದರು.

ಜುಲೈ 3 ರಂದು ರಾಜ್ಯಪಾಲರು ವಿಧಾನಮಂಡಲದ ಉಭಯ ಸದನಗಳ ಸದಸ್ಯರನ್ನುದ್ದೇಶಿಸಿ ಮಾಡಿದ ಭಾಷಣದ ವಂದನಾ ನಿರ್ಣಯದ ಮೇಲೆ 34 ಸದಸ್ಯರುಗಳು ಒಟ್ಟು 12 ಗಂಟೆ 39 ನಿಮಿಷಗಳ ಕಾಲ ಭಾಗವಹಿಸಿದ್ದರು. ಜುಲೈ 13 ರಂದು ವಂದನಾ ನಿರ್ಣಯದ ಪ್ರಸ್ತಾವವನ್ನು ಅಂಗೀಕರಿಸಲಾಗಿದೆ ಎಂದರು.

2023-24ನೇ ಸಾಲಿನ ಆಯವ್ಯಯ ಅಂದಾಜುಗಳನ್ನು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಜು. 7 ರಂದು ಮಾಡಿಸಿದ್ದರು. ಆಯವ್ಯಯದ ಸಾಮಾನ್ಯ ಚರ್ಚೆಯಲ್ಲಿ 62 ಸದಸ್ಯರುಗಳು ಒಟ್ಟು 12 ಗಂಟೆ 52 ನಿಮಿಷಗಳ ಕಾಲ ಭಾಗವಹಿಸಿದ್ದು, ಜು.20 ರಂದು ಮುಖ್ಯಮಂತ್ರಿ ಅವರು ಉತ್ತರ ನೀಡಿದ ನಂತರ ಮತಕ್ಕೆ ಹಾಕಿ ಅಂಗೀಕರಿಸಲಾಯಿತು.

ಈ ಅಧಿವೇಶನದಲ್ಲಿ ವಿಧಾನಸಭೆಯ ನೂತನ ಉಪ ಸಭಾಧ್ಯಕ್ಷರನ್ನಾಗಿ ರುದ್ರಪ್ಪ ಮಾನಪ್ಪ ಲಮಾಣಿ ಇವರನ್ನು ಚುನಾಯಿಸಲಾಗಿದೆ. ಇತ್ತೀಚೆಗೆ ನಿಧನ ಹೊಂದಿದ ಗಣ್ಯರುಗಳಿಗೆ ಸಂತಾಪ ಸೂಚನಾ ನಿರ್ಣಯವನ್ನು ಮಂಡಿಸಿ, ಅಂಗೀಕರಿಸಲಾಗಿದೆ. ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಬಗ್ಗೆ ಕಾರ್ಯದರ್ಶಿಯವರ ವರದಿಯನ್ನು ಮಂಡಿಸಲಾಗಿದೆ ಎಂದು ಹೇಳಿದರು.

ಭಾರತದ ಲೆಕ್ಕನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರು ನೀಡಿರುವ ರಾಜ್ಯ ಸರ್ಕಾರದ ಹಣಕಾಸಿನ ವ್ಯವಹಾರಗಳ ಲೆಕ್ಕ ಪರಿಶೋಧನಾ ವರದಿಯನ್ನು (2023ರ ವರದಿ ಸಂಖ್ಯೆ-2) ಸದನದಲ್ಲಿ ಮಂಡಿಸಲಾಗಿದೆ. ಹದಿನೈದನೇ ವಿಧಾನಸಭೆಯ 2021-22 ಹಾಗೂ 2022-23ನೇ ಸಾಲಿನ ಸರ್ಕಾರಿ ಭರವಸೆಗಳ ಸಮಿತಿಯ ಹದಿನೈದನೇ ವರದಿ, ಹದಿನೈದನೇ ವಿಧಾನಸಭೆಯ 2020-21ನೇ ಸಾಲಿನ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಸಂಬಂಧಪಟ್ಟ ಹನ್ನೆರಡನೇ ವಿಶೇಷ ವರದಿಯನ್ನು ಸದನದಲ್ಲಿ ಮಂಡಿಸಲಾಗಿದ್ದು, ಒಟ್ಟು 29 ಅಧಿಸೂಚನೆಗಳು 2 ಅಧ್ಯಾದೇಶಗಳು ಮತ್ತು 70 ವಾರ್ಷಿಕ ವರದಿಗಳು, 99 ಲೆಕ್ಕ ಪರಿಶೋಧನಾ ವರದಿಗಳು, 4 ಅನುಪಾಲನ 1 ಲೆಕ್ಕ ತಪಾಸಣಾ ವರದಿಯನ್ನು ಸದನದಲ್ಲಿ ಮಂಡಿಸಲಾಗಿದೆ ಎಂದು ವಿವರಿಸಿದರು.

ಸದನದಲ್ಲಿ 120 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ: ಈ ಅಧಿವೇಶನದಲ್ಲಿ ಧನವಿನಿಯೋಗ ವಿಧೇಯಕವೂ ಸೇರಿದಂತೆ 14 ವಿಧೇಯಕಗಳನ್ನು ಮಂಡಿಸಿ ಅಂಗೀಕರಿಸಲಾಗಿದೆ. ನಿಯಮ 60 ರಡಿ ನೀಡಿದ್ದ 16 ಸೂಚನೆಗಳನ್ನು ನಿಯಮ 69ಕ್ಕೆ ಪರಿವರ್ತಿಸಲಾಗಿದ್ದು, ಒಟ್ಟು 4 ಸೂಚನೆಗಳನ್ನು ನಿಯಮ ಗರಡಿಯಲ್ಲಿ ಚರ್ಚಿಸಲಾಗಿರುತ್ತದೆ. ಒಟ್ಟು 1149 ಪ್ರಶ್ನೆಗಳನ್ನು ಸ್ವೀಕರಿಸಲಾಗಿದ್ದು, ಸದನದಲ್ಲಿ 120 ಪ್ರಶ್ನೆಗಳಿಗೆ ಉತ್ತರಿಸಲಾಗಿದೆ.

ಲಿಖಿತ ಮೂಲಕ ಉತ್ತರಿಸುವ 1013 ಪ್ರಶ್ನೆಗಳ ಪೈಕಿ 966 ಪ್ರಶ್ನೆಗಳಿಗೆ ಉತ್ತರಗಳನ್ನು ಸ್ವೀಕರಿಸಲಾಗಿದೆ. ನಿಯಮ 351 ರ ಅಡಿ 249 ಸೂಚನೆಗಳ 153 ಸೂಚನೆಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಗಮನ ಸೆಳೆಯುವ 202 ಸೂಚನೆಗಳ ಪೈಕಿ 181 ಸೂಚನಾ ಪತ್ರಗಳ ಉತ್ತರಗಳನ್ನು ಸ್ವೀಕರಿಸಲಾಗಿದೆ. ಶೂನ್ಯ ವೇಳೆಯಲ್ಲಿ ಒಟ್ಟು 16 ಸೂಚನೆಗಳನ್ನು ಚರ್ಚಿಸಲಾಗಿದೆ ಎಂದು ತಿಳಿಸಿದರು.

ವಿಧಾನಮಂಡಲದ ವಿಧಾನ ಸಭೆಯ ವಿವಿಧ ಸಮಿತಿಗಳಿಗೆ, ಕರ್ನಾಟಕ ವಿಧಾನಸಭೆಯ ನಿಯಮಾವಳಿ ಸಮಿತಿಗೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ ವಿದ್ಯಾವಿಷಯಕ ಪರಿಷತ್ತಿಗೆ ಹಾಗೂ ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸೆನೆಟ್‌ಗೆ ಸದಸ್ಯರುಗಳನ್ನು ನಾಮ ನಿರ್ದೇಶನ ಮಾಡಲು ಸದನವು ಸಭಾಧ್ಯಕ್ಷರಿಗೆ ಅಧಿಕಾರ ನೀಡಿರುತ್ತದೆ.

ಅನಿರ್ದಿಷ್ಟಾವಧಿಗೆ ಸದನ ಮುಂದೂಡಿದ ಸ್ಪೀಕರ್​: ಈ ಸದನದಲ್ಲಿ ಅಶಿಸ್ತು ಹಾಗೂ ಅಗೌರವದಿಂದ ವರ್ತಿಸಿದ ಹತ್ತು ಸದಸ್ಯರುಗಳನ್ನು ಜುಲೈ 19 ರಂದು ಅಧಿವೇಶನ ಮುಕ್ತಾಯವಾಗುವವರೆಗೆ ಸದನಕ್ಕೆ ಬಾರದಂತೆ ಅಮಾನತ್ತುಗೊಳಿಸಲಾಗಿದೆ. ಈ ಸದನ ನಡೆಸಲು ಸಹಕರಿಸಿದ ಸಭಾ ನಾಯಕರಾದ ಮುಖ್ಯಮಂತ್ರಿಯವರಿಗೆ ಸಂಪುಟದ ಸದಸ್ಯರಿಗೆ, ಉಪ ಸಭಾಧ್ಯಕ್ಷರಿಗೆ, ಸರ್ಕಾರಿ ಮುಖ್ಯ ಸಚೇತಕರಿಗೆ, ಸಚಿವ ಎಲ್ಲಾ ಸದಸ್ಯರುಗಳಿಗೆ, ಮಾಧ್ಯಮ ಪ್ರತಿನಿಧಿಗಳಿಗೆ, ಇಲಾಖಾ ಮುಖ್ಯಸ್ಥರು, ಅಧಿಕಾರಿ-ಸಿಬ್ಬಂದಿಯವರಿಗೆ, ವಿಧಾನಸಭೆ ಸಚಿವಾಲಯದ ಅಧಿಕಾರಿ ಹಾಗೂ ಸಿಬ್ಬಂದಿಯವರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಹೇಳಿ ಸದನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.

ಇದನ್ನೂ ಓದಿ: ಬರಪೀಡಿತ ಪ್ರದೇಶ ಘೋಷಣೆಗೆ ಇರುವ ಮಾನದಂಡ ಬದಲಾಯಿಸುವಂತೆ ಶೀಘ್ರ ಕೇಂದ್ರಕ್ಕೆ ಪತ್ರ: ಸಚಿವ ಕೃಷ್ಣಬೈರೇಗೌಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.