ETV Bharat / state

ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ಪ್ರಾರಂಭದಲ್ಲೇ ವಿರೋಧ: ರಾಜಾಜಿನಗರ ಟಿಕೆಟ್ ಆಕಾಂಕ್ಷಿ ಮನೋಹರ್ ಪ್ರತಿಭಟನೆ - ಈಟಿವಿ ಭಾರತ ಕನ್ನಡ

ಎಂಎಲ್​ಸಿ ಪುಟ್ಟಣ್ಣ ಕಾಂಗ್ರೆಸ್​ ಸೇರ್ಪಡೆ ಕಾಂಗ್ರೆಸ್​ನಲ್ಲಿ ವಿರೋಧ - ರಾಜಾಜಿನಗರ ಟಿಕೆಟ್​ ಆಕಾಂಕ್ಷಿ ಮನೋಹರ್​ ಪ್ರತಿಭಟನೆ - ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಮನೋಹರ್

mlc-puttanna-joins-congress-protest-from-congress-leaders
ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ಪ್ರಾರಂಭದಲ್ಲೇ ವಿರೋಧ: ರಾಜಾಜಿನಗರ ಟಿಕೆಟ್ ಆಕಾಂಕ್ಷಿ ಮನೋಹರ್ ಪ್ರತಿಭಟನೆ
author img

By

Published : Mar 9, 2023, 9:23 PM IST

ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆಗೆ ಪ್ರಾರಂಭದಲ್ಲೇ ವಿರೋಧ: ರಾಜಾಜಿನಗರ ಟಿಕೆಟ್ ಆಕಾಂಕ್ಷಿ ಮನೋಹರ್ ಪ್ರತಿಭಟನೆ

ಬೆಂಗಳೂರು : ರಾಜಾಜಿನಗರದ ಟಿಕೆಟ್ ಆಕಾಂಕ್ಷಿ ಎಸ್ ಮನೋಹರ್ ಅವರು ಎಂಎಲ್​ಸಿ ಪುಟ್ಟಣ್ಣ ಅವರು ಕಾಂಗ್ರೆಸ್ ಕಚೇರಿಗೆ ಆಗಮಿಸಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳುವುದನ್ನು ವಿರೋಧಿಸಿ ಪ್ರತಿಭಟಿಸಿದರು. ಕಾಂಗ್ರೆಸ್ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ ಸಿಂಗ್ ಸುರ್ಜೇವಾಲಾ, ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಮ್ಮಿಕೊಂಡಿದ್ದ ಜಂಟಿ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಪುಟ್ಟಣ್ಣ ಮುಂದಾದರು. ಈ ವೇಳೆ, ಕೆಲ ಕಾಂಗ್ರೆಸ್ ನಾಯಕರು ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಸಂಜೆಯಷ್ಟೇ ಪುಟ್ಟಣ್ಣ ಅವರು ಬಿಜೆಪಿ ಪಕ್ಷದ ಸದಸ್ಯತ್ವಕ್ಕೆ ಹಾಗೂ ವಿಧಾನ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಅದು ಇನ್ನು ಅಂಗೀಕಾರವಾಗದ ಹಿನ್ನೆಲೆ ಅವರು ಕಾಂಗ್ರೆಸ್ ಪಕ್ಷದ ಚಟುವಟಿಕೆಯಲ್ಲಿ ಪಾಲ್ಗೊಳ್ಳುವುದು ಸರಿಯಲ್ಲ. ಅವರಿಗೆ ಸುದ್ದಿಗೋಷ್ಠಿಗೆ ತೆರಳಲು ಅವಕಾಶ ನೀಡಬಾರದು ಎಂದು ಮನೋಹರ್ ಪ್ರತಿಭಟನೆ ಮಾಡಿದರು.

ರಾಜಾಜಿನಗರದಿಂದ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿರುವ ಎಸ್ ಮನೋಹರ್​​ಗೆ ಇದೀಗ ಪುಟ್ಟಣ್ಣ ಪ್ರತಿಸ್ಪರ್ಧಿಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಇವರು ಅಭ್ಯರ್ಥಿ ಆಗಲಿದ್ದಾರೆ ಎಂಬ ಮಾತು ದಟ್ಟವಾಗಿ ಕೇಳಿ ಬರುತ್ತದೆ. ಈ ಸಂಬಂಧ ಮನೋಹರ್ ಅವರು ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ವಿಪಕ್ಷನಾಯಕ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಅವರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜಾಜಿನಗರ ಕಾಂಗ್ರೆಸ್ ನಾಯಕರು ಪುಟ್ಟಣ್ಣಗೆ ಟಿಕೆಟ್ ಕೊಡಬೇಡಿ ಎಂದು ಗಲಾಟೆ ಮಾಡಿದರು.

ಕೆಪಿಸಿಸಿ ಕಚೇರಿ ಮುಂಭಾಗ ಮನೋಹರ್ ಹಾಗೂ ಅವರ ಬೆಂಬಲಿಗರು ಪ್ರತಿಭಟನೆ ನಡೆಸಿದರು. ಬಳಿಕ ಅಲ್ಲಿಂದ ಕೆಪಿಸಿಸಿ ಕಚೇರಿಯ ಮೊದಲ ಮಹಡಿಯಲ್ಲಿ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿ ಸ್ಥಳಕ್ಕೂ ಆಗಮಿಸಿ ಪುಟ್ಟಣ್ಣ ವಿರುದ್ಧ ಧಿಕ್ಕಾರ ಕೂಗಿದರು.

ಗಲಾಟೆ ನೋಡಿ ಗರಂ ಆದ ಸಿದ್ದರಾಮಯ್ಯ: ಇದನ್ನು ಮನೋಹರ್​ ಬೆಂಬಲಿಗರು ಗಲಾಟೆ ಮಾಡುತ್ತಿರುವುದನ್ನು ಕಂಡ ಸಿದ್ದರಾಮಯ್ಯ, ಶಿಸ್ತು ಇಲ್ಲದವರನ್ನು ಯಾಕೆ ಪಕ್ಷಕ್ಕೆ ಸೇರಿಸಿಕೊಳ್ಳುತ್ತೀರಾ? ನೋಡಿ ಹೇಗೆ ಕೂಗಾಡುತ್ತಿದ್ದಾರೆ ಎಂದು ಡಿಕೆಶಿಗೆ ಹೇಳಿದರು. ಪುಟ್ಟಣ್ಣ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಬಂದಿದ್ದಾರೆ. ಅವರಿಗೆ ಒಳಗೆ ಬರಲು ಅವಕಾಶ ನೀಡಿ ಎಂದರು. ಬಳಿಕ ಮನೋಹರ್ ಅವರನ್ನು ಅಲ್ಲಿಂದ ಆಚೆ ಕಳುಹಿಸಿ ಪುಟ್ಟಣ್ಣ ಅವರಿಗೆ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಡಲಾಯಿತು.

ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದ ಮನೋಹರ್ : ಕೆಲ ತಿಂಗಳ ಹಿಂದೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ನಿಯೋಜಿತರಾಗಿದ್ದ ಎಸ್ ಮನೋಹರ್ ಈ ಹಿಂದೆಯೂ ವಿಧಾನ ಪರಿಷತ್​ ನಾಮನಿರ್ದೇಶನ ಸಂದರ್ಭದಲ್ಲಿ ತಮ್ಮನ್ನು ಪರಿಗಣಿಸುವಂತೆ ಮನವಿ ಮಾಡಿದ್ದರು. ಇದೀಗ ರಾಜಾಜಿನಗರದಿಂದ ತಮಗೆ ಟಿಕೆಟ್ ನೀಡುವಂತೆ ಪಕ್ಷದ ರಾಜ್ಯ ನಾಯಕರ ಮೇಲೆ ಒತ್ತಡ ಹೇರುತ್ತಿದ್ದಾರೆ. ಪುಟ್ಟಣ್ಣ ಕಾಂಗ್ರೆಸ್ ಸೇರ್ಪಡೆ ಆಗಲಿರುವುದು ತಮಗೆ ಟಿಕೆಟ್ ತಪ್ಪಲಿದೆ ಎಂಬ ಅನುಮಾನದ ಮೇಲೆ ನಿನ್ನೆಯೇ ತಮ್ಮ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸ್ಕ್ರೀನಿಂಗ್ ಕಮಿಟಿ ಸಭೆಯಲ್ಲಿ ತೊಡಗಿರುವ ಹಿನ್ನೆಲೆ ರಾಜ್ಯ ಕಾಂಗ್ರೆಸ್ ನಾಯಕರು ಈ ಬಗ್ಗೆ ಗಮನ ಹರಿಸಿಲ್ಲ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಗೆ ಮನೋಹರ್ ತಮ್ಮ ರಾಜೀನಾಮೆ ಪತ್ರ ಕಳುಹಿಸಿದ್ದು ಇದುವರೆಗೂ ಅದಕ್ಕೆ ಯಾವುದೇ ಪ್ರತಿಕ್ರಿಯೆ ಲಭಿಸಿಲ್ಲ. ತಮ್ಮ ರಾಜೀನಾಮೆ ಪತ್ರದಲ್ಲಿ ಮನೋಹರ್, ಸತತ ಹೋರಾಟ, ವಿನೂತನ ಪ್ರತಿಭಟನೆಗಳ ಮೂಲಕವೇ ಗಮನ ಸೆಳೆಯುತ್ತಿದ್ದೆ. ಸಾಮಾನ್ಯ ಕಾರ್ಯಕರ್ತರನ್ನು ಪಕ್ಷ ಗೌರವಿಸುತ್ತಿಲ್ಲ. ಅತಿ ಹೆಚ್ಚು ಹೋರಾಟ ಮಾಡಿದವರನ್ನು ಅವಮಾನಿಸಲಾಗುತ್ತಿದೆ. ಈ ಬೇಸರದಿಂದ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೇನೆ ಎಂದು ಹೇಳಿ ಎರಡು ಪುಟಗಳ ಸುದೀರ್ಘ ಪತ್ರ ಬರೆದಿದ್ದರು. ರಾಜಾಜಿನಗರ ಕ್ಷೇತ್ರದಿಂದ ಟಿಕೆಟ್​​​ಗೆ ಅರ್ಜಿ ಸಲ್ಲಿಸಿದ್ದ ಎಸ್ ಮನೋಹರ್ ತೀವ್ರ ನಿರಾಸೆಗೊಂಡು ಈ ರಾಜೀನಾಮೆ ಸಲ್ಲಿಕೆ ಮಾಡಿದ್ದರು.

ಇದನ್ನೂ ಓದಿ : ಜಂಟಿ ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರ ಜೊತೆ ಪುಟ್ಟಣ್ಣ! ರಾಜೀನಾಮೆ ನೀಡಿ ಕಾಂಗ್ರೆಸ್ ಸೇರ್ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.