ಬೆಂಗಳೂರು : ಕೋವಿಡ್- 19 ಹಿನ್ನೆಲೆ ಸಂಚಾರಿ ಫೀವರ್ ಕ್ಲಿನಿಕ್‌ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಸಿಎಂ, ಬೆಂಗಳೂರಿನ ನಾಲ್ಕು ವಿಭಾಗಗಳಲ್ಲಿಯೂ ಮೊಬೈಲ್ ಫೀವರ್ ಕ್ಲಿನಿಕ್ ಸಂಚಾರ ಮಾಡುತ್ತದೆ. ನಾಲ್ಕು ಬಸ್‌ಗಳಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಮಾಡಲಾಗಿದೆ. ಈಗಾಗಲೇ ಮೈಸೂರು, ಮಂಗಳೂರಿನಲ್ಲಿ ಮೊಬೈಲ್ ಫೀವರ್ ಕ್ಲಿನಿಕ್ ಕಾರ್ಯನಿರ್ವಹಿಸುತ್ತಿವೆ. ಅನಾರೋಗ್ಯ ಕಂಡು ಬಂದರೆ ಮೊಬೈಲ್ ಫೀವರ್ ಕ್ಲಿನಿಕ್‌ಗೆ ಸಂಪರ್ಕಿಸಿ ಎಂದರು.