ಬೆಂಗಳೂರು: ನಗರದ ವಿವಿಧ ಠಾಣಾ ವ್ಯಾಪ್ತಿಯಲ್ಲಿ ಕ್ಷಣಾರ್ಧದಲ್ಲಿ ಮೊಬೈಲ್ ಫೋನ್ ಎಗರಿಸಿ ಪರಾರಿಯಾಗುತ್ತಿದ್ದ ಚಾಲಾಕಿ ಕಳ್ಳನನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಇಮ್ರಾನ್ (27) ಬಂಧಿತ ಆರೋಪಿ.
![Bangalore](https://etvbharatimages.akamaized.net/etvbharat/prod-images/kn-bng-01-mobile-theif-wanted-in-different-police-station-limits-arrested-ka10032_24062021105117_2406f_1624512077_964.jpg)
ಪೀಣ್ಯ, ರಾಜಗೋಪಾಲನಗರ ಹಾಗು ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೃತ್ಯ ಎಸಗುತ್ತಿದ್ದ ಈತ ಒಬ್ಬಂಟಿಯಾಗಿ ಓಡಾಡುವವರನ್ನು ಗುರಿಯಾಗಿಸಿ ಮೊಬೈಲ್ ಕಸಿದು ಎಸ್ಕೇಪ್ ಆಗುತ್ತಿದ್ದ.
ಸದ್ಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಆತನಿಂದ 2.40 ಲಕ್ಷ ರೂ. ಬೆಲೆ ಬಾಳುವ ವಿವಿಧ ಕಂಪನಿಗಳ 20 ಮೊಬೈಲ್ಗಳನ್ನು ವಶಕ್ಕೆ ಪಡೆದಿದ್ದಾರೆ.