ETV Bharat / state

ರಾಜ್ಯದಲ್ಲಿಂದು ಪ್ರಧಾನಿ ಮೋದಿ 2ನೇ ಹಂತದ ಮತಬೇಟೆ: 3 ಕಡೆ ಸಾರ್ವಜನಿಕ ಸಭೆ, ಕಲಬುರಗಿಯಲ್ಲಿ ರೋಡ್ ಶೋ - PM Narendra Modi election campaign

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮತ್ತು ನಾಳೆ ರಾಜ್ಯದಲ್ಲಿ 2ನೇ ಹಂತದ ಚುನಾವಣಾ ಪ್ರಚಾರ ಕೈಗೊಳ್ಳಲಿದ್ದಾರೆ. ಕಲ್ಯಾಣ ಕರ್ನಾಟಕ, ಕರಾವಳಿ ಭಾಗದಲ್ಲಿ ಸಮಾವೇಶ, ರೋಡ್​ ಶೋನಲ್ಲಿ ಭಾಗಿಯಾಗಲಿದ್ದಾರೆ.

ಪ್ರಧಾನಿ ಮೋದಿ 2ನೇ ಹಂತದ ಚುನಾವಣಾ ಪ್ರಚಾರ
ಪ್ರಧಾನಿ ಮೋದಿ 2ನೇ ಹಂತದ ಚುನಾವಣಾ ಪ್ರಚಾರ
author img

By

Published : May 2, 2023, 7:03 AM IST

Updated : May 2, 2023, 7:10 AM IST

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ತಯಾರಿ ನಡೆಸುತ್ತಿರುವ ಬಿಜೆಪಿ, ಪ್ರಧಾನಿ ನರೇಂದ್ರ ಮೋದಿ ಅವರ ಎರಡನೇ ಹಂತದ ಮತ ಪ್ರಚಾರಕ್ಕೆ ಸಜ್ಜಾಗಿದೆ. ಇಂದು ಮತ್ತು ನಾಳೆ ಮೋದಿ ರಾಜ್ಯದ ವಿವಿಧೆಡೆ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಲಿದ್ದಾರೆ. ಪ್ರಧಾನಿಯವರು 2ನೇ ಹಂತದ ಪ್ರಚಾರದಲ್ಲಿ ಇಂದು (ಮಂಗಳವಾರ) ಚಿತ್ರದುರ್ಗ, ಹೊಸಪೇಟೆ, ಸಿಂಧನೂರು, ಕಲಬುರಗಿಯಲ್ಲಿ ರೋಡ್​ ಶೋ ಮತ್ತು ಸಮಾವೇಶ ನಡೆಸಿದರೆ, ಬುಧವಾರದಂದು ಮೂಡಬಿದಿರೆ, ಅಂಕೋಲ ಹಾಗೂ ಬೈಲಹೊಂಗಲದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ಮಾಡುವರು.

ಇಂದು ಎಲ್ಲೆಲ್ಲಿ ಮೋದಿ ಮತಬೇಟೆ?: ಇಂದು ಬೆಳಗ್ಗೆ 11 ಗಂಟೆಗೆ ಚಿತ್ರದುರ್ಗದಲ್ಲಿ ನಡೆಯುವ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ಅಲ್ಲಿಂದ ತೆರಳಿ ವಿಜಯನಗರ ಜಿಲ್ಲಾ ಕೇಂದ್ರವಾದ ಹೊಸಪೇಟೆಯಲ್ಲಿ ಮತ್ತೊಂದು ಸಾರ್ವಜನಿಕ ಸಭೆಯಲ್ಲಿ ಪಾಲ್ಗೊಳ್ಳುವರು.

ಸಂಜೆ 4 ಗಂಟೆಗೆ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜನರನ್ನುದ್ದೇಶಿಸಿ ಮಾತನಾಡಲಿದ್ದಾರೆ. ಸಂಜೆ 6.30 ಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆ ಕಲಬುರಗಿಯಲ್ಲಿ ರೋಡ್​ ಶೋ ಮಾಡಲಿದ್ದಾರೆ. ಅಲ್ಲಿಯೇ ಉಳಿದುಕೊಳ್ಳುವ ಪ್ರಧಾನಿ, ಮರುದಿನ ಬುಧವಾರ ಅಲ್ಲಿಂದ ಮಂಗಳೂರಿಗೆ ಆಗಮಿಸಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಉತ್ತರ ಕನ್ನಡ ಜಿಲ್ಲೆಯ ಅಂಕೋಲ ಮತ್ತು ಬೆಳಗಾವಿ ಜಿಲ್ಲೆಯ ಬೈಲಹೊಂಗಲದಲ್ಲಿ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳುವರು ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ಹಳೇ ಮೈಸೂರು ಭಾಗದಲ್ಲಿ ಪ್ರಚಾರ: ಜೆಡಿಎಸ್​ ಪ್ರಾಬಲ್ಯವಿರುವ ಈ ಭಾಗದ ಹಲವು ಜಿಲ್ಲೆಗಳಲ್ಲಿ ಮೊದಲ ಹಂತದ ಪ್ರಚಾರದಲ್ಲಿ ಪ್ರಧಾನಿ ಮೋದಿ ಈಗಾಗಲೇ ಭರ್ಜರಿ ಪ್ರಚಾರ ನಡೆಸಿದ್ದಾರೆ. ಏಪ್ರಿಲ್​ 29 ಮತ್ತು 30 ರಂದು ಮೈಸೂರು, ಚನ್ನಪಟ್ಟಣ, ಹಾಸನ, ಕೋಲಾರ, ಬೆಂಗಳೂರಿನಲ್ಲಿ ರೋಡ್​ ಶೋ ನಡೆಸಿ ಜನರನ್ನು ಆಕರ್ಷಿಸಿದ್ದಾರೆ.

ಏಪ್ರಿಲ್ 29 ರಂದು ಕಲ್ಯಾಣ ಕರ್ನಾಟಕ, ಕಿತ್ತೂರು ಕರ್ನಾಟಕ, ಬೆಂಗಳೂರಿನಲ್ಲಿ ಪ್ರಚಾರ ನಡಸಿದ್ದ ಪ್ರಧಾನಿ, ಏಪ್ರಿಲ್​ 30 ರಂದು ಹಳೆ ಮೈಸೂರು ಭಾಗದ ಕೆಲವೆಡೆ ಅದ್ಧೂರಿ ಮತಯಾಚನೆ ಮಾಡಿದರು. ಸಿದ್ದರಾಮಯ್ಯ ಸ್ಪರ್ಧಿಸುವ ವಿಚಾರವಾಗಿ ಪ್ರಚಾರಕ್ಕೆ ಬಂದಿದ್ದ ಕೋಲಾರ, ಮಾಜಿ ಸಿಎಂ ಹೆಚ್.​ಡಿ.ಕುಮಾರಸ್ವಾಮಿ ಅವರ ಕ್ಷೇತ್ರವಾದ ಚನ್ನಪಟ್ಟಣ, ಪಕ್ಷದ ಹಿಡಿತವಿರುವ ಹಾಸನ ಮತ್ತು ಮೈಸೂರಿನಲ್ಲಿ ಪ್ರಧಾನಿ ಈಗಾಗಲೇ ಭರ್ಜರಿ ರೋಡ್​ ಶೋ ನಡೆಸಿದ್ದಾರೆ.

20 ಕಡೆ ಮೋದಿ ರ್ಯಾಲಿ: ರಾಜ್ಯ ಚುನಾವಣಾ ಕಣದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಹಂತಗಳಲ್ಲಿ 20 ಕಡೆ ಚುನಾವಣಾ ರ‍್ಯಾಲಿ ನಡೆಸಲಿದ್ದಾರೆ. ಸ್ಟಾರ್ ಕ್ಯಾಂಪೇನರ್ ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಮತ್ತು ವರ್ಚಸ್ಸನ್ನು ಬಳಸಿಕೊಳ್ಳಲು ಬಿಜೆಪಿ ಮುಂದಾಗಿದೆ.

ಕರ್ನಾಟಕ ವಿಧಾನಸಭಾ ಚುನಾವಣೆಗೆ ಮೇ 10ರಂದು ಮತದಾನ ನಡೆಯಲಿದ್ದು, ಮತ ಎಣಿಕೆ ಮೇ 13ರಂದು ನಡೆಯಲಿದೆ.

ಇದನ್ನೂ ಓದಿ: ಚುನಾವಣಾ ಪ್ರಚಾರ ಅಬ್ಬರ.. ಮೇ 6, 7 ರಂದು ಮತ್ತೆ ಬೆಂಗಳೂರಿನಲ್ಲಿ ಮೋದಿ ಪ್ರವಾಸ..

Last Updated : May 2, 2023, 7:10 AM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.