ETV Bharat / state

ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಿ ಮೋದಿ ಸರ್ಕಾರ ಹೇಡಿತನ ಪ್ರದರ್ಶಿಸಿದೆ: ಸಿದ್ದರಾಮಯ್ಯ - rahul gandhi sentence

ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ವಯನಾಡ್​ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ ಬೆನ್ನಲ್ಲೇ ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ನಾಯಕರು ಕಿಡಿಕಾರಿದ್ದಾರೆ.

Opposition leader Siddaramayya
ವಿಪಕ್ಷ ನಾಯಕ ಸಿದ್ದರಾಮಯ್ಯ
author img

By

Published : Mar 24, 2023, 4:55 PM IST

ಬೆಂಗಳೂರು: ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿಯವರು ಹೇಳುವ ಸತ್ಯವನ್ನು ಎದುರಿಸಲಾಗದ ಪ್ರಧಾನಿ ನರೇಂದ್ರ ಮೋದಿ ಸರ್ಕಾರ, ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ ಎಂದು‌ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ರಾಹುಲ್ ಗಾಂಧಿ ಅನರ್ಹತೆ ವಿಚಾರವಾಗಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇಂದು ಕರಾಳ ದಿನ. ಭಾರತೀಯ ಜನತಾ ಪಕ್ಷದ ಪಾಪದ ಕೊಡ ತುಂಬಿದೆ. ತನ್ನ ನಾಶದ ಶವದ ಪೆಟ್ಟಿಗೆಗೆ ತಾನೇ ಕೊನೆಯ ಮೊಳೆ ಬಡಿದಿದೆ. ಈ ಫ್ಯಾಸಿಸ್ಟ್ ನಡವಳಿಕೆಗೆ ಹೆದರುವ, ಹಿಂಜರಿಯುವ ಪ್ರಶ್ನೆಯೇ ಇಲ್ಲ. ಈ ಅನ್ಯಾಯದ ವಿರುದ್ಧ ನ್ಯಾಯಾಲಯ ಮತ್ತು ಬೀದಿಗಳಲ್ಲಿ ಹೋರಾಟ ಮಾಡುತ್ತೇವೆ. ಭಾರತದಲ್ಲಿ ಇಂದು ಅನಧಿಕೃತವಾಗಿ ತುರ್ತುಪರಿಸ್ಥಿತಿ ಘೋಷಿಸಲಾಗಿದೆ. ನರೇಂದ್ರ ಮೋದಿ, ಬಿಜೆಪಿ ಮತ್ತು ಎನ್​ಡಿಎ ಸರ್ಕಾರದ ವಿರುದ್ಧ ಮಾತನಾಡುವವರಿಗೆಲ್ಲರಿಗೂ ಎಚ್ಚರಿಕೆಯ ರೂಪದಲ್ಲಿ ರಾಹುಲ್ ಗಾಂಧಿಯವರ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ ಎಂದು ಕಿಡಿ ಕಾರಿದರು.

  • ನಮ್ಮ ನಾಯಕರಾದ @RahulGandhi ಅವರು ಹೇಳುವ ಸತ್ಯವನ್ನು ಎದುರಿಸಲಾಗದ @narendramodi ಸರ್ಕಾರ ಅವರನ್ನು ಲೋಕಸಭಾ ಸದಸ್ಯತ್ವದಿಂದ ಅನರ್ಹಗೊಳಿಸಿ ತನ್ನ ಹೇಡಿತನವನ್ನು ಜಾಹೀರುಗೊಳಿಸಿದೆ.

    ಭಾರತದ ಸಂಸದೀಯ ಪ್ರಜಾಪ್ರಭುತ್ವದಲ್ಲಿ ಇದೊಂದು ಕರಾಳ ದಿನ. 1/5#IndiaWithRG pic.twitter.com/8S90exNH8g

    — Siddaramaiah (@siddaramaiah) March 24, 2023 " class="align-text-top noRightClick twitterSection" data=" ">

ಇದು ಕೇವಲ ಕಾಂಗ್ರೆಸ್ ಪಕ್ಷ ಇಲ್ಲವೇ ರಾಹುಲ್ ಗಾಂಧಿಯವರಿಗೆ ನೀಡಿರುವ ಬೆದರಿಕೆ ಅಲ್ಲ, ಅನ್ಯಾಯ-ಅಕ್ರಮದ ವಿರುದ್ಧ ದನಿ ಎತ್ತುವ ಎಲ್ಲ ಪ್ರಜಾಪ್ರಭುತ್ವ ಪ್ರೇಮಿಗಳಿಗೆ ಒಡ್ಡಿರುವ ಬೆದರಿಕೆ. ಪಕ್ಷ, ಪಂಥ ಮರೆತು ಎಲ್ಲರೂ ಒಟ್ಟಾಗಿ ಇದರ ವಿರುದ್ಧ ಪ್ರತಿಭಟನೆ ನಡೆಸಬೇಕಾಗಿದೆ. ರಾಹುಲ್ ಗಾಂಧಿಯವರ ವಿರುದ್ಧ ಕೈಗೊಳ್ಳಲಾದ ಕ್ರಮದಿಂದ ಕಾಂಗ್ರೆಸ್ ಪಕ್ಷದ ಲಕ್ಷಾಂತರ ಕಾರ್ಯಕರ್ತರ ಮನಸ್ಸಿಗೆ ನೋವಾಗಿರುವುದು ನಿಜವಾದರೂ ಈ ಸಂದರ್ಭದಲ್ಲಿ ಸಂಯಮದಿಂದ ವರ್ತಿಸುವುದು ಅಗತ್ಯ. ಯಾರೂ ಕೂಡಾ ಆಕ್ರೋಶದ ಕೈಗೆ ಬುದ್ಧಿ ಕೊಡದೆ ಶಾಂತಿಯುತ ಪ್ರತಿಭಟನೆ ನಡೆಸಬೇಕೆಂದು ಕೋರುತ್ತೇನೆ ಎಂದು ತಿಳಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್​ ಅವರು ಟ್ವೀಟ್​ ಮಾಡಿದ್ದು, ರಾಹುಲ್​ ಗಾಂಧಿ ಅವರನ್ನು ನೀವು ಸಂಸತ್​ ಸ್ಥಾನದಿಂದ ತೆಗದು ಹಾಕಬಹುದು ಆದರೆ ಕೋಟ್ಯಾಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ. ಬಿಜೆಪಿ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ ಎಂದು ಹೇಳಿದ್ದಾರೆ.

  • ನೀವು ಶ್ರೀ @RahulGandhi ಅವರನ್ನು ಸಂಸತ್ ಸ್ಥಾನದಿಂದ ತೆಗೆದುಹಾಕಬಹುದು ಆದರೆ ಕೋಟ್ಯಂತರ ಭಾರತೀಯರು ಹೃದಯದಲ್ಲಿ ನೀಡಿರುವ ಸ್ಥಾನದಿಂದ ತೆಗೆದುಹಾಕುವುದು ಅಸಾಧ್ಯ.

    ಬಿಜೆಪಿಯ ಪ್ರಜಾಪ್ರಭುತ್ವ ವಿರೋಧಿ ಧೋರಣೆಗೆ ನನ್ನ ಧಿಕ್ಕಾರ.

    — DK Shivakumar (@DKShivakumar) March 24, 2023 " class="align-text-top noRightClick twitterSection" data=" ">

2019ರ ಲೋಕಸಭಾ ಚುನಾವಣೆ ವೇಳೆ ಪ್ರಚಾರಕ್ಕೆಂದು ಕರ್ನಾಟಕದ ಕೋಲಾರಕ್ಕೆ ಬಂದಿದ್ದ ರಾಹುಲ್​ ಗಾಂಧಿ ಭಾಷಣದಲ್ಲಿ ಮೋದಿ ಉಪನಾಮದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದನ್ನು ವಿರೋಧಿಸಿ ಶಾಸಕ ಪೂರ್ಣೇಶ್​ ಮೋದಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ನಿನ್ನೆಯಷ್ಟೆ ಸೂರತ್​ನ ಜಿಲ್ಲಾ ನ್ಯಾಯಾಲಯ ಕ್ರಿಮಿನಲ್​ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಅವರನ್ನು ದೋಷಿ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಅದಾದ 24 ಗಂಟೆಗಳ ಒಳಗೆ ರಾಹುಲ್​ ಗಾಂಧಿ ಅವರನ್ನು ವಯನಾಡ್​ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿದೆ. ರಾಹುಲ್​ ಗಾಂಧಿ ಅವರು ಇಂದು ಬೆಳಗ್ಗೆ ಲೋಕಸಭಾ ಅಧಿವೇಶನಕ್ಕೆ ಹಾಜರಾದ ಕೆಲವೇ ಗಂಟೆಗಳಲ್ಲಿ ಜನರಲ್​ ಸೆಕ್ರೆಟರಿ ಉತ್ಪಲ್​ ಕುಮಾರ್​ ಸಿಂಗ್​ ಅವರ ಸಹಿ ಇರುವ ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಇದನ್ನೂ ಓದಿ: ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಂಸದ ಸ್ಥಾನದಿಂದ ಅನರ್ಹ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.