ಬೆಂಗಳೂರು: ದೂರದೃಷ್ಟಿ ಯೋಜನೆಗಳನ್ನ ಜಾರಿಗೊಳಿಸುವ ವಿಚಾರದಲ್ಲಿ ಬಿಜೆಪಿಗೆ ಯಾವುದೇ ಅರಿವಿಲ್ಲ. ಅಗತ್ಯವಿದ್ದರೆ ಸಿದ್ದರಾಮಯ್ಯರಿಂದ ತಿಳಿದುಕೊಳ್ಳಲಿ ಎಂದು ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ ಹೇಳಿದ್ದಾರೆ.
ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, 80 ಕೋಟಿ ಅರ್ಹ ಜನರಿಗೆ 5 ಕೆಜಿ ಆಹಾರ ಧಾನ್ಯಗಳನ್ನು ಪೂರೈಕೆ ಮಾಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿರುವುದು ಸಿದ್ದರಾಮಯ್ಯ ಅವರ ಅತ್ಯಂತ ಜನಪ್ರಿಯ ಯೋಜನೆಯಾದ ಅನ್ನಭಾಗ್ಯವನ್ನು ಹೋಲುತ್ತಿದೆ.
ದೂರದೃಷ್ಟಿಯ ಯೋಜನೆಗಳನ್ನು ಜಾರಿಗೊಳಿಸುವುದು ಹೇಗೆಂದು ಪ್ರಧಾನಿಗಳು ನಮ್ಮ ಪಕ್ಷದ ಸಿದ್ದರಾಮಯ್ಯ ಅವರ ಬಳಿ ಕೇಳಿ ತಿಳಿದುಕೊಳ್ಳಲಿ ಎಂದಿದ್ದಾರೆ.
ರಾಜ್ಯ ಸರ್ಕಾರ 5 ಕೆಜಿ ಪಡಿತರದಲ್ಲಿ 3 ಕೆಜಿ ಕಡಿತಗೊಳಿಸಲು ಮುಂದಾಗಿದೆ ಎಂಬ ಮಾತು ಕೇಳಿ ಬಂದ ಹಿನ್ನೆಲೆ ಕಾಂಗ್ರೆಸ್ ನಾಯಕರು ಸರ್ಕಾರದ ನಿಲುವನ್ನು ಖಂಡಿಸಿದ್ದು, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹೊಂದಿದ್ದ ಮಹತ್ವಾಕಾಂಕ್ಷಿ ಯೋಜನೆಯನ್ನು ಮುಗಿಸುವ ಸಂಚು ಬಿಜೆಪಿ ಸರ್ಕಾರ ನಡೆಸಿದೆ ಎಂದು ಆರೋಪಿಸುತ್ತಿದ್ದಾರೆ.