ಬೆಂಗಳೂರು: ಪ್ರಧಾನಿ ಮೋದಿ ಸುಮಾರು ನಾಲ್ಕು ತಾಸುಗಳ ಕಾಲ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ಅವರು ರಾಜ್ಯದ ಕೊರೊನಾ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸ್ : ಪ್ರಧಾನಿ ಮೋದಿ ನೀಡಿದ ಸಲಹೆ, ಸೂಚನೆ ಏನು?
ಪ್ರಧಾನಿ ಮೋದಿ ಇಂದು ಎಲ್ಲಾ ರಾಜ್ಯಗಳ ಸಿಎಂಗಳ ಜೊತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ್ದು, ಅದರ ಸಂಕ್ಷಿಪ್ತ ವಿವರ ಹೀಗಿದೆ.
ಪ್ರಧಾನಿ ವಿಡಿಯೋ ಸಂವಾದ
ಬೆಂಗಳೂರು: ಪ್ರಧಾನಿ ಮೋದಿ ಸುಮಾರು ನಾಲ್ಕು ತಾಸುಗಳ ಕಾಲ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೊ ಕಾನ್ಫರೆನ್ಸ್ ನಡೆಸಿದ್ದಾರೆ. ಈ ವೇಳೆ ಸಿಎಂ ಯಡಿಯೂರಪ್ಪ ಅವರು ರಾಜ್ಯದ ಕೊರೊನಾ ಸ್ಥಿತಿಗತಿ ಬಗ್ಗೆ ವಿವರಿಸಿದ್ದಾರೆ.
ಒಂದು ವೇಳೆ, ವಿಕೋಪಕ್ಕೆ ಹೋದರೆ ಅದನ್ನು ನಾವು ಎದುರಿಸಲು ಸಿದ್ಧರಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಹಾಟ್ ಸ್ಪಾಟ್ ಗಳನ್ನು ಗುರುತಿಸಿ, ಸೀಲ್ ಡೌನ್ ಮಾಡುವ ಮೂಲಕ ಹಾಗೂ ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರಾಜ್ಯಗಳು ಮಾಡುತ್ತಿರುವ ನಿಯಂತ್ರಣದ ಪ್ರಯತ್ನಗಳನ್ನು ಪ್ರಧಾನಿ ಶ್ಲಾಘಿಸಿದ್ದಾರೆ. ನಾವು ಒಗ್ಗಟ್ಟಿನಿಂದ ಹೋರಾಡಿದರೆ ಮಾತ್ರವೇ ಯಶಸ್ವಿಯಾಗಲು ಸಾಧ್ಯ ಎಂದು ಸಲಹೆ ನೀಡಿದ್ದಾರೆ.
ದೇಶದಲ್ಲಿ ಕೋವಿಡ್ ಪ್ರಕರಣಗಳ ಬೆಳವಣಿಗೆಯ ದರ ಲಾಕ್ಡೌನ್ ನಂತರ ಶೇ. 28 ರಿಂದ ಶೇ. 14 ಕ್ಕೆ ಇಳಿದಿರುವುದು ಸಮಾಧಾನದ ಸಂಗತಿಯಾಗಿದೆ. ರೋಗಿಗಳಿಗೆ ವೈದ್ಯಕೀಯ ಚಿಕಿತ್ಸೆ ನೀಡುವ ಕುರಿತು ಹೆಚ್ಚು ಗಮನ ಹರಿಸಬೇಕಾಗಿದೆ. ಭಾರತ ಸರ್ಕಾರವು 142 ಹಾಟ್ ಸ್ಪಾಟ್ ಗಳನ್ನು ಗುರುತಿಸಿದೆ. ಈ ಹಾಟ್ ಸ್ಪಾಟ್ ಗಳಲ್ಲಿ ತೀವ್ರ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ. ಈವರೆಗೆ 2.84 ಲಕ್ಷ ಪಿಪಿಇ ಕಿಟ್ ಗಳನ್ನು ಪೂರೈಸಲಾಗಿದೆ. ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೂರೈಸಲಾಗುವುದು. ಪ್ರತಿ ಎರಡು ದಿನಗಳಿಗೊಮ್ಮೆ 2 ಲಕ್ಷ ಮಾಸ್ಕ್ ಗಳನ್ನು ಒದಗಿಸಲು ಕ್ರಮ ಕೈಗೊಳ್ಳಲಾಗ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತಿಳಿಸಿದ್ದಾರೆ.
ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆ 220 ಕ್ಕೆ ಹೆಚ್ಚಿಸಲಾಗಿದೆ. ಪ್ರಸ್ತುತ ದಿನಕ್ಕೆ 15,000 ಕೋವಿಡ್-19 ಪರೀಕ್ಷೆಗಳನ್ನು ನಡೆಸಲಾಗುತ್ತಿದೆ. ಏಪ್ರಿಲ್ 30 ರ ವೇಳೆಗೆ ಪರೀಕ್ಷಾ ಪ್ರಯೋಗಾಲಯಗಳ ಸಂಖ್ಯೆಯನ್ನು 300 ಕ್ಕೆ ಹೆಚ್ಚಿಸಲಾಗುವುದು. ಮೇ 31ರ ವೇಳೆಗೆ ಪ್ರತಿ ದಿನ 1 ಲಕ್ಷ ಪರೀಕ್ಷೆಗಳನ್ನು ನಡೆಸುವ ಗುರಿ ಹೊಂದಲಾಗಿದೆ. ಪರೀಕ್ಷಾ ಸೌಲಭ್ಯ ಹೆಚ್ಚಿಸುವ ನಿಟ್ಟಿನಲ್ಲಿ ಐಸಿಎಂಆರ್ ಗೆ ಅರ್ಜಿ ಸಲ್ಲಿಸುವಂತೆ ಖಾಸಗಿ ಪ್ರಯೋಗಾಲಯಗಳು ಮತ್ತು ವೈದ್ಯಕೀಯ ಕಾಲೇಜುಗಳಿಗೆ ಸಲಹೆ ನೀಡುವಂತೆ ಪ್ರಧಾನಮಂತ್ರಿಯವರು ಸೂಚಿಸಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವರು ಜನಸಂದಣಿಯಾಗದಂತೆ ಎಚ್ಚರ ವಹಿಸುವಂತೆ ಸೂಚಿಸಿದರು.
ಈ ಬಗ್ಗೆ ನಮ್ಮ ಸರ್ಕಾರ ಈಗಾಗಲೇ ಕ್ರಮ ಕೈಗೊಂಡಿದೆ. ಗೃಹ ಸಚಿವರು ಲಾಕ್ಡೌನ್ ಕ್ರಮಗಳನ್ನು ಇನ್ನಷ್ಟು ಕಟ್ಟುನಿಟ್ಟಾಗಿ ಹಾಗೂ ಗಂಭೀರವಾಗಿ ಕೈಗೊಳ್ಳುವಂತೆಯೂ ಸೂಚಿಸಿದ್ದಾರೆ. ಲಾಕ್ಡೌನ್ನಿಂದ ನಗರಗಳಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಹಳ್ಳಿಯ ಜನರು ಸ್ವೀಕರಿಸದ ಕಾರಣ ಹಳ್ಳಿಗಳಿಗೆ ಕಳುಹಿಸದಂತೆ ಸಲಹೆ ನೀಡಿದರು.