ಬೆಂಗಳೂರು : ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್‌ನಲ್ಲಿ ಹೊಸ ಅತ್ಯಾಧುನಿಕ ಬೋಯಿಂಗ್ ಇಂಡಿಯಾ ಎಂಜಿನಿಯರಿಂಗ್ ಮತ್ತು ತಂತ್ರಜ್ಞಾನ ಕೇಂದ್ರ ಕ್ಯಾಂಪಸ್ ಉದ್ಘಾಟಿಸಲು ಪ್ರಧಾನಿ ನರೇಂದ್ರ ಮೋದಿಯವರು ನಾಳೆ ದೇವನಹಳ್ಳಿಗೆ ಆಗಮಿಸಲಿದ್ದಾರೆ.
ಆದ್ದರಿಂದ ನಗರದ ಕೆಲ ಸಂಚಾರ ಮಾರ್ಗಗಳಲ್ಲಿ ಕೆಲ ಬದಲಾವಣೆಗಳನ್ನ ಬೆಂಗಳೂರು ನಗರ ಸಂಚಾರ ಪೊಲೀಸರು ಆದೇಶಿಸಿದ್ದಾರೆ. ನಾಳೆ ಮಧ್ಯಾಹ್ನ 2:10ಕ್ಕೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಆಗಮಿಸಲಿರುವ ಹಿನ್ನೆಲೆ ಹೆಣ್ಣೂರು - ಬಾಗಲೂರು ರಸ್ತೆ ಸೇರಿದಂತೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ಕೆಲ ರಸ್ತೆಗಳಲ್ಲಿ ಬದಲಾವಣೆಗಳನ್ನ ಮಾಡಿದ್ದಾರೆ.
ಶುಕ್ರವಾರ ಬೆಳಗ್ಗೆ 8 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಸಂಚಾರ ನಿರ್ಬಂಧಿತ ರಸ್ತೆಗಳು: ಗೊಲ್ಲಹಳ್ಳಿ ಗೇಟ್ ನಿಂದ ಹುನಚೂರುವರೆಗೆ, ಏರ್ ಲೈನ್ಸ್ ಡಾಬಾದಿಂದ ಬೂದಿಗೆರೆಯವರೆಗೆ, ಹೆಣ್ಣೂರು-ಬಗಲೂರು ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣ ರಸ್ತೆಯವರೆಗೆ, ಚಿಕ್ಕಜಾಲ ಕೋಟೆ ಮುಖ್ಯ ರಸ್ತೆಯಿಂದ ವಿಮಾನ ನಿಲ್ದಾಣದವರೆಗೆ, ಬಗಲೂರಿನಿಂದ ವಿಮಾನ ನಿಲ್ದಾಣದವರೆಗೆ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಸಂಚಾರ ಮಾರ್ಗ ಬದಲಾವಣೆ : ವೈಟ್ ಫೀಲ್ಡ್, ಕೆ. ಆರ್ ಪುರಂ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗೊಲ್ಲಹಳ್ಳಿ ಗೇಟ್ ಮಾರ್ಗವಾಗಿ ಸಂಚರಿಸುವ ವಾಹನಗಳು ಸಂಚರಿಸಬೇಕಾದ ಮಾರ್ಗಗಳು
ಗೊಲ್ಲಹಳ್ಳಿ ಗೇಟ್-ಬಲತಿರುವು-ಹೊನ್ನಹಳ್ಳಿ ಗೇಟ್-ಬೆಟ್ಟಕೋಟೆ-ಎಲ್‌ಲೈನ್ ಡಾಬಾ-ಎಡತಿರುವು-ದೇವನಹಳ್ಳಿ ಬಸ್ ನಿಲ್ದಾಣ-ಎಡ ತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ-ದೇವನಹಳ್ಳಿ ಟೋಲ್-ಎಡ ತಿರುವು-ಕೆಂಪೇಗೌಡ ವಿಮಾನ ನಿಲ್ದಾಣ ತಲುಪಬಹುದು.
ರಾಷ್ಟ್ರೀಯ ಹೆದ್ದಾರಿ-648 ಏರ್‌ಲೈನ್ಸ್ ಡಾಬಾ ಜಂಕ್ಷನ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಕಡೆಗೆ ಕೆ.ಐ.ಎ.ಡಿ.ಬಿ ಇಂಡಸ್ಟ್ರೀಯಲ್ ಏರಿಯಾ ಸಂಚರಿಸುವ ವಾಹನ ಸಂಚರಿಸಬೇಕಾದ ಮಾರ್ಗಗಳು: ಏರ್‌ಲೈನ್ಸ್ ಡಾಬಾ-ದೇವನಹಳ್ಳಿ ಬಸ್ ನಿಲ್ದಾಣ-ಎಡತಿರುವು-ದೇವನಹಳ್ಳಿ ಬೈಪಾಸ್-ಎಡ ತಿರುವು-ಬಿ.ಬಿ ರಸ್ತೆ- ದೇವನಹಳ್ಳಿ ಟೋಲ್-ಎಡ ತಿರುವು- ಕೆಂಪೇಗೌಡ ವಿಮಾನ ನಿಲ್ದಾಣ ತಲುಪಬಹುದು.
ಹೆಣ್ಣೂರು-ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಬಾಗಲೂರು ಗುಂಡಪ್ಪ ಸರ್ಕಲ್-ಎಡ ತಿರುವು-ರೇವಾ ಕಾಲೇಜು ಜಂಕ್ಷನ್-ಬಾಗಲೂರು ಕ್ರಾಸ್-ಬಲ ತಿರುವು- ಚಿಕ್ಕ ಚಾಲ-ಸಾದಹಳ್ಳಿ ಟೋಲ್ -ಏರ್ ಪೋರ್ಟ್ ಫ್ಲೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ ತಲುಪಬಹುದು.
ಚಿಕ್ಕಜಾಲ ಕೋಟೆ ಕ್ರಾಸ್ ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳಮ್ಮ ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಚಿಕ್ಕಚಾಲ-ಸಾದಹಳ್ಳಿ ಟೋಲ್ – ಏರ್ ಪೋರ್ಟ್ ಫ್ಲೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ.
ಬಾಗಲೂರು ಕಡೆಯಿಂದ ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಗಾಳನ್ನು ಸರ್ಕಲ್ ಮಾರ್ಗವಾಗಿ ಸಂಚರಿಸುವ ವಾಹನಗಳು ಬಾಗಲೂರು ಕಾಲೋನಿ ಬಲ ತಿರುವು – ರಜಾಕ್ ಪಾಳ್ಯ – ಎಂ.ವಿ.ಐ.ಟಿ ಕಾಲೇಜು – ಚಿಕ್ಕಚಾಲ ಬಲ ತಿರುವು – ಬಿಬಿ ರಸ್ತೆ – ಸಾದಹಳ್ಳಿ ಟೋಲ್- ಏರ್ ಪೋರ್ಟ್ ಫ್ಲೈ ಓವರ್ ಎಂಟ್ರಿ- ಕೆಂಪೇಗೌಡ ವಿಮಾನ ನಿಲ್ದಾಣ ತಲುಪಬಹುದು.
ಇದನ್ನೂ ಓದಿ : ಜ.19 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಭೇಟಿ: ನಮೋ ರೋಡ್ ಶೋಗೆ ಬಿಜೆಪಿ ಚಿಂತನೆ