ETV Bharat / state

ಮೋದಿ ಬೆಂಗಳೂರು ಭೇಟಿ ಹಿಂದಿನ ದಿನ ವ್ಯಕ್ತಿ ಬಂಧನ: ಭದ್ರತಾ ವೈಫಲ್ಯವಾಗಿಲ್ಲ- ಡಿಸಿಪಿ - ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಭೇಟಿ

ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಿದಾಗ ಭದ್ರತಾ ವೈಫಲ್ಯವಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿತ್ತು. ಈ ಬಗ್ಗೆ ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ಸ್ಪಷ್ಟನೆ ನೀಡಿದ್ದಾರೆ.

no security failure says DCP
ಮೋದಿ ಭೇಟಿ ಹಿಂದಿನ ದಿನ ವ್ಯಕ್ತಿ ಬಂಧನ
author img

By

Published : Nov 17, 2022, 6:42 AM IST

ಬೆಂಗಳೂರು: ನಗರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ್ದಾಗ ಭದ್ರತಾ ವೈಫಲ್ಯವಾಗಿದೆ ಎಂದು ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಈ ಕುರಿತು ಸ್ಪಷ್ಟನೆ ನೀಡಿರುವ ವೈಟ್‌ಫೀಲ್ಡ್ ಡಿಸಿಪಿ ಗಿರೀಶ್ ಅವರು ಇದೊಂದು ಸುಳ್ಳು ಎಂದು ತಿಳಿಸಿದ್ದಾರೆ.

ಪ್ರಧಾನಿ ಭೇಟಿಗೂ ಒಂದು ದಿನ ಮೊದಲು ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಅಸ್ಸಾಂ ಮೂಲದ ಮುಕುಂದ ಕೌಂದ್(36) ಎಂಬುವನನ್ನು ಎಚ್‌ಎಎಲ್ ಪೊಲೀಸರು ಬಂಧಿಸಿದ್ದರು. ಈ ವಿಚಾರದಲ್ಲಿ ಗುಪ್ತಚರ ಹಾಗೂ ಭದ್ರತಾ ವೈಫಲ್ಯವಾಗಿದೆ ಎಂಬ ವರದಿ ಸತ್ಯಕ್ಕೆ ದೂರವಾದದ್ದು ಎಂದು ಅವರು ಹೇಳಿದರು.

ಇದನ್ನೂ ಓದಿ: ಕನಕದಾಸ, ವಾಲ್ಮೀಕಿ ಪ್ರತಿಮೆಗಳಿಗೆ ಪುಷ್ಪ ನಮನ ಸಲ್ಲಿಸಿದ ಪ್ರಧಾನಿ ಮೋದಿ

ನಿಷೇಧಿತ ಪ್ರದೇಶ ಎಂದು ತಿಳಿಯದ ವ್ಯಕ್ತಿಯೊಬ್ಬ ನವೆಂಬರ್‌ 9 ರಂದು ವಿಮಾನ ನಿಲ್ದಾಣ ಸೇವಾ ಕೇಂದ್ರ (ಎಚ್‌ಎಎಲ್) ಕಾಂಪೌಂಡ್ ಹಾರಿ ಬಂದಿದ್ದಾನೆ. ಆತ ಕಳ್ಳತನ ಮಾಡುವ ಉದ್ದೇಶದಿಂದ ಅತಿಕ್ರಮ ಪ್ರವೇಶ ಮಾಡಿದ್ದ. ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಡಿಸಿಪಿ ಸ್ಪಷ್ಟಪಡಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.