ETV Bharat / state

ನ.11 ಕ್ಕೆ ಬೆಂಗಳೂರಿಗೆ ಮೋದಿ ಭೇಟಿ: ಕಾರ್ಯಕ್ರಮಗಳ ಸಿದ್ಧತೆ ಕುರಿತು ಸಿಎಂ ಸಭೆ

ನವೆಂಬರ್ 11 ರಂದು ಬೆಂಗಳೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸುತ್ತಿದ್ದು, ಈ ಹಿನ್ನೆಲೆ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಲಾಯಿತು.

basavaraj bommai
ಸಿಎಂ ಸಭೆ
author img

By

Published : Nov 5, 2022, 10:29 AM IST

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ನವೆಂಬರ್ 11 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕುರಿತು ಬಿಜೆಪಿ ಕಚೇರಿಯಲ್ಲಿ ಮಹತ್ವದ ಸಭೆ ನಡೆಸಲಾಯಿತು.

ನವೆಂಬರ್ 11 ರಂದು ಬೆಂಗಳೂರಿಗೆ ಆಗಮಿಸಲಿರುವ ಮೋದಿ, ಶಾಸಕರ ಭವನದ ಆವರಣದಲ್ಲಿರುವ ಕನಕದಾಸ ಪ್ರತಿಮೆಗೆ ಮಾಲಾರ್ಪಣೆ ಮಾಡಲಿದ್ದಾರೆ. ನಂತರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ. ಅಲ್ಲಿಂದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ತೆರಳಲಿದ್ದು, ನಾಡಪ್ರಭು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನೂತನವಾಗಿ ನಿರ್ಮಿಸಿರುವ ಟರ್ಮಿನಲ್-2 ಲೋಕಾರ್ಪಣೆ ಮಾಡಲಿದ್ದಾರೆ. ಬಳಿಕ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಹಾಗೂ ಥೀಮ್ ಪಾರ್ಕ್ ಉದ್ಘಾಟನೆ ಮಾಡಲಿದ್ದು, ಕೊನೆಯದಾಗಿ ವಿಮಾನ ನಿಲ್ದಾಣದ ಹತ್ತಿರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಇದನ್ನೂ ಓದಿ: ದಾಹ ಮುಕ್ತ ಕರ್ನಾಟಕ ಯೋಜನೆಗೆ ಮೋದಿ ಚಾಲನೆ : ಸಚಿವ ಭೈರತಿ ಬಸವರಾಜ್

ಪ್ರಧಾನಿ ನರೇಂದ್ರ ಮೋದಿಯವರು ಬೆಂಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೂರ್ವಭಾವಿ ಸಭೆ ನಡೆಸಿದರು. ಬೆಂಗಳೂರು ಸಚಿವರು, ಶಾಸಕರು, ಸಂಸದರು, ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಮತ್ತು ಪ್ರಮುಖರ ಜೊತೆ ಸಮಾಲೋಚನೆ ನಡೆಸಿ ಕಾರ್ಯಕ್ರಮಗಳ ಸಿದ್ಧತೆ ಕುರಿತು ಚರ್ಚಿಸಿ ಜವಾಬ್ದಾರಿ ಹಂಚಿಕೆ ಮಾಡಿದರು.

ಇದನ್ನೂ ಓದಿ: Invest Karnataka 2022.. ಹೂಡಿಕೆಗೆ ಕರ್ನಾಟಕ ಉತ್ತಮ ರಾಜ್ಯ: ಪ್ರಧಾನಿ ಮೋದಿ ಬಣ್ಣನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.