ETV Bharat / state

ಅಶ್ವತ್ಥ್‌ ನಾರಾಯಣ್ ಅವರ ಲೀಗಲ್‌ ನೋಟಿಸ್‌ಗೆ ಹೆದರುವ ಪ್ರಶ್ನೆಯೇ ಇಲ್ಲ: ಮೋಹನ್‌ ದಾಸರಿ

13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಒಳಗೊಂಡ ಟೂಲ್​ಕಿಟ್​ ಖರೀದಿಸುವ ಗುತ್ತಿಗೆಯಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ದಾಖಲೆ ಸಹಿತ ಆರೋಪ ಮಾಡಿದ್ದೆವು ಎಂದು ನಗರ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದ್ದಾರೆ.

ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ
ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ
author img

By

Published : Aug 4, 2022, 10:59 PM IST

ಬೆಂಗಳೂರು: ಕೈಗಾರಿಕಾ ತರಬೇತಿ ಕೇಂದ್ರದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಟೂಲ್‌ ಕಿಟ್‌ ವಿತರಣೆ ಹಗರಣ ಆರೋಪಕ್ಕೆ ಸಂಬಂಧಿಸಿ ಸಚಿವ ಅಶ್ವತ್ಥ್‌ ನಾರಾಯಣ ಕಳುಹಿಸಿರುವ ಲೀಗಲ್ ನೋಟಿಸ್‌ಗೆ ಹೆದರುವುದಿಲ್ಲ. ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಪಕ್ಷದ ಹೋರಾಟ ನಿರ್ಭೀತಿಯಿಂದ ಮುಂದುವರೆಯಲಿದೆ ಎಂದು ಎಎಪಿಯ ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಹೇಳಿದರು.

ಬೆಂಗಳೂರು ನಗರ ಅಧ್ಯಕ್ಷ ಮೋಹನ್‌ ದಾಸರಿ ಅವರು ಮಾತನಾಡಿದರು

ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಮೋಹನ್‌ ದಾಸರಿ, 13 ಸಾವಿರ ವಿದ್ಯಾರ್ಥಿಗಳಿಗೆ 22 ಕೋಟಿ ರೂಪಾಯಿ ವೆಚ್ಚದಲ್ಲಿ ಅಗತ್ಯ ಸಲಕರಣೆಗಳನ್ನು ಒಳಗೊಂಡ ಟೂಲ್ ಕಿಟ್‌ಗಳನ್ನು ಖರೀದಿಸುವ ಗುತ್ತಿಗೆಯಲ್ಲಿ ಭಾರಿ ಅಕ್ರಮ ನಡೆದಿರುವ ಕುರಿತು ದಾಖಲೆ ಸಹಿತ ಆರೋಪ ಮಾಡಿದ್ದೆವು. ಈ ಕುರಿತು ನ್ಯಾಯಾಂಗ ತನಿಖೆ ಆಗಬೇಕೆಂದು ಸರ್ಕಾರವನ್ನು ಒತ್ತಾಯಿಸಿದ್ದೆವು.

ಆದರೆ, ಸರ್ಕಾರವು ತನಿಖೆಗೆ ವಹಿಸದ ಕಾರಣ ಈ ಕುರಿತು ಲೋಕಾಯುಕ್ತರಿಗೆ ದೂರು ನೀಡಿದ್ದೆವು. ಸಚಿವ ಅಶ್ವತ್ಥ್‌ ನಾರಾಯಣ್‌ ನಮ್ಮ ಆರೋಪಗಳಿಗೆ ಸ್ಪಷ್ಟೀಕರಣ ನೀಡುವ ಬದಲು ಪಕ್ಷದ ಮುಖಂಡರಾದ ಮೋಹನ್‌ ದಾಸರಿ, ಡಾ.ವೆಂಕಟೇಶ್‌ ಹಾಗೂ ಚನ್ನಪ್ಪಗೌಡ ನೆಲ್ಲೂರು ವಿರುದ್ಧ ವಕೀಲರಿಂದ ಲೀಗಲ್‌ ನೋಟಿಸ್‌ ಕಳುಹಿಸಿ ನಮ್ಮ ಬಾಯಿ ಮುಚ್ಚಿಸಲು ಯತ್ನಿಸಿದ್ದಾರೆ ಎಂದು ಹೇಳಿದರು.

ಎಎಪಿ ಮುಖಂಡ ಡಾ. ವೆಂಕಟೇಶ್‌ ಮಾತನಾಡಿ, ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳ ವಿದ್ಯಾರ್ಥಿಗಳಿಗೆ ಸರ್ಕಾರವು ಅನ್ಯಾಯ ಮಾಡಿದೆ. ಟೆಂಡರ್‌ನಲ್ಲಾದ ಅಕ್ರಮದಿಂದಾಗಿ ಅನುದಾನದ ದೊಡ್ಡ ಪಾಲು ಭ್ರಷ್ಟ ಸಚಿವರು ಹಾಗೂ ಗುತ್ತಿಗೆದಾರರ ಜೇಬು ಸೇರಿ, ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಉಪಕರಣಗಳು ಪೂರೈಕೆಯಾಗಲಿದೆ. ಭ್ರಷ್ಟಾಚಾರವನ್ನು ಪ್ರಶ್ನಿಸಿದ್ದಕ್ಕೆ 5 ಕೋಟಿ ರೂಪಾಯಿ ಪರಿಹಾರ ಕೇಳಿ ಸಚಿವ ಅಶ್ವತ್ಥ್‌ ನಾರಾಯಣ್‌ ನೋಟಿಸ್‌ ಕಳುಹಿಸಿರುವುದು ಖಂಡನೀಯ ಎಂದರು.

ಇದನ್ನೂ ಓದಿ: ಬೆಂಗಳೂರಿಗರೇ ಹುಷಾರ್​: ಫುಟ್​ಪಾತ್ ಬ್ಲಾಕ್ ಮಾಡಿದ್ರೆ ಸಿಆರ್​ಪಿಸಿ ಅಡಿ ಕೇಸ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.