ETV Bharat / state

1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ - ಮೇಲ್ವಿಚಾರಣೆಗೆ ಮುಖ್ಯ ಕಾರ್ಯದರ್ಶಿ ನೇತೃತ್ವದ ಗುಂಪು ರಚನೆ: ಬೊಮ್ಮಾಯಿ - 1 ಟ್ರಿಲಿಯನ್ ಡಾಲರ್ ಆರ್ಥಿಕತೆ ಗುರಿ

ಕರ್ನಾಟಕ ಆರ್ಥಿಕ ಸಮೀಕ್ಷೆ 2021-22 ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್​ ದಾಸ್​ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ 'Karnataka: A $1 Trillion GDP Vision' ಎಂಬ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಡುಗಡೆ ಮಾಡಿದರು.

bommai
ಬೊಮ್ಮಾಯಿ
author img

By

Published : Oct 19, 2022, 8:55 AM IST

ಬೆಂಗಳೂರು: ಭಾರತದ 5 ಟ್ರಿಲಿಯನ್ ಡಾಲರ್ ಆರ್ಥಿಕತೆಗೆ ಕರ್ನಾಟಕ ರಾಜ್ಯ ಸರ್ಕಾರ 1 ಟ್ರಿಲಿಯನ್ ಡಾಲರ್ ಕೊಡುಗೆ ನೀಡುವ ಗುರಿ ಹೊಂದಿದೆ. ಹೀಗಾಗಿ, ಸರ್ಕಾರದ ಮುಖ್ಯಕಾರ್ಯದರ್ಶಿ, ಯೋಜನಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಮೋಹನ್ ದಾಸ್ ಪೈ, ಎಫ್ಐಸಿಸಿಐ ಮತ್ತು ಮೆಕೆನ್ಸಿಯ ಪ್ರತಿನಿಧಿಗಳನ್ನು ಒಳಗೊಂಡ ಗುಂಪನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯೋಜನಾ ಇಲಾಖೆಯ ಕರ್ನಾಟಕ ಆರ್ಥಿಕ ಸಮೀಕ್ಷೆ 2021-22 ರ ಆಧಾರದ ಮೇಲೆ ಹೆಚ್ಚಿನ ವಿಶ್ಲೇಷಣೆಯೊಂದಿಗೆ ಮೋಹನ್​ ದಾಸ್​ ಪೈ ಮತ್ತು ನಿಶಾ ಹೊಳ್ಳ ಅವರು ರಚಿಸಿರುವ 'Karnataka: A $1 Trillion GDP Vision' ಎಂಬ ವರದಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ಅವರು, 2025ರ ವೇಳೆಗೆ 1 ಟ್ರಿಲಿಯನ್ ಯುಎಸ್ ಡಾಲರ್ ಆರ್ಥಿಕತೆಯನ್ನು ಸಾಧಿಸುವ ಗುರಿಯೊಂದಿಗೆ ಕ್ರಿಯಾ ಯೋಜನೆಯನ್ನು ಸಿದ್ಧಪಡಿಸುವುದು, ಮೇಲ್ವಿಚಾರಣೆ ಮಾಡುವುದು ಮತ್ತು ಮೌಲ್ಯಮಾಪನವನ್ನು ಈ ಗುಂಪು ಮಾಡಲಿದೆ. ಈ ಕ್ರಿಯಾ ಯೋಜನೆಯ ಪ್ರಗತಿಯ ಮೇಲ್ವಿಚಾರಣೆಯನ್ನು ಇದರ ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ಮಾಡಲಾಗುವುದು ಎಂದು ತಿಳಿಸಿದರು.

cm bommai
ಮೋಹನ್ ದಾಸ್ ಪೈ ಪುಸ್ತಕ ಬಿಡುಗಡೆ

ಇದನ್ನೂ ಓದಿ: ತುಳಿತಕ್ಕೊಳಗಾದವರಿಗೆ ನ್ಯಾಯ ಕೊಡುವ ಕೆಲಸ.. ಮತ್ತೆ ಮೀಸಲಾತಿ ಹೆಚ್ಚಳದ ಸುಳಿವು ನೀಡಿದ್ರಾ ಸಿಎಂ?

ಫಲಿತಾಂಶ ಆಧಾರಿತ ಹಾಗೂ ಉದ್ದೇಶಿತ ಬಜೆಟ್​ಗೆ ಅನುಕೂಲವಾಗುವಂತೆ ಡಿಸೆಂಬರ್ 2022 ರೊಳಗೆ ಕ್ರಿಯಾ ಯೋಜನೆ ಸಿದ್ಧವಾಗಲಿದೆ. ಕರ್ನಾಟಕದಿಂದ ಒಂದು ಟ್ರಿಲಿಯನ್ ಯುಎಸ್​ಡಿ ಕೊಡುಗೆಯೊಂದಿಗೆ 5 ಟ್ರಿಲಿಯನ್ ಭಾರತದ ಗುರಿಯನ್ನ ನಾವು ಹೊಂದಿಕೊಳ್ಳಬೇಕು. ಬೆಳವಣಿಗೆಯ ದರಗಳನ್ನು ಹೆಚ್ಚಿಸಲು ಮಂಗಳೂರು ಬಂದರು ವಿಸ್ತರಣೆಗಾಗಿ ಅಗಾಧ ಸಂಭಾವ್ಯತೆಯನ್ನು ಪರಿಗಣಿಸಿ ಕರಾವಳಿ ಕಾರಿಡಾರ್ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವುದರ ಮೂಲಕ ರಫ್ತನ್ನು ಹೆಚ್ಚಿಸಬಹುದಾಗಿದೆ ಎಂದು ಅಭಿಪ್ರಾಯಪಟ್ಟರು.

ಮೂಲಸೌಕರ್ಯ ಅಭಿವೃದ್ಧಿಯನ್ನು ಉತ್ತೇಜಿಸಲು ಮೂಲಸೌಕರ್ಯ ವೆಚ್ಚವನ್ನು ಕಡಿಮೆ ಮಾಡುವ ಅಗತ್ಯವಿದೆ. ಜೊತೆಗೆ ಅಭಿವೃದ್ಧಿಯನ್ನು ಉತ್ತೇಜಿಸಲು ಜನರ ಆರ್ಥಿಕ ಸಾಮರ್ಥ್ಯಗಳನ್ನು ಹೆಚ್ಚಿಸಬೇಕಾಗಿದೆ. ಕೈಗಾರಿಕಾ, ಕೃಷಿ ಮತ್ತು ಸೇವಾ ಕ್ಷೇತ್ರಗಳಲ್ಲಿ ಉದ್ಯೋಗ ಮತ್ತು ಬೆಳವಣಿಗೆಯನ್ನು ಉತ್ತೇಜಿಸಲು ಕೈಗಾರಿಕಾ ವಲಯದ ಸಾಮರ್ಥ್ಯವನ್ನು ಹೆಚ್ಚಿಸುವುದರ ಮೂಲಕ ಕೃಷಿ ಮತ್ತು ಸೇವಾ ವಲಯದ ಬೆಳವಣಿಗೆಯನ್ನ ಕಾಣಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದನ್ನೂ ಓದಿ: ಹಳೆ ಮಾಹಿತಿಯನ್ನೇ ಕಾಪಿ ಪೇಸ್ಟ್ ಮಾಡಿ ತಂದ ಸಿಇಒಗಳಿಗೆ ಚಳಿ ಬಿಡಿಸಿದ ಸಿಎಂ

ಕೈಗಾರಿಕೆ ಮತ್ತು ಖಾಸಗಿ ವಲಯಗಳೆರಡೂ ಬೆಳವಣಿಗೆಯ ವೇಗವನ್ನು ಹೆಚ್ಚಿಸಲು ಪರಿಹಾರಗಳನ್ನು ಕಂಡುಹಿಡಿಯಬೇಕು. ಕ್ರಿಯಾ ಯೋಜನೆಯು ಈ ಎಲ್ಲ ಅಂಶಗಳನ್ನು ಒಳಗೊಂಡಿರಬೇಕು ಎಂದು ಸೂಚಿಸಿದರು.

ಕಾರ್ಯಕ್ರಮದಲ್ಲಿ ಕೃತಿಯ ಲೇಖಕರಾದ ಟಿ.ವಿ. ಮೋಹನ್​ ದಾಸ್ ಪೈ, ನಿಶಾ ಹೊಳ್ಳ, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಯೋಜನಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಸೇರಿದಂತೆ ಮತ್ತಿತರೆ ಗಣ್ಯರು ಉಪಸ್ಥಿತರಿದ್ದರು.

ಇದನ್ನೂ ಓದಿ: ಕರ್ನಾಟಕವನ್ನು ಕಾಂಗ್ರೆಸ್​​​​ನವರು ಎಟಿಎಂ ಮಾಡಿಕೊಂಡಿದ್ದರು : ಸಿಎಂ ಬೊಮ್ಮಾಯಿ ವಾಗ್ದಾಳಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.