ಬೆಂಗಳೂರು: ಇಂದಿನ ಸಮಾಜದಲ್ಲಿ ಪ್ರಾಮಾಣಿಕತೆಗಿಂತಲೂ ಹಣ ಮತ್ತು ಅಧಿಕಾರಕ್ಕೆ ಹೆಚ್ಚು ಬೆಲೆ ಇದೆ ಎಂದು ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ ಕಳವಳ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ವಿಶ್ವವಿದ್ಯಾಲಯದ ಸಸ್ಯಶಾಸ್ತ್ರ ವಿಭಾಗದ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ನಮ್ಮ ಪರಂಪರೆಯನ್ನು ನೆನೆದು ಜೀವನದಲ್ಲಿ ಮಾನವೀಯ ಮೌಲ್ಯ, ನೈತಿಕತೆ ಮತ್ತು ಪ್ರಾಮಾಣಿಕತೆಯನ್ನು ಅಳವಡಿಸಿಕೊಳ್ಳಬೇಕು. ಯುವಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಬೆಳೆಸಿಕೊಳ್ಳುವ ಮೂಲಕ ಭವಿಷ್ಯದ ಭಾರತವನ್ನು ನಿರ್ಮಿಸಬೇಕು ಎಂದು ಕರೆ ನೀಡಿದರು.