ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕೆಗಳ ನಿಗಮದ ಸಹಾಯಕ ವ್ಯವಸ್ಥಾಪಕ ಬಿ.ಸಿ.ಶಾಂತಕುಮಾರ್ ಅವರಿಗೆ ನಗರದ ವಿಶೇಷ ನ್ಯಾಯಾಲಯ ಮೂರು ವರ್ಷಗಳ ಕಾಲ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ವಿಚಾರಣೆ ನಡೆಸಿರುವ ಬೆಂಗಳೂರಿನ 48ನೇ ಸಿಟಿ ಸಿವಿಲ್(ವಿಶೇಷ)ನ್ಯಾಯಾಲಯ ಆರೋಪಿಗೆ ಶಿಕ್ಷೆ ವಿಧಿಸಿ ಆದೇಶಿಸಿದೆ.
2009ರಲ್ಲಿ ಲೋಕಾಯುಕ್ತ ಪೊಲೀಸರು ಆರೋಪಿ ಶಾಂತಕುಮಾರ್ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಈ ಸಂದರ್ಭದಲ್ಲಿ ಇವರ ಬಳಿ 84,42,067 ರು.ಗಳಷ್ಟು ಹಣ ಸಿಕ್ಕಿತ್ತು. ಜತೆಗೆ, ಇದು ಆದಾಯದ ಮೂಲಗಳಿಗಿಂತಲೂ ಶೇ.122.79 ಹೆಚ್ಚಳವಾಗಿತ್ತು. ಈ ಅಂಶವನ್ನು ಆಧರಿಸಿದ ಜಾರಿ ನಿರ್ದೇಶನಾಲಯ(ಇಡಿ)ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಪ್ರಕರಣ ದಾಖಲಿಸಿಕೊಂಡಿತ್ತು. ಅಲ್ಲದೆ, ತನಿಖೆ ನಡೆಸಿ ಆರೋಪ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು. ವಾದ-ಪ್ರತಿವಾದ ನಡೆಸಿದ ನ್ಯಾಯಾಲಯ ಸಾಕ್ಷ್ಯಾಧಾರಗಳನ್ನು ಪರಿಗಣಿಸಿ ಅಪರಾಧಿ ಶಾಂತಕುಮಾರ್ಗೆ ಇದೀಗ ಶಿಕ್ಷೆ ವಿಧಿಸಿ ಆದೇಶಿಸಿದೆ.
ಇದನ್ನೂ ಓದಿ : ಕಕ್ಷಿದಾರನಿಗೆ ವಂಚನೆ ಆರೋಪ: ರಾಜ್ಯ ವಕೀಲರ ಪರಿಷತ್ನ ಸದಸ್ಯ ಕೆ ಬಿ ನಾಯಕ್ ವಕೀಲಿಕೆಯಿಂದ ಅಮಾನತು