ಬೆಂಗಳೂರು: ಅಕ್ರಮ ಹಣ ಅವ್ಯವಹಾರದ ಹಿನ್ನೆಲೆಯಲ್ಲಿ ಪ್ರತಿಷ್ಠಿತ ಅಮ್ನೆಸ್ಟಿ ಇಂಟರ್ ನ್ಯಾಷನಲ್ ಸಂಸ್ಥೆ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಈ ಹಿಂದೆ ಕಂಪನಿಯಲ್ಲಿ ಹಣದ ಅವ್ಯವಹಾರ ನಡೆದಿದೆ ಎಂದು ಹಲವು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ವಿದೇಶಿ ಕೊಡುಗೆಗಳ ನಿಯಂತ್ರಣ ಕಾಯ್ದೆಯಡಿ ಸಿಬಿಐ ದೂರು ದಾಖಲಿಸಿಕೊಂಡು ದಾಳಿ ನಡೆಸಿದ್ದು, ಸಿಬಿಐ ಅಧಿಕಾರಿಗಳು ಸಂಸ್ಥೆಯ ಕುರಿತಾದ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.
ಈ ಸಂಸ್ಥೆ 160 ದೇಶಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, 70 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ಹೊಂದಿದೆ. ಕಳೆದ ವರ್ಷ ಅ.25ರಂದು ಜಾರಿ ನಿರ್ದೇಶನಾಲಯ ಅಮ್ನೆಸ್ಟಿ ಕಚೇರಿ ಮೇಲೆ ದಾಳಿ ನಡೆಸಿತ್ತು. ನಂತರ ಇಡಿ, ಸಿಬಿಐಗೆ ಮಾಹಿತಿ ರವಾನೆ ಮಾಡಿತ್ತು. ಸದ್ಯ ಸಿಬಿಐ ದಾಳಿ ನಡೆಸಿ ಹಲವು ಕಡತಗಳನ್ನು ವಶಪಡಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.