ETV Bharat / state

ವಿಜಯನಗರದಲ್ಲಿ ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ - ಬೆಂಗಳೂರು

ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರ್ಫಾನ್ ಹಾಗೂ ಸ್ನೇಹಿತ ನವೀನ್ ಹಲವು ವರ್ಷಗಳಿಂದ ಜೊತೆಯಲ್ಲಿದ್ದರು. ಇಬ್ಬರು ಬಹಳ ಆತ್ಮೀಯ ಸ್ನೇಹಿತರಾಗಿದ್ದು, ಸಣ್ಣಪುಟ್ಟ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಆದ್ರೆ ನಿನ್ನೆ ಮೊಬೈಲ್ ಹಣದ ಕುರಿತು ಇಬ್ಬರ ಮಧ್ಯೆ ಜಗಳ ಶುರುವಾಗಿದೆ.

bangalore
ಹಣಕಾಸಿನ ವಿಚಾರ: ಸ್ನೇಹಿತರ ನಡುವಿನ ಜಗಳ ಕೊಲೆಯಲ್ಲಿ ಅಂತ್ಯ
author img

By

Published : Dec 29, 2020, 1:00 PM IST

ಬೆಂಗಳೂರು: ಹಣಕಾಸಿನ ವಿಚಾರಕ್ಕೆ ಸ್ನೇಹಿತರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

ಇರ್ಫಾನ್ ಕೊಲೆಯಾದ ವ್ಯಕ್ತಿ. ವಿಜಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರ್ಫಾನ್ ಹಾಗೂ ಸ್ನೇಹಿತ ನವೀನ್ ಹಲವು ವರ್ಷಗಳಿಂದ ಜೊತೆಯಲ್ಲಿದ್ದರು. ಇಬ್ಬರು ಬಹಳ ಆತ್ಮೀಯ ಸ್ನೇಹಿತರಾಗಿದ್ದು, ಸಣ್ಣಪುಟ್ಟ ಕೆಲಸ ಮಾಡುತ್ತಾ ಜೀವನ ಸಾಗಿಸುತ್ತಿದ್ದರು. ಆದ್ರೆ ನಿನ್ನೆ ಮೊಬೈಲ್ ಹಣದ ಕುರಿತು ಇಬ್ಬರ ಮಧ್ಯೆ ಜಗಳ ಶುರುವಾಗಿದೆ. ತದ ನಂತರ ಜಗಳ ತಾರಕಕ್ಕೇರಿ ಇಬ್ಬರು ಹೊಡೆದಾಡಿಕೊಂಡಿದ್ದಾರೆ. ಈ ಹೊಡೆದಾಟದ ವೇಳೆ ಗಂಭೀರವಾಗಿ ಗಾಯಗೊಂಡ ಇರ್ಪಾನ್ ಸಾವಿಗೀಡಾದಿದ್ದಾನೆ ಎಂಬ ಮಾಹಿತಿ ದೊರೆತಿದೆ.

ಓದಿ: ಕುಡಿಯುವ ನೀರಿಗಾಗಿ ನಡೆದ ಜಗಳ ಮಹಿಳೆ ಕೊಲೆಯಲ್ಲಿ ಅಂತ್ಯ

ವಿಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ನವೀನ್‌ನ​ನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.