ETV Bharat / state

ಜನರ ಮನೆ ಬಾಗಿಲಿಗೆ ತಲುಪಿಸಲು ಸಕಾಲಕ್ಕೆ ಮತ್ತಷ್ಟು ಹೊಸ ಸರ್ಕಾರಿ ಸೇವೆ ಸೇರ್ಪಡೆ

ಸಕಾಲ ಕಾಯ್ದೆಯ ಅಡಿ ಮತ್ತಷ್ಟು ಹೊಸ ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ.

more-government-services-added-for-sakala
ಜನರ ಮನೆ ಬಾಗಿಲಿಗೆ ತಲುಪಿಸಲು ಸಕಾಲಕ್ಕೆ ಮತ್ತಷ್ಟು ಹೊಸ ಸರ್ಕಾರಿ ಸೇವೆ ಸೇರ್ಪಡೆ
author img

By ETV Bharat Karnataka Team

Published : Jan 15, 2024, 7:43 PM IST

ಬೆಂಗಳೂರು : ಸಕಾಲ ಕಾಯ್ದೆ ಅಡಿ ಈಗಾಗಲೇ ಜನರಿಗೆ ಹಲವು ಸೇವೆಗಳನ್ನು ಒದಗಿಸಲಾಗುತ್ತಿದೆ. ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಲು ಸಕಾಲ ಹೆಚ್ಚು ಅನುಕೂಲವಾಗಿದೆ. ಇದೀಗ ಮತ್ತಷ್ಟು ಸೇವೆಗಳನ್ನು ಹೊಸದಾಗಿ ಸಕಾಲಕ್ಕೆ ಸೇರಿಸಲಾಗಿದೆ.

ವೈದ್ಯಕೀಯ ಶಿಕ್ಷಣ ಇಲಾಖೆ ಮತ್ತು ಅಧೀನ ಇಲಾಖೆಗಳಾದ ಕರ್ನಾಟಕ ರಾಜ್ಯ ಶುಶ್ರೂಷೆ ಪರಿಷತ್​​, ಕರ್ನಾಟಕ ರಾಜ್ಯ ಅರೆವೈದ್ಯಕೀಯ ಮಂಡಳಿ, ಕರ್ನಾಟಕ ರಾಜ್ಯ ಶುಶ್ರೂಷೆ ಪರೀಕ್ಷಾ ಮಂಡಳಿ ಹಾಗೂ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ 130 ಹೊಸ ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಹಾಗೂ ಅಧೀನ ಇಲಾಖೆಗಳಾದ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸಂಶೋಧನೆ ಮತ್ತು ತರಬೇತಿ ಇಲಾಖೆ ಈಗಾಗಲೇ 65 ಸೇವೆಗಳನ್ನು ನೀಡುತ್ತಿದೆ. ಜೊತೆಗೆ ಹೊಸದಾಗಿ 63 ಸೇವೆಗಳನ್ನು ನೀಡಲು ಮುಂದಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಈಗಾಗಲೇ 22 ಸೇವೆಗಳನ್ನು ನೀಡುತ್ತಿದ್ದು, ಹೊಸದಾಗಿ 16 ಸೇವೆಗಳನ್ನು ನೀಡಲು ಪ್ರಸ್ತಾವನೆ ಸಲ್ಲಿಸಿದೆ.

500ಕ್ಕೂ ಹೆಚ್ಚು ಹೊಸ ಸೇವೆ: ಅದೇ ರೀತಿ ಕೃಷಿ ಇಲಾಖೆ, ಪಶುಸಂಗೋಪನಾ ಮತ್ತು ಪಶುವೈದ್ಯ ಸೇವಾ ಇಲಾಖೆ, ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ, ನಗರಾಭಿವೃದ್ಧಿ ಇಲಾಖೆ, ಕಾನೂನು ಇಲಾಖೆ, ಸಾರಿಗೆ ಇಲಾಖೆ, ಒಳಾಡಳಿತ ಇಲಾಖೆ, ವಸತಿ ಇಲಾಖೆ, ಪ್ರವಾಸೋದ್ಯಮ ಇಲಾಖೆ, ಸಹಕಾರ ಇಲಾಖೆ, ಮಾಹಿತಿ ತಂತ್ರಜ್ಞಾನ ಜೈವಿಕ ತಂತ್ರಜ್ಞಾನ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಆರ್ಥಿಕ ಇಲಾಖೆ, ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯೂ ಹೊಸ ಸೇವೆಗಳ ಪ್ರಸ್ತಾವನೆ ಸಲ್ಲಿಸಿದ್ದು, ಜನರಿಗೆ ಶೀಘ್ರದಲ್ಲೇ 500ಕ್ಕೂ ಹೆಚ್ಚು ಹೊಸ ಸೇವೆಗಳು ಸಿಗಲಿದೆ.

ಸಕಾಲ ಸೇವೆಯನ್ನೂ ಡಿಜಿಟಲೀಕರಣಗೊಳಿಸುವ ಬಗ್ಗೆಯೂ ಚಿಂತನೆ ನಡೆದಿದೆ. ಕಂದಾಯ ಇಲಾಖೆಯಲ್ಲಿ ಈಗಾಗಲೇ ಎಲ್ಲಾ ಸೇವೆಯನ್ನು ಆನ್‌ಲೈನ್ ಮೂಲಕ ನೀಡಲಾಗುತ್ತಿದೆ. ಸಕಾಲ ಸೇವೆಯನ್ನೂ ಆನ್‌ಲೈನ್ ಮೂಲಕ ನೀಡುವ ಬಗ್ಗೆ ಸಚಿವ ಕೃಷ್ಣ ಬೈರೇಗೌಡರು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

ಸಚಿವರು ಹೇಳಿದ್ದೇನು?: ಪ್ರತಿ ಹಳ್ಳಿಯಲ್ಲೂ ಈಗ ಸೈಬರ್ ತಾಣಗಳಿವೆ. ಗ್ರಾಮ-1 ಸೇವೆಯನ್ನು ಮತ್ತಷ್ಟು ವಿಸ್ತರಿಸುವ ಮತ್ತು ಮೊಬೈಲ್‌ಗೂ ನೀಡುವ ಉದ್ದೇಶ ಸರ್ಕಾರಕ್ಕಿದೆ. ಇದು ಸಾಧ್ಯವಾದರೆ ಜನ ಮೊಬೈಲ್ ಮೂಲಕವೇ ಸಕಾಲ ಅರ್ಜಿ ಸಲ್ಲಿಸಿ ಸೇವೆ ಪಡೆಯಬಹುದು. ಸಕಾಲ ಸೇವೆ ಡಿಜಿಟಲೀಕರಣಗೊಂಡರೆ ಡಿಜಿಟಲ್ ಹೆಜ್ಜೆ ಗುರುತಿನ (ಫುಟ್ ಪ್ರಿಂಟ್) ಮೂಲಕ ಅರ್ಜಿ ಎಲ್ಲಿದೆ? ವಿಳಂಬಕ್ಕೆ ಕಾರಣವೇನು? ಎಂಬ ಕುರಿತ ಮಾಹಿತಿ ನಮಗೂ ಲಭ್ಯವಾಗುತ್ತದೆ. ಹೀಗಾಗಿ ಮುಂದಿನ 5 ವರ್ಷದಲ್ಲಿ ಸಕಾಲ ಸಂಪೂರ್ಣ ಡಿಜಿಟಲ್ ಆಗಬೇಕು ಎಂದು ಸಚಿವರು ಅಭಿಪ್ರಾಯಪಟ್ಟಿದ್ದಾರೆ.

'ಸಕಾಲ ಕಾಯ್ದೆ ಅಡಿ 100 ಇಲಾಖೆಗಳಿಂದ ಒಟ್ಟು 1201 ಸೇವೆಗಳನ್ನು ಜನರಿಗೆ ನೀಡಲಾಗುತ್ತಿದೆ. ಪ್ರಸ್ತುತ ಸಾಲಿನಲ್ಲಿ 29 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಈ ಪೈಕಿ ಶೇಕಡಾ 5ರಷ್ಟು ಸೇವೆಗಳನ್ನು ವಿಳಂಬವಾಗಿ ನೀಡಲಾಗಿದೆ. ಶೇಕಡಾ 07ರಷ್ಟು ಅರ್ಜಿಗಳನ್ನು ತಿರಸ್ಕರಿಸಲಾಗಿದೆ. ಸಕಾಲ ಕಾಯ್ದೆ 5(2) ರ ಪ್ರಕಾರ ಯಾವುದೇ ಅರ್ಜಿಯನ್ನು ತಿರಸ್ಕರಿಸುವಾಗ ಸೂಕ್ತ ಕಾರಣ ನಮೂದಿಸಬೇಕು' ಎಂದು ಅಪರ ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಹೇಳಿದ್ದಾರೆ.

ಇದನ್ನೂ ಓದಿ: ಅಕ್ಕಿ ಬದಲು ನಗದು ನೀಡುವ ರಾಜ್ಯ ಸರ್ಕಾರದ ಅನ್ನಭಾಗ್ಯ ಯೋಜನೆಯ ಸದ್ಯದ ಸ್ಥಿತಿಗತಿ ಏನಿದೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.