ETV Bharat / state

ಬಜೆಟ್‌ನಲ್ಲಿ ಜಾನಪದಕ್ಕೂ ಹೆಚ್ಚಿನ ಆದ್ಯತೆ ನೀಡಲು ಸಿಎಂ ಸಮ್ಮತಿ: ಸಚಿವ ಸಿ ಟಿ ರವಿ - City Ravi Minister of Kannada and Culture

ಜಾನಪದ ವಿಭಾಗಕ್ಕೆ ಅನುದಾನ ಹೆಚ್ಚಳ ಹಾಗೂ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮಾದರಿ ನಾಲ್ಕು ಹೆಚ್ಚುವರಿ ರಂಗಮಂದಿರಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಡಲು ಸಿಎಂ ಯಡಿಯೂರಪ್ಪ ಸಮ್ಮತಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ತಿಳಿಸಿದರು.

More grants to folklore division: CT Ravi
ಜನಪದ ವಿಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಸಚಿವ ಸಿ. ಟಿ. ರವಿ
author img

By

Published : Feb 12, 2020, 7:26 PM IST

ಬೆಂಗಳೂರು: ಜನಪದ ಉತ್ತೇಜಿಸಲು ಅನುದಾನ ಹೆಚ್ಚಳ ಹಾಗೂ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಮಾದರಿ ನಾಲ್ಕು ಹೆಚ್ಚುವರಿ ರಂಗಮಂದಿರಗಳ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಹಣ ಮೀಸಲಿಡಲು ಸಿಎಂ ಯಡಿಯೂರಪ್ಪ ಸಮ್ಮತಿಸಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ ಟಿ ರವಿ ತಿಳಿಸಿದರು.

ಜಾನಪದ ವಿಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು: ಸಚಿವ ಸಿ ಟಿ ರವಿ

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಇಂದು ಜಾನಪದ ಲೋಕ ಬೆಳ್ಳಿಹಬ್ಬದ ಲಾಂಛನ ಬಿಡುಗಡೆ ಮಾಡಿ ಮಾತನಾಡಿದ ಅವರು, ನಿನ್ನೆ ಸಿಎಂ ಅಧ್ಯಕ್ಷತೆಯಲ್ಲಿ ಸಾಹಿತಿ, ಕಲಾವಿದರು, ಸಾಂಸ್ಕೃತಿಕ ಲೋಕದ ದಿಗ್ಗಜರೊಂದಿಗೆ ಬಜೆಟ್ ಪೂರ್ವ ಸಭೆ ನಡೆಸಲಾಯಿತು. ಸುಧಾಮೂರ್ತಿಯವರ ಅಧ್ಯಕ್ಷತೆಯ ಪ್ರವಾಸೋದ್ಯಮ ಟಾಸ್ಕ್‌ಫೋರ್ಸ್ ನೀಡಿರುವ ವರದಿಯನ್ವಯ ಅನುದಾನ ಬಿಡುಗಡೆ ಮಾಡಲು ಸಿಎಂ ಒಪ್ಪಿದ್ದಾರೆ‌ ಎಂದರು.

ಪ್ರವಾಸೋದ್ಯಮ ಇಲಾಖೆಗೆ ₹1,500 ಕೋಟಿ ಅನುದಾನಕ್ಕೆ ಬೇಡಿಕೆ ಇಟ್ಟಿದ್ದೇವೆ. ಕರ್ನಾಟಕ ದರ್ಶನ ಯೋಜನೆ ಸದ್ಯ ಎಸ್​ಸಿ,ಎಸ್​ಟಿ ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತ. ಇದರಿಂದ ಮಕ್ಕಳ‌ ಮನಸ್ಸಿನಲ್ಲಿ ಜಾತಿ ವಿಷಬೀಜ ಬಿತ್ತುವಂತಾಗುತ್ತಿದೆ. ಹೀಗಾಗಿ ಯೋಜನೆಯನ್ನು 8 ಮತ್ತು 9 ತರಗತಿಯ ಎಲ್ಲ ವಿದ್ಯಾರ್ಥಿಗಳಿಗೂ ವಿಸ್ತರಿಸಲು ಮನವಿ ಮಾಡಿದ್ದೇವೆ ಎಂದರು.

ಮೈಸೂರಿನ ಪಾರಂಪರಿಕ ಕಟ್ಟಡಗಳಿರುವ ಐದು ರಸ್ತೆಗಳನ್ನು ಗುರುತಿಸಲಾಗಿದೆ. ಅಲ್ಲಿನ ಕಟ್ಟಡಗಳನ್ನು ಅದೇ ಮಾದರಿಯಲ್ಲಿ ಅಭಿವೃದ್ದಿ ಪಡಿಸಬೇಕು ಎಂದು ಮೈಸೂರು ಜಿಲ್ಲಾಡಳಿತಕ್ಕೆ ಸೂಚನೆ ನೀಡಲಾಗಿದೆ. ಫೆಬ್ರವರಿ 16ರಂದು ಮೈಸೂರಿಗೆ ತೆರಳುತ್ತಿದ್ದೇನೆ. ಈ ವಿಚಾರವಾಗಿ ಅಲ್ಲಿ ಚರ್ಚಿಸಲಾಗುತ್ತದೆ ಎಂದರು.

ಕರ್ನಾಟಕ ಜಾನಪದ ಪರಿಷತ್ತಿನ ಅಧ್ಯಕ್ಷ ಟಿ. ತಿಮ್ಮೇಗೌಡ ಮಾತನಾಡಿ, ನಾಡೋಜ ಹೆಚ್ ಎಲ್‌ ನಾಗೇಗೌಡರ ಕನಸನ್ನು ನನಸಾಗಿಸುವ ಜಾನಪದ ಲೋಕಕ್ಕೆ ಬೆಳ್ಳಿಹಬ್ಬದ ಸಂಭ್ರಮ. ಹಾಗಾಗಿ, ಫೆಬ್ರವರಿ 16ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಇಡೀ ದಿನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವನ್ನು ಸಿಎಂ ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ ಎಂದರು.

ಫೆಬ್ರವರಿ 17 ಮತ್ತು 18ರಂದು ರಾಮನಗರ ಬಳಿಯ ಜನಪದ ಲೋಕದಲ್ಲಿ ಲೋಕೋತ್ಸವವನ್ನೂ ಹಮ್ಮಿಕೊಳ್ಳಲಾಗಿದೆ. ಹಿರಿಯ ಸಾಹಿತಿ ಪ್ರೊ. ಹಂಪಾ ನಾಗರಾಜಯ್ಯ ಲೋಕೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಸಚಿವರು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.