ಬೆಂಗಳೂರು: ರೈತ ಗಣತಂತ್ರ ಪಥಸಂಚಲನದ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾಗೆ ಹೆಚ್ಚಿನ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.
ರೈತರಿಂದ ಟ್ರ್ಯಾಕ್ಟರ್ ಚಳವಳಿ ನಡೆಯುತ್ತಿರುವ ಹಿನ್ನೆಲೆ ಸಿಎಂ ಬಿಎಸ್ವೈ ನಿವಾಸ ಹಾಗೂ ಗೃಹ ಕಚೇರಿ ಕೃಷ್ಣಾ ಬಳಿ ಪೊಲೀಸ್ ಸರ್ಪಗಾವಲು ಹಾಕಲಾಗಿದೆ. ಕುಮಾರ ಕೃಪಾ ರಸ್ತೆಯಲ್ಲಿ ಅತಿ ಹೆಚ್ಚು ಪೊಲೀಸರ ನಿಯೋಜನೆ ಮಾಡಲಾಗಿದ್ದು, 6 ರಿಂದ 8 ಬಿಎಂಟಿಸಿ ಬಸ್ಗಳಲ್ಲಿ ಪೊಲೀಸರು ಬಂದಿದ್ದಾರೆ. ಕುಮಾರ ಕೃಪಾ ಗೆಸ್ಟ್ ಹೌಸ್ ಎದುರು ಬಸ್ಗಳನ್ನು ನಿಲ್ಲಿಸಲಾಗಿದ್ದು, ಇಡೀ ರಸ್ತೆಯನ್ನು ಪೊಲೀಸರು ನಿಯಂತ್ರಣಕ್ಕೆ ಪಡೆದುಕೊಂಡಿದ್ದಾರೆ.
ಓದಿ:ರಾಜ್ಯಾದ್ಯಂತ 72 ನೇ ಗಣರಾಜ್ಯೋತ್ಸವದ ಸಂಭ್ರಮ.. ಸಚಿವರು, ಶಾಸಕರಿಂದ ಧ್ವಜಾರೋಹಣ
ಸುಮಾರು 400 ರಿಂದ 500 ಜನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಸಿಎಂ ಬಿಎಸ್ವೈ ನಿವಾಸಕ್ಕೆ ರೈತರಿಂದ ಮುತ್ತಿಗೆ ಹಾಕುವ ಸಾಧ್ಯತೆ ಇದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ಹೆಚ್ಚಿನ ಭದ್ರತೆ ಒದಗಿಸಿದ್ದು, ಸ್ಥಳದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಖಾಕಿ ಕಣ್ಗಾವಲು ಹಾಕಲಾಗಿದೆ.