ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪರೀಕ್ಷಾ ಸಾಮರ್ಥ್ಯ ಹೆಚ್ಚುತ್ತಿದ್ದು, ಇದೀಗ 2 ಲಕ್ಷ ಕೊರೊನಾ ಪರೀಕ್ಷೆ ನಡೆಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಇಂದಿಗೆ ರಾಜ್ಯದಲ್ಲಿ 2.03 ಲಕ್ಷ ಕೋವಿಡ್-19 ಮಾದರಿಗಳನ್ನು ಪರೀಕ್ಷಿಸಲಾಗಿದ್ದು, ಕಳೆದ 16 ದಿನಗಳಲ್ಲಿ 1ಲಕ್ಷಕ್ಕೂ ಅಧಿಕ ಪರೀಕ್ಷೆ ನಡೆಸಲಾಗಿದೆ. ಈಗ ನಮ್ಮಲ್ಲಿ 57 ಕೋವಿಡ್ ಲ್ಯಾಬ್ ಕಾರ್ಯನಿರ್ವಹಿಸುತ್ತಿವೆ. ನಮ್ಮ ಎಲ್ಲಾ ಅಧಿಕಾರಿಗಳು, ವೈದ್ಯರು, ಲ್ಯಾಬ್ ಟೆಕ್ನಿಷಿಯನ್ಸ್ಗಳ ನಿರಂತರ ಪರಿಶ್ರಮಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.