ETV Bharat / state

ಮೈಸೂರು ದಸರಾ ಹಾಗೂ ವಿಜಯದಶಮಿ ರಜೆ: ಕೆಎಸ್​ಆರ್​ಟಿಸಿಯಿಂದ 2000 ಕ್ಕೂ ಹೆಚ್ಚು ವಿಶೇಷ ಸಾರಿಗೆ ವ್ಯವಸ್ಥೆ - SPECIAL TRANSPORT ARRANGMENTS

ನಾಡ ಹಬ್ಬ ಹಾಗೂ ಹಬ್ಬಕ್ಕಾಗಿ ಇರುವ ದಸರಾ ರಜೆಯ ಕಾರಣದಿಂದ ಪ್ರಯಾಣಿಕರಿಗಾಗಿ 2000 ಕ್ಕೂ ಅಧಿಕ ಬಸ್​ಗಳ ವ್ಯವಸ್ಥೆಯನ್ನು ಕರ್ನಾಟಕ ಸಾರಿಗೆ ವ್ಯವಸ್ಥೆ ಮಾಡಿದೆ.

ಮೈಸೂರು ದಸರಾ
ಮೈಸೂರು ದಸರಾ
author img

By ETV Bharat Karnataka Team

Published : Oct 14, 2023, 8:21 AM IST

ಬೆಂಗಳೂರು: ನಾಡಹಬ್ಬ ಮೈಸೂರು ದಸರಾ ಹಾಗೂ ದಸರಾ ರಜೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕಾಗಿ 2,000ಕ್ಕೂ ಹೆಚ್ಚಿನ ಬಸ್​ಗಳ ವಿಶೇಷ ಸಾರಿಗೆ ವ್ಯವಸ್ಥೆಯನ್ನು ಕೆಎಸ್​ಆರ್​ಟಿಸಿ ಕಲ್ಪಿಸಿದೆ. ಹಬ್ಬಕ್ಕಾಗಿ ಊರಿಗೆ ತೆರಳುವ ಮತ್ತು ರಜೆ ಮುಗಿಸಿ ವಾಪಸ್​ ಆಗಲು ಅನುಕೂಲವಾಗುವಂತೆ ಹೆಚ್ಚುವರಿ ವಿಶೇಷ ಬಸ್ ಸೌಲಭ್ಯ ಒದಗಿಸುತ್ತಿದೆ.

ಮೈಸೂರು ದಸರಾ-2023ನೇ ಸಾಲಿನ ದಸರಾ ಮಹೋತ್ಸವದ ನಿಮಿತ್ತ ರಾಜ್ಯದ ಹಾಗೂ ದೇಶದ ವಿವಿಧ ಕಡೆಗಳಿಂದ ದಸರಾ ವೀಕ್ಷಣೆಗೆ ಮೈಸೂರು ನಗರಕ್ಕೆ ಬರುವ ಪ್ರವಾಸಿಗರ ಹಾಗೂ ರಜೆಗಳ ಪ್ರಯುಕ್ತ ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ಪ್ರಸ್ತುತ ಕಾರ್ಯಾಚರಣೆ ಮಾಡಲಾಗುತ್ತಿರುವ ಕರ್ನಾಟಕ ಸಾರಿಗೆ(ವೇಗದೂತ) ರಾಜಹಂಸ, ಸ್ಲಿಪರ್, ಐರಾವತ, ಐರಾವತ ಕ್ಲಬ್ ಕ್ಲಾಸ್ (ಮಲ್ಟಿ ಆಕ್ಸಲ್‌) ಇ.ವಿ ಪವರ್ ಪ್ಲಸ್, ಅಂಬಾರಿ ಕ್ಲಬ್ ಕ್ಲಾಸ್, ಅಂಬಾರಿ ಉತ್ಸವ್ ಹಾಗೂ ಪಲ್ಲಕ್ಕಿ ಸಾರಿಗೆ ಸೇವೆಗಳ ಜೊತೆಗೆ ಹೆಚ್ಚುವರಿ ಬಸ್‌ಗಳ ವಿಶೇಷ ಸಾರಿಗೆ ಸೇವೆಗಳ ಸೌಲಭ್ಯವನ್ನು ಒದಗಿಸಲು ಕ್ರಮ ಕೈಗೊಳ್ಳಲಾಗಿದೆ.

ದಸರಾ ಹಬ್ಬದ ರಜೆಗಳ ಪ್ರಯುಕ್ತ ಕೆಎಸ್​​ಆರ್​ಟಿಸಿ, ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ದಿನಾಂಕ 20.10.2023 ರಿಂದ 26.10.2023 ರವರೆಗೆ ಬೆಂಗಳೂರಿನಿಂದ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಗೆ 2000ಕ್ಕೂ ಹೆಚ್ಚು ವಾಹನಗಳ ವಿಶೇಷ ಸಾರಿಗೆ ವ್ಯವಸ್ಥೆ ಮಾಡಿದೆ. ಈ ಬಸ್​ಗಳನ್ನು ಕೆಂಪೇಗೌಡ ಬಸ್ ನಿಲ್ದಾಣ, ಮೈಸೂರು ರಸ್ತೆ ಬಸ್ ನಿಲ್ದಾಣ ಮತ್ತು ಶಾಂತಿನಗರದ ಬಿಎಂಟಿಸಿ ಬಸ್ ನಿಲ್ದಾಣದಿಂದ ಕಾರ್ಯಾಚರಣೆ ಮಾಡಲಾಗುವುದು, ನಂತರ ರಾಜ್ಯದ ಮತ್ತು ಅಂತಾರಾಜ್ಯದ ವಿವಿಧ ಸ್ಥಳಗಳಿಂದ ಬೆಂಗಳೂರಿಗೆ 24/10/2023 ರಿಂದ 29/10/2023 ರವರೆಗೆ ವಿಶೇಷ ಹೆಚ್ಚುವರಿ ಬಸ್​ಗಳ ಕಾರ್ಯಾಚರಣೆ ಮಾಡಲಿದೆ.

ಬೆಂಗಳೂರಿನಿಂದ ರಾಜ್ಯದ ಧರ್ಮಸ್ಥಳ, ಕುಕ್ಕೆಸುಬ್ರಹ್ಮಣ್ಯ, ಶೃಂಗೇರಿ, ಹೊರನಾಡು, ಶಿವಮೊಗ್ಗ, ಮಡಿಕೇರಿ, ಮಂಗಳೂರು, ದಾವಣಗೆರೆ, ಗೋಕರ್ಣ, ಕೊಲ್ಲೂರು, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಕಾರವಾರ, ಬಳ್ಳಾರಿ. ಹೊಸಪೇಟೆ, ಕಲಬುರಗಿ, ರಾಯಚೂರು ಮುಂತಾದ ಸ್ಥಳಗಳಿಗೆ ಹಾಗೂ ನೆರೆರಾಜ್ಯಗಳಲ್ಲಿನ ಹೈದರಾಬಾದ್, ಚೆನ್ನೈ, ಊಟಿ, ಕೊಡೈಕೆನಾಲ್‌, ಸೇಲಂ, ತಿರುಚಿನಾಪಳ್ಳಿ, ಪುದುಕೋಟೆ, ಮಧುರೈ, ಪಣಜಿ, ಶಿರಡಿ, ಪೂನಾ, ಏರ್ನಾಕುಲಂ, ಪಾಲ್ಗಾಟ್‌ ಹಾಗೂ ಇತರೆ ಸ್ಥಳಗಳಿಗೆ ವಿಶೇಷ ಸಾರಿಗೆಗಳನ್ನು ಬಿಡಲಾಗುವುದು ಎಂದು ಕೆಎಸ್​ಆರ್​ಟಿಸಿ ಪ್ರಕಟಣೆ ಮೂಲಕ ತಿಳಿಸಿದೆ.

ಮೈಸೂರು ದಸರಾ ಪ್ರಯುಕ್ತ ಕೆಎಸ್​ಆರ್​ಟಿಸಿಯಿಂದ 600 ವಿಶೇಷ ಬಸ್ ವ್ಯವಸ್ಥೆ: ಬೆಂಗಳೂರಿನ ಮೈಸೂರು ರಸ್ತೆ ಬಸ್ ನಿಲ್ದಾಣದಿಂದ ಮೈಸೂರಿಗೆ ಪ್ರತ್ಯೇಕವಾಗಿ 250 ಹೆಚ್ಚುವರಿ ವಾಹನಗಳ ಕಾರ್ಯಾಚರಣೆ ಹಾಗೂ ಮೈಸೂರಿನ ಸುತ್ತಮುತ್ತಲ ಪ್ರೇಕ್ಷಣೀಯ, ಧಾರ್ಮಿಕ ಹಾಗೂ ಪ್ರವಾಸಿ ತಾಣಗಳಾದ ಚಾಮುಂಡಿ ಬೆಟ್ಟ, ಕೆ.ಆರ್.ಎಸ್.ಅಣೆಕಟ್ಟು/ಬೃಂದಾವನ ಉದ್ಯಾನ, ಶ್ರೀರಂಗಪಟ್ಟಣ, ನಂಜನಗೂಡು ಸೇರಿದಂತೆ ಮಡಿಕೇರಿ, ಮಂಡ್ಯ, ಮಳವಳ್ಳಿ, ಹೆಚ್.ಡಿ.ಕೋಟೆ, ಚಾಮರಾಜನಗರ, ಹುಣಸೂರು, ಕೆ.ಆರ್.ನಗರ, ಗುಂಡ್ಲುಪೇಟೆ ಇತ್ಯಾದಿ ಸ್ಥಳಗಳಿಗೆ ಸಾರಿಗೆ ಸಂಪರ್ಕ ಕಲ್ಪಿಸಲು 350 ಹೆಚ್ಚುವರಿ ವಾಹನಗಳು ಸೇರಿ ಒಟ್ಟಾರೆ 600 ದಸರಾ ವಿಶೇಷ ವಾಹನಗಳ ಸಂಚಾರಕ್ಕೆ ಕೆಎಸ್​ಆರ್​ಟಿಸಿ ವ್ಯವಸ್ಥೆ ಮಾಡಿದೆ.

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೈಸೂರಿಗೆ "ಫ್ಲೈ ಬಸ್" (Fly Bus) ಮೂಲಕ ನೇರ ಸಾರಿಗೆ ಸೌಲಭ್ಯ ಕಲ್ಪಿಸಲಾಗುತ್ತಿದೆ. ಇ-ಟಿಕೆಟ್ ಬುಕಿಂಗ್‌ನ್ನು www.ksrtc.karnataka.gov.in ವೆಬ್ ಸೈಟ್ ಅಥವಾ ಮೊಬೈಲ್ ಮುಖಾಂತರ ಮಾಡಬಹುದಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಮೈಸೂರು ಗ್ರಾಮಾಂತರ ಹಾಗೂ ನಗರ ಬಸ್ ನಿಲ್ದಾಣಗಳಲ್ಲಿ ಸಾರ್ವಜನಿಕ ಪ್ರಯಾಣಿಕರಿಗೆ ಹಾಗೂ ಪ್ರವಾಸಿಗರಿಗೆ ಕರಾರಸಾನಿಗಮದ ಸಾರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಲು "ಮಾಹಿತಿ ಕೇಂದ್ರ” ವನ್ನು ಪ್ರತ್ಯೇಕವಾಗಿ ತೆರೆಯಲಾಗುತ್ತದೆ. ಸಾರ್ವಜನಿಕ ಪ್ರಯಾಣಿಕರು ಕರ್ನಾಟಕ ಹಾಗೂ ನೆರೆರಾಜ್ಯಗಳಾದ ಆಂಧ್ರಪ್ರದೇಶ, ತೆಲಂಗಾಣ, ಕೇರಳ, ಗೋವಾ, ತಮಿಳುನಾಡು, ಮಹಾರಾಷ್ಟ್ರ ಹಾಗೂ ಮದುಚೇರಿ ರಾಜ್ಯಗಳಲ್ಲಿರುವ ಒಟ್ಟು 703 ಗಣಕೀಕೃತ ಮುಂಗಡ ಆಸನಗಳನ್ನು ಕಾಯ್ದಿರಿಸುವ ಕೌಂಟರ್‌ಗಳ ಮೂಲಕ ನಿಗಮದ ಸಾರಿಗೆಗಳಿಗೆ ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸಬಹುದಾಗಿದೆ.

ನಾಲ್ಕು ಅಥವಾ ಹೆಚ್ಚು ಪ್ರಯಾಣಿಕರು ಒಟ್ಟಾಗಿ ಮುಂಗಡ ಟಿಕೆಟ್​ ಕಾಯ್ದಿರಿಸಿದಲ್ಲಿ ಶೇಕಡ 5 ರಷ್ಟು ರಿಯಾಯಿತಿ ನೀಡಲಾಗುವುದು ಹಾಗೂ ಹೋಗುವ ಮತ್ತು ಬರುವ ಪ್ರಯಾಣದ ಟಿಕೆಟ್‌ನ್ನು ಒಟ್ಟಿಗೆ ಕಾಯ್ದಿರಿಸಿದಾಗ ಬರುವ ಪ್ರಯಾಣ ದರದಲ್ಲಿ ಶೇಕಡ 10 ರಷ್ಟು ರಿಯಾಯಿತಿ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಸಾರಿಗೆಗಳನ್ನು ಮುಂಗಡವಾಗಿ ಆಸನಗಳನ್ನು ಕಾಯ್ದಿರಿಸುವ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಪ್ರಯಾಣಿಕರು ಬಸ್ ನಿಲ್ದಾಣಗೊಳಗೆ ತೆರಳುವ ಮುನ್ನ ಮುಂಗಡವಾಗಿ ಕಾಯ್ದಿರಿಸಲಾಗಿರುವ ಟಿಕೇಟ್​​ಗಳ ಮೇಲೆ ನಮೂದಿಸಲಾಗಿರುವ ಬಸ್ ನಿಲ್ದಾಣ/ಪಿಕ್‌ಅಪ್ ಪಾಯಿಂಟ್‌ನ ಹೆಸರನ್ನು ಗಮನಿಸುವಂತೆ ಸಾರಿಗೆ ನಿಗಮ ಕೋರಿದೆ. ಅಲ್ಲದೇ, ನಿಗಮದ ಕಾರ್ಯಾಚರಣೆ ವ್ಯಾಪ್ತಿಯಲ್ಲಿನ ಎಲ್ಲಾ ತಾಲೂಕು/ಜಿಲ್ಲಾ ಬಸ್ ನಿಲ್ದಾಣಗಳಿಂದ ಸಂಚಾರ ಒತ್ತಡಕ್ಕನುಗುಣವಾಗಿ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವುದು ಎಂದು ತಿಳಿಸಿದೆ.

ಇದನ್ನೂ ಓದಿ: ದಸರಾ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಕೆಎಸ್​​ಆರ್​ಟಿಸಿಯಿಂದ ಪ್ಯಾಕೇಜ್ ಟೂರ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.